ಜಮ್ಮು ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ

ಜಮ್ಮು ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ

ಜಮ್ಮು ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭೆಗಳಿಗೆ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಜಮ್ಮುವಿನಲ್ಲಿ ಮೂರು ಹಂತ ಹಾಗೂ ಹರಿಯಾಣದಲ್ಲಿ ಒಂದು ಹಂತದಲ್ಲಿ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ರಾಷ್ಟ್ರಿಯ ಚಲನಚಿತ್ರ ಪ್ರಶಸ್ತಿ ಪ್ರಕಟ – ಕನ್ನಡಕ್ಕೆ ಈ ಬಾರಿ ಜಾಕ್‌ಪಾಟ್! – ಯಾವ್ಯಾವ ಸಿನಿಮಾಗೆ ಬಂತು ಪ್ರಶಸ್ತಿ?

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ನಡೆಸಿ ಮಾತನಾಡಿದ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್‌ ಕುಮಾರ್‌, ಜಮ್ಮು-ಕಾಶ್ಮೀರದಲ್ಲಿ 3 ಹಂತಗಳಲ್ಲಿ (ಆ.20, ಆ.29, ಸೆ.5) ಚುನಾವಣೆ ನಡೆಯಲಿದೆ. ಹರಿಯಾಣದಲ್ಲಿ ಅ.1 ರಂದು ಮತದಾನ ನಡೆಯಲಿದೆ. ಅಕ್ಟೋಬರ್‌ 4ಕ್ಕೆ ಎರಡೂ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಈ ವೇಳೆ ಆಯುಕ್ತರಾದ ಸುಖ್ಬಿರ್ ಸಿಂಗ್, ಜ್ಞಾನೇಶ್ ಕುಮಾರ್ ಭಾಗಿಯಾಗಿದ್ದರು.

ಜಮ್ಮು ಕಾಶ್ಮೀರದಲ್ಲಿ 90 ವಿಧಾನಸಭೆ ಕ್ಷೇತ್ರಗಳಿದ್ದು, 87.09 ಲಕ್ಷ ಮತದಾರರು ನೋಂದಣಿಯಾಗಿದ್ದಾರೆ. 44.46 ಪುರುಷರು, 42 ಲಕ್ಷ ಮಹಿಳಾ ಮತದಾರರು ಇದ್ದಾರೆ. 11,838 ಮತದಾನ ಕೇಂದ್ರಗಳು ನಿರ್ಮಾಣಗೊಂಡಿವೆ. ಗ್ರಾಮೀಣ ಭಾಗದಲ್ಲಿ 9,506 ಹಾಗೂ ನಗರ ಭಾಗದಲ್ಲಿ 2,332 ಮತದಾನ ಬೂತ್‌ಗಳ ನಿರ್ಮಾಣವಾಗಿದೆ.

ಹರಿಯಾಣದಲ್ಲಿ 90 ವಿಧಾನಸಭೆ ಕ್ಷೇತ್ರಗಳಿದ್ದು, 2.01 ಕೋಟಿ ಮತದಾರರು ನೋಂದಣಿಯಾಗಿದ್ದಾರೆ. 20,629 ಮತದಾನ ಕೇಂದ್ರಗಳ ನಿರ್ಮಾಣವಾಗಿವೆ. ಗ್ರಾಮೀಣ ಭಾಗದಲ್ಲಿ 13,497 ಹಾಗೂ ನಗರ ಭಾಗದಲ್ಲಿ 7132 ಮತದಾನ ಕೇಂದ್ರಗಳಿವೆ.

Shwetha M

Leave a Reply

Your email address will not be published. Required fields are marked *