ಐಸಿಸಿ ಟೆಸ್ಟ್​ ರ‍್ಯಾಂಕಿಂಗ್​ನಲ್ಲಿ ಧೂಳೆಬ್ಬಿಸಿದ ಟೀಮ್‌ ಇಂಡಿಯಾ ಕ್ರಿಕೆಟರ್ಸ್‌ –  ಟಾಪ್​ 10ನಲ್ಲಿ ಮೂವರು ಭಾರತೀಯರು

ಐಸಿಸಿ ಟೆಸ್ಟ್​ ರ‍್ಯಾಂಕಿಂಗ್​ನಲ್ಲಿ ಧೂಳೆಬ್ಬಿಸಿದ ಟೀಮ್‌ ಇಂಡಿಯಾ ಕ್ರಿಕೆಟರ್ಸ್‌ –  ಟಾಪ್​ 10ನಲ್ಲಿ ಮೂವರು ಭಾರತೀಯರು

ಐಸಿಸಿ ಟೆಸ್ಟ್ ಬ್ಯಾಟರ್​ಗಳ ನೂತನ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ಇಂಗ್ಲೆಂಡ್ ತಂಡದ ಟೆಸ್ಟ್ ಸ್ಪೆಷಲಿಸ್ಟ್ ಜೋ ರೂಟ್ ಫಸ್ಟ್ ಪ್ಲೇಸ್ ನಲ್ಲಿದ್ದಾರೆ. ಇನ್ನು ದ್ವಿತೀಯ ಸ್ಥಾನದಲ್ಲಿ ನ್ಯೂಝಿಲೆಂಡ್​ನ ಕೇನ್ ವಿಲಿಯಮ್ಸನ್ ಇದ್ದು, ಮೂರನೇ ಸ್ಥಾನದಲ್ಲಿ ಡೇರಿಲ್ ಮಿಚೆಲ್ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಆಸ್ಟ್ರೇಲಿಯಾ ದಾಂಡಿಗ ಸ್ಟೀವ್ ಸ್ಮಿತ್ ಈ ಬಾರಿ 4ನೇ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: PAKಗೆ ಚೋಕ್ ಕೊಟ್ಟ ICC – ಚಾಂಪಿಯನ್ಸ್ ಟ್ರೋಫಿಗಿಲ್ಲ ಅನುಮತಿ!

ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಭಾರತ ತಂಡದ ಆರು ಆಟಗಾರರು ಅಗ್ರ ಹತ್ತರಲ್ಲಿ ಕಾಣಿಸಿಕೊಂಡಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ಮೂವರು ಸ್ಥಾನ ಪಡೆದರೆ, ಬೌಲಿಂಗ್ ಶ್ರೇಯಾಂಕದಲ್ಲಿ ಮೂವರು ಆಟಗಾರರು ಕಾಣಿಸಿಕೊಂಡಿದ್ದಾರೆ.

ಟೆಸ್ಟ್ ಬ್ಯಾಟರ್​ಗಳ ಶ್ರೇಯಾಂಕದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 5ನೇ ಸ್ಥಾನದಲ್ಲಿ ಕಾಣಿಸಿಕೊಂಡರೆ, ಯಶಸ್ವಿ ಜೈಸ್ವಾಲ್ 6ನೇ ಸ್ಥಾನ ಕಾಯ್ದುಕೊಂಡಿದ್ದಾರೆ. ಹಾಗೆಯೇ ವಿರಾಟ್ ಕೊಹ್ಲಿ ಈ ಬಾರಿ 7ನೇ ಸ್ಥಾನಕ್ಕೇರಿದ್ದಾರೆ. ಟೆಸ್ಟ್​ನ ನಂಬರ್ 1 ಬೌಲರ್​ ಆಗಿ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹೊರಹೊಮ್ಮಿದ್ದಾರೆ.

ಕುತೂಹಲಕಾರಿ ವಿಷಯ ಎಂದರೆ ಕಳೆದ ಫೆಬ್ರವರಿ ಬಳಿಕ ಟೀಮ್ ಇಂಡಿಯಾ ಯಾವುದೇ ಟೆಸ್ಟ್ ಪಂದ್ಯವನ್ನಾಡಿಲ್ಲ. ಇದಾಗ್ಯೂ ಐಸಿಸಿ ಟೆಸ್ಟ್ ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರ ಹತ್ತರದಲ್ಲಿ ತಮ್ಮ ಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

Shwetha M

Leave a Reply

Your email address will not be published. Required fields are marked *