ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ – ದೆಹಲಿಯಿಂದ ಕರ್ನಾಟಕಕ್ಕೆ ಮಲ್ಲಿಕಾರ್ಜುನ ಖರ್ಗೆ ದಿಢೀರ್ ಭೇಟಿ
ಮುಡಾ ಹಗರಣದಿಂದಾಗಿ ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಈ ಪ್ರಕರಣ ಸಂಬಂಧ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದಿಢೀರ್ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಕಾರಿನಲ್ಲಿ ಎಸಿ ಹಾಕಿ ಮಲಗೋ ಮುನ್ನ ಎಚ್ಚರ! – ಮಲಗಿದ್ದಲ್ಲೇ ಪ್ರಾಣ ಬಿಟ್ಟ ವ್ಯಕ್ತಿ
ಮುಡಾ ಸೈಟ್ ಹಂಚಿಕೆ ವಿಚಾರದಲ್ಲಿ ಅಕ್ರಮವಾಗಿ ಸಿಎಂ ಪತ್ನಿಯವರಿಗೆ 14 ಸೈಟ್ಗಳನ್ನು ನೀಡಲಾಗಿರುವ ವಿಚಾರದಲ್ಲಿ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯರ ಕೈಬಿಡಬಾರದು ಎಂದು ಹಠ ತೊಟ್ಟಿರುವ ಕಾಂಗ್ರೆಸ್ ಹೈಕಮಾಂಡ್, ರಾಜ್ಯ ನಾಯಕರಿಗೆ ಈಗಾಗಲೇ ಅದರ ಬಗ್ಗೆ ಸ್ಪಷ್ಟ ಸಂದೇಶ ನೀಡಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದಿಢೀರ್ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ದೆಹಲಿಯಿಂದ ಪ್ರಯಾಣ ಬೆಳಸಿರುವ ಮಲ್ಲಿಕಾರ್ಜುನ ಖರ್ಗೆ, ಕೆಲ ಹೊತ್ತಿನಲ್ಲಿಯೇ ತಮ್ಮ ಸದಾಶಿವನಗರದ ನಿವಾಸಕ್ಕೆ ಆಗಮಿಸಲಿದ್ದಾರೆ. ಅಲ್ಲಿ ರಾಜ್ಯ ನಾಯಕರೊಂದಿಗೆ ಮುಂದಿನ ಹೋರಾಟದ ರೂಪುರೇಷೆಗಳು ಸಿದ್ದಗೊಳ್ಳುವ ಸಾಧ್ಯತೆ ಇದೆ