ಬಿಎಸ್‌ವೈ ಗೆ ಬಿಗ್‌ ರಿಲೀಫ್‌! – ಪೋಕ್ಸೋ ಕೇಸ್‌ ವಿಚಾರಣೆ ಸೆ.19ಕ್ಕೆ ಮುಂದೂಡಿದ ಕೋರ್ಟ್

ಬಿಎಸ್‌ವೈ ಗೆ ಬಿಗ್‌ ರಿಲೀಫ್‌! – ಪೋಕ್ಸೋ ಕೇಸ್‌ ವಿಚಾರಣೆ ಸೆ.19ಕ್ಕೆ ಮುಂದೂಡಿದ ಕೋರ್ಟ್

ಪೋಕ್ಸೋ ಕೇಸ್‌ ಸಂಬಂಧ ಕಾನೂನು ಹೋರಾಟ ನಡೆಸುತ್ತಿರುವ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪಗೆ ಕೊಂಚ ರಿಲೀಫ್‌ ಸಿಕ್ಕಿದೆ. ಬಿಎಸ್‌ವೈ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‍ನ ವಿಭಾಗೀಯ ಪೀಠ ಸೆ.19ಕ್ಕೆ ಮುಂದೂಡಿದೆ.

ಇದನ್ನೂ ಓದಿ: KLಗೆ ಚಾನ್ಸ್.. BUMRAH ವಾಪಸ್ – ಬಾಂಗ್ಲಾ ಬೇಟೆಗೆ RO ಬಾಯ್ಸ್ ರೆಡಿ!

ಬಿ. ಎಸ್‌ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನ ಮುಂದೂಡುವಂತೆ ಎಸ್‍ಪಿಪಿ ನಾಗೇಶ್ ನಾಯಕ್ ಮನವಿ ಮಾಡಿದರು. ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿದೆ.

ಏನಿದು ಪ್ರಕರಣ?

ಮಹಿಳೆಯೊಬ್ಬರು ತಮ್ಮ ಪುತ್ರಿಯ ಮೇಲೆ ಬಿಎಸ್‍ವೈ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಈ ಬಗ್ಗೆ ಅವರು ನೀಡಿದ ದೂರಿನ ಅಡಿ, ಮಾರ್ಚ್ 14ರಂದು ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ನಂತರ ಸರ್ಕಾರ ಇದನ್ನು ಸಿಐಡಿಗೆ ವರ್ಗಾಯಿಸಿತ್ತು. ಏಪ್ರಿಲ್ 12 ರಂದು ತನಿಖಾಧಿಕಾರಿಯ ಮುಂದೆ ಯಡಿಯೂರಪ್ಪ ಹಾಜರಾಗಿ ವಿಚಾರಣೆಗೆ ಸಹಕರಿಸಿದ್ದರು.

Shwetha M