ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌  – ಪೂರ್ವಾನುಮತಿ ಇಲ್ಲದೆ ಬಳ್ಳಾರಿ ಪ್ರವೇಶಕ್ಕೆ ಕೋರ್ಟ್‌ ನಿಂದ ಅನುಮತಿ

ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌  – ಪೂರ್ವಾನುಮತಿ ಇಲ್ಲದೆ ಬಳ್ಳಾರಿ ಪ್ರವೇಶಕ್ಕೆ ಕೋರ್ಟ್‌ ನಿಂದ ಅನುಮತಿ

ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ.. ಜನಾರ್ದನ ರೆಡ್ಡಿಗೆ ಬಳ್ಳಾರಿಗೆ ಹೋಗಲು ಸುಪ್ರೀಂಕೋರ್ಟ್ ಅನುಮತಿ ನೀಡಿ ಸೋಮವಾರ ಆದೇಶಿಸಿದೆ. ಇದರೊಂದಿಗೆ, ಯಾವುದೇ ಪೂರ್ವಾನುಮತಿ ಇಲ್ಲದೆ ಬಳ್ಳಾರಿಗೆ ತೆರಳಲು ಜನಾರ್ದನ ರೆಡ್ಡಿಗೆ ಅವಕಾಶ ದೊರೆತಂತಾಗಿದೆ.

ಇದನ್ನೂ ಓದಿ: ಏಷ್ಯಾ ಪೆಸಿಫಿಕ್‌ನಲ್ಲಿಭಾರತ – ನಂ.3- ಏಷ್ಯಾಕ್ಕೆ ಭಾರತ ಅತಿದೊಡ್ಡ ಶಕ್ತಿ

ಏನಿದು ಪ್ರಕರಣ?

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಜೈಲುಪಾಲಾಗಿದ್ದರು. ನಂತರ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. 2015 ರ ಜನವರಿ 23 ರಂದು ಸುಪ್ರೀಂ ಕೋರ್ಟ್‌ ಜನಾರ್ದನ ರೆಡ್ಡಿಗೆ ಷರತ್ತುಬದ್ಧ ಜಾಮೀನು ನೀಡಿತ್ತು. ಆ ಸಂದರ್ಭದಲ್ಲಿ, ಬಳ್ಳಾರಿ, ಕಡಪ, ಅನಂತಪುರಕ್ಕೆ ತೆರಳಲು ಪೂರ್ವಾನುಮತಿ ಪಡೆಯವುದನ್ನು ಸುಪ್ರೀಂ ಕೋರ್ಟ್ ಕಡ್ಡಾಯಗೊಳಿಸಿತ್ತು. ಇದೀಗ ನ್ಯಾ. ಎಂಎಂ ಸುಂದರೇಶ್ ನೇತೃತ್ವದ ದ್ವಿ ಸದಸ್ಯ ಪೀಠದಿಂದ ಹೊಸ ಆದೇಶ ಹೊರಬಿದ್ದಿದೆ.   ಇನ್ಮುಂದೆ ಪೂರ್ವಾನುಮತಿ ಇಲ್ಲದೇ ರೆಡ್ಡಿ ಮುಕ್ತವಾಗಿ ಬಳ್ಳಾರಿಗೆ ತೆರಳಬಹುದಾಗಿದೆ.

ಕಳೆದ ಬಾರಿಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಸ್ಥಾಪಿಸಿದ್ದ ಜನಾರ್ದನ ರೆಡ್ಡಿ ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಪಕ್ಷದ ಇತರ ಅಭ್ಯರ್ಥಿಗಳು ಯಾರೂ ಗೆಲುವು ಸಾಧಿಸಿರಲಿಲ್ಲ.

2024 ರ ಲೋಕಸಭೆ ಚುನಾವಣೆಗೂ ಮುನ್ನ ಮಾರ್ಚ್ 25ರಂದು ಅವರು ಮತ್ತೆ ಬಿಜೆಪಿ ಸೇರ್ಪಡೆಯಾಗಿದ್ದರು. ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ವನ್ನು ಷರತ್ತುರಹಿತವಾಗಿ ಬಿಜೆಪಿ ಜತೆ ವಿಲೀನಗೊಳಿಸಿದ್ದರು.

Shwetha M

Leave a Reply

Your email address will not be published. Required fields are marked *