ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು- ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ
ಬೇಗ ಗುಣಮುಖರಾಗುವಂತೆ ದೇವರಲ್ಲಿ ಪ್ರಾರ್ಥನೆ

ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು- ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕಬೇಗ ಗುಣಮುಖರಾಗುವಂತೆ ದೇವರಲ್ಲಿ ಪ್ರಾರ್ಥನೆ

ರಜನಿಕಾಂತ್ ಅವರು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಚಿಕಿತ್ಸೆಗಾಗಿ ಸೋಮವಾರ ತಡರಾತ್ರಿ ಚೆನ್ನೈನ ಆಯರ್ವಿಳಕ್ಕುನಲ್ಲಿರೋಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ರಜನಿಕಾಂತ್​ಗೆ ಕಾರ್ಡಿಯಾಕ್​ ಕ್ಯಾಥ್​ ಕ್ಯಾಬ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗುತ್ತಿದ್ದು, ತಮ್ಮ ನೆಚ್ಚಿನ ನಟ ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ರಜನಿಕಾಂತ್​ ಅವರ ಆರೋಗ್ಯದ ಬಗ್ಗೆ ಅಪೋಲೋ ಆಸ್ಪತ್ರೆ ಅಥವಾ ರಜನಿಕಾಂತ್​ ಅವರ ಕುಟುಂಬದವರಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ.  ಆಸ್ಪತ್ರೆಗೂ ದಾಖಲಾಗುವುದಕ್ಕೂ ಮುನ್ನ ರಜನಿಕಾಂತ್​​​ ಮುಂಬರುವ ವೆಟ್ಟೈಯನ್​​​ ಸಿನಿಮಾದ ಆಡಿಯೋ ಲಾಂಚ್​ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು.

Kishor KV

Leave a Reply

Your email address will not be published. Required fields are marked *