ಬಾಂಗ್ಲಾ ಟೆಸ್ಟ್ ಸರಣಿಗೆ ಕನ್ನಡಿಗ KL ರಾಹುಲ್ ಗೂ ಅದೃಷ್ಟ! – ಟೀಂ ಇಂಡಿಯಾ ಸಂಭಾವ್ಯ ಪಟ್ಟಿ!
ಶ್ರೀಲಂಕಾ ವಿರುದ್ಧದ ಸರಣಿ ಬಳಿಕ ಟೀಂ ಇಂಡಿಯಾಗೆ ಲಾಂಗ್ ಬ್ರೇಕ್ ಸಿಕ್ಕಿದೆ. ಸೆಪ್ಟಂಬರ್ 19 ರಂದು ಬಾಂಗ್ಲಾದೇಶ ವಿರುದ್ಧ ಆರಂಭವಾಗುವ ಎರಡು ಪಂದ್ಯಗಳ ಟೆಸ್ಟ್ ಸರಣಿ ಮೂಲಕ ಮತ್ತೆ ಇಂಟರ್ನ್ಯಾಷನಲ್ ಕ್ರಿಕೆಟ್ಗೆ ಮರಳಲಿದೆ. ಮುಂದಿನ ಸರಣಿಗೆ ಟೀಂ ಇಂಡಿಯಾಗೆ ಇನ್ನೂ ಒಂದು ತಿಂಗಳು ಟೈಂ ಇದೆ. ಸೋ ಟೀಂ ಇಂಡಿಯಾದ ಸ್ಟಾರ್ ಪ್ಲೇಯರ್ಸ್ ಸೇರಿದಂತೆ ಕ್ರಿಕೆಟಿಗರೆಲ್ಲಾ ದುಲೀಪ್ ಟ್ರೋಫಿಗೆ ರೆಡಿಯಾಗಿದೆ. ಆದ್ರೆ ದುಲೀಪ್ ಟ್ರೋಫಿಯಿಂದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ. ಇಲ್ಲಿ ಭಾರತೀಯ ಕ್ರಿಕೆಟ್ ಅಭಿಮಾನಿಗಳನ್ನ ಕಾಡ್ತಿರೋದು ಬಾಂಗ್ಲಾ ಟೆಸ್ಟ್ ಸರಣಿ. ಯಾಕೆ ಅನ್ನೋ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಸ್ಲಮ್ ಹುಡುಗ ಈಗ ಸೂಪರ್ ಸ್ಟಾರ್ – RCB ವೇಗಿಯ ರೇಂಜ್ ಫುಲ್ ಚೇಂಜ್
ಟೀಂ ಇಂಡಿಯಾ ಕೊನೆಯ ಬಾರಿಗೆ ಕಳೆದ ಮಾರ್ಚ್ ತಿಂಗಳಲ್ಲಿ ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಿತ್ತು. ಆ ಬಳಿಕ ಬಾಂಗ್ಲಾ ವಿರುದ್ಧದ ಸರಣಿಯೇ ಮೊದಲ ಟೆಸ್ಟ್ ಸರಣಿಯಾಗಲಿದೆ. ಬಾಂಗ್ಲಾ ಎದುರು ಎರಡು ಪಂದ್ಯಗಳ ಟೆಸ್ಟ್ ಸರಣಿ ಬಳಿಕ, ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ನಂತರ ಆಸ್ಟ್ರೇಲಿಯಾ ವಿರುದ್ಧ ಐದು ಪಂದ್ಯಗಳ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯನ್ನು ಆಡಬೇಕಿದೆ. ಈಗ ಕಾಡ್ತಿರೋ ಪ್ರಶ್ನೆ ಅಂದ್ರೆ ಟೀಂ ಇಂಡಿಯಾದ ಪ್ಲೇಯಿಂಗ್ 11 ಹೇಗಿರಲಿದೆ ಅನ್ನೋದು. ಯಾಕಂದ್ರೆ ಈಗಾಗ್ಲೇ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಭಾರತ ಮೂರಕ್ಕೆ ಮೂರೂ ಪಂದ್ಯಗಳನ್ನ ಕೈಚೆಲ್ಲಿಕೊಂಡು ಹೀನಾಯವಾಗಿ ಸೋಲು ಕಂಡಿತ್ತು. ಹೀಗಾಗಿ ಟೀಂ ಸೆಲೆಕ್ಷನ್ ಜೊತೆ ಪ್ಲೇಯಿಂಗ್ 11ನಲ್ಲೂ ಬದಲಾವಣೆ ತರೋಕೆ ಕೋಚ್ ಗೌತಮ್ ಗಂಭೀರ್ ಮತ್ತು ನಾಯಕ ರೋಹಿತ್ ಶರ್ಮಾ ಪ್ಲ್ಯಾನ್ ಮಾಡಿದ್ದಾರೆ. ಅಲ್ದೇ ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸರಣಿಯೂ ಭಾರತ ತಂಡದ ಹೆಡ್ ಕೋಚ್ ಆಗಿ ಗೌತಮ್ ಗಂಭೀರ್ಗೆ ಮೊದಲ ಟೆಸ್ಟ್ ಸವಾಲು ಆಗಲಿದೆ.
ಟೀಂ ಇಂಡಿಯಾ ಸಂಭಾವ್ಯ ಪಟ್ಟಿ!
ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಆರಂಭಿಕರಾಗಿ ನಾಯಕ ರೋಹಿತ್ ಶರ್ಮಾ ಮತ್ತು ಉಪನಾಯಕ ಶುಭ್ಮನ್ ಗಿಲ್ ಕಣಕ್ಕಿಳಿದಿದ್ರು. ಇದ್ರಲ್ಲಿ ರೋಹಿತ್ ಶರ್ಮಾ ಮೂರೂ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದ್ರೂ ಕೂಡ ಗಿಲ್ ಫೇಲ್ಯೂರ್ ಆಗಿದ್ರು. ಸೋ ಬಾಂಗ್ಲಾ ಟೆಸ್ಟ್ ಸರಣಿಗೆ ಗಿಲ್ ಬದಲಿಗೆ ಯಶಸ್ವಿ ಜೈಸ್ವಾಲ್ಗೆ ಚಾನ್ಸ್ ಕೊಡೋಕೆ ಟೀಂ ಮ್ಯಾನೇಜ್ಮೆಂಟ್ ಮುಂದಾಗಿದೆ. ಮೂರನೇ ಕ್ರಮಾಂಕದಲ್ಲಿ ಶುಭಮನ್ ಗಿಲ್ ಆಡಲಿದ್ದು, ನಾಲ್ಕನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಸೋ ಲೆಕ್ಕಾಚಾರದಲ್ಲಿದ್ದಾರೆ. ಹಾಗೇ ಕನ್ನಡಿಗ ಕೆಎಲ್ ರಾಹುಲ್ ಅವರು ಐದನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಇನ್ನು ಮೊದಲ ಆಯ್ಕೆಯ ವಿಕೆಟ್ ಕೀಪರ್ ಆಗಿ ರಿಷಭ್ ಪಂತ್ ಪ್ಲೇಯಿಂಗ್ XIನಲ್ಲಿ ಕಾಣಿಸಿಕೊಳ್ಳಲಿದ್ದು, ಆರನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಇನ್ನು ಸ್ಪಿನ್ ಬೌಲಿಂಗ್ ಆಲ್ರೌಂಡರ್ಗಳಾಗಿ ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಮತ್ತು ರವಿಚಂದ್ರನ್ ಅಶ್ವಿನ್ ಸ್ಥಾನ ಪಡೆಯುವ ಸಾಧ್ಯತೆ ಇದೆ. ಹಾಗೇ ವೇಗದ ಬೌಲರ್ಗಳಾಗಿ ಮೊಹಮ್ಮದ್ ಸಿರಾಜ್ ಮತ್ತು ಅರ್ಷದೀಪ್ ಸಿಂಗ್ ಸ್ಥಾನ ಗಿಟ್ಟಿಸಿಕೊಳ್ಳಬಹುದು. ಸದ್ಯ ಭಾರತದ ಪರ ಬಾಂಗ್ಲಾ ವಿರುದ್ಧದ ಸರಣಿಗೆ ಮೂವರು ಸ್ಪಿನ್ನರ್ಗಳನ್ನು ಆಡಿಸಲಾಗುತ್ತಿದೆ. ಆದರೆ, ವರ್ಕ್ಲೋಡ್ ಮ್ಯಾನೇಜ್ಮೆಂಟ್ ಮೂಲಕ ಜಸ್ಪ್ರೀತ್ ಬುಮ್ರಾ ಅವರಿಗೆ ಬಾಂಗ್ಲಾದೇಶ ಸರಣಿಯಿಂದ ವಿಶ್ರಾಂತಿಯನ್ನು ಮುಂದುವರಿಸಲಾಗಿದೆ. ಸೋ ಈ ಮೂಲಕ ಅಂತಿಮವಾಗಿ ಟೀಂ ಇಂಡಿಯಾದಲ್ಲಿ ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಬ್ ಪಂತ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಸಿರಾಜ್ ಮತ್ತು ಅರ್ಷದೀಪ್ ಸಿಂಗ್ ಚಾನ್ಸ್ ಪಡೆಯಬಹುದು.
ಭಾರತ ಮತ್ತು ಬಾಂಗ್ಲಾ ನಡುವಿನ ಟೆಸ್ಟ್ ಸರಣಿ ಟೀಂ ಇಂಡಿಯಾ ಪಾಲಿಗೆ ತುಂಬಾನೇ ಮಹತ್ವದ್ದಾಗಿದೆ. ಬಾಂಗ್ಲಾದೇಶದ ವಿರುದ್ಧ ಗೆದ್ದರೆ ಟೀಮ್ ಇಂಡಿಯಾ ನೇರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ತಲುಪಲಿದೆ. ಉಭಯ ರಾಷ್ಟ್ರಗಳ ನಡುವೆ 24 ವರ್ಷಗಳಿಂದ ಟೆಸ್ಟ್ ಪಂದ್ಯಗಳನ್ನು ನಡೆಸಲಾಗುತ್ತಿದೆ. ಇದುವರೆಗೂ ಒಟ್ಟು 13 ಪಂದ್ಯಗಳಲ್ಲಿ ಉಭಯ ತಂಡಗಳು ಮುಖಾಮುಖಿ ಆಗಿವೆ. ಭಾರತ 11 ಪಂದ್ಯಗಳಲ್ಲಿ ಜಯ ಸಾಧಿಸಿದ್ರೆ, 2 ಟೆಸ್ಟ್ ಪಂದ್ಯಗಳು ಡ್ರಾನಲ್ಲಿ ಅಂತ್ಯವಾಗಿವೆ. ಬಾಂಗ್ಲಾದೇಶ ಕಳೆದ 24 ವರ್ಷಗಳಿಂದ ಒಂದು ಟೆಸ್ಟ್ ಪಂದ್ಯವೂ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ಈ ವರ್ಷವೂ ಭಾರತವೇ ಗೆಲ್ಲುವ ಫೇವರೆಟ್ ಟೀಂ ಎನಿಸಿಕೊಂಡಿದೆ. ಆದ್ರೆ ಪಂದ್ಯಕ್ಕೂ ಮುನ್ನ ಯಾವುದೇ ತಂಡವನ್ನ ಸುಲಭವಾಗಿ ತೆಗೆದುಕೊಳ್ಳೋಕೆ ಸಾಧ್ಯ ಇಲ್ಲ. ಇತ್ತೀಚೆಗಷ್ಟೇ ನಡೆದ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯೇ ಬೆಸ್ಟ್ ಎಕ್ಸಾಂಪಲ್. ಬಲಿಷ್ಠ ಭಾರತದ ಮುಂದೆ ಸಿಂಹಳೀಯರು ವೀಕ್ ಎಂದೇ ಭಾವಿಸಲಾಗಿತ್ತು. ಆದ್ರೆ ಮೂರು ದಿನಗಳ ಏಕದಿನ ಸರಣಿಯಲ್ಲಿ ಒಂದೂ ಪಂದ್ಯವನ್ನ ಗೆಲ್ಲೋಕೆ ಬಿಡದೆ ಶ್ರೀಲಂಕಾ ಗೆದ್ದು ಬೀಗಿತ್ತು. ಹೀಗಾಗಿ ಬಾಂಗ್ಲಾ ನೆಲದಲ್ಲೂ ಕೂಡ ಟೀಂ ಇಂಡಿಯಾ ಸ್ಟ್ರಾಟಜಿ ಮಾಡಿಕೊಂಡೇ ಕಣಕ್ಕಿಳಿಯಬೇಕಾಗಿದೆ.