ಪಾರ್ವತಿ ಸಿದ್ದರಾಮಯ್ಯ ಮುಡಾ ಸೈಟ್ ವಾಪಸ್​.. –  ಹೊಸ ಬಾಂಬ್‌ ಸಿಡಿಸಿದ ಹೆಚ್‌ಡಿಕೆ!

ಪಾರ್ವತಿ ಸಿದ್ದರಾಮಯ್ಯ ಮುಡಾ ಸೈಟ್ ವಾಪಸ್​.. –  ಹೊಸ ಬಾಂಬ್‌ ಸಿಡಿಸಿದ ಹೆಚ್‌ಡಿಕೆ!

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಿಎಂ ಕುರ್ಚಿಗೆ ಕುತ್ತು ತಂದಿರುವ ಸೈಟ್‌ಗಳನ್ನ ಸಿಎಂ ಪತ್ನಿ ಪಾರ್ವತಿಯವ್ರು ವಾಪಸ್‌ ನೀಡುವುದಾಗಿ ಮುಡಾಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: RCB Vs CSK.. ಟಿವಿ ಒಡೆದ ಧೋನಿ – ಪ್ಲೇಆಫ್ ಗೇರದಿದ್ದಕ್ಕೆ ತಾಳ್ಮೆ ಕಳ್ಕೊಂಡ್ರಾ?

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಕೇಳಿ ಬಂದಿರುವ ಗಂಭೀರ ಆರೋಪಕ್ಕೆ ಸಂಬಂಧಪಟ್ಟಂತೆ ಮೊದಲ ಬಾರಿಗೆ ಸಿದ್ದರಾಮಯ್ಯ ಪತ್ನಿ ಪಾರ್ವತಿ ಬಹಿರಂಗ ಪತ್ರ ಬರೆದಿದ್ದಾರೆ. ಮುಡಾಗೆ ಪತ್ರ ಬರೆದಿರುವ ಸಿಎಂ ಪತ್ನಿ ನಿವೇಶನಗಳನ್ನು ಹಿಂದಿರುಗಿಸುವುದಾಗಿ ತಿಳಿಸಿದ್ದಾರೆ. ಮುಡಾ ಕಮಿಷನರ್‌ಗೆ ಪತ್ರ ಬರೆದಿರುವ ಸಿಎಂ ಪತ್ನಿ ಪಾರ್ವತಿ ಅವ್ರು 14 ಸೈಟ್‌ಗಳನ್ನ ವಾಪಸ್‌ ಮಾಡುತ್ತೇನೆ. ನನ್ನ ಪತಿಯ ಮುಂದೆ ಈ ಎಲ್ಲ ಸೈಟ್‌ಗಳು ತೃಣಕ್ಕೆ ಸಮಾನ ಅಂತ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. ಆದ್ರೆ ಸಿಎಂ ಪತ್ನಿಯ ನಡೆ ವಿರುದ್ಧ ವಿಪಕ್ಷ ನಾಯಕರು ಕಿಡಿ ಕಾರಿದ್ದಾರೆ. ಸೈಟ್​ಗಳನ್ನ ವಾಪಸ್ ಕೊಟ್ಟಿರೋದು ರಾಜಕೀಯ ಡ್ರಾಮಾ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇನ್ನು ಮುಡಾ ಕೇಸ್‌ ಸದ್ದು ಮಾಡುತ್ತಿರುವ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಹೊಸ ಬಾಂಬ್‌ ಸಿಡಿಸಿದ್ದಾರೆ. ಮುಡಾ ಕೇಸ್ ನಲ್ಲಿ ಸಿಲುಕಿರೋ ಸಿಎಂ ಸಿದ್ದರಾಮಯ್ಯ ಇದೊಂದೇ ತಪ್ಪು ಮಾಡಿಲ್ಲ. ಮುಡಾ ಸೈಟ್‌ಗಿಂತ ದೊಡ್ಡ ಹಗರಣವಿದೆ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಮಾತನಾಡಿರೋ ಹೆಚ್​ಡಿಕೆ ಮುಡಾ ಹಗರಣ ಮಾತ್ರ ಅಲ್ಲ, ಸಿಎಂ ಸಿದ್ದರಾಮಯ್ಯ ಇನ್ನೂ ಹಲವಾರು ಅಕ್ರಮಗಳನ್ನು ಎಸಗಿದ್ದಾರೆ. ಮೈಸೂರಿನಲ್ಲಿ ಭೂಮಿ ಮೇಲೆ, ಚಿನ್ನದ ಮೇಲೆ ವ್ಯಾಮೋಹ ಇಲ್ಲ ಎನ್ನುತ್ತಾರೆ ಅವರ ಶ್ರೀಮತಿಯವರು. ಈ ಹಿಂದೆ ಏನೆಲ್ಲ ಮಾಡಿದ್ದಾರೆ, ವೈಟ್ನರ್ ಹಾಕಿ ಎಲ್ಲ ಮುಗಿದೊಯ್ತು ಎಂದುಕೊಂಡಿದ್ದರು, ಈಗ ಇಲ್ಲಿಗೆ ಬಂದಿದ್ದಾರೆ ಎಂದು ಆರೋಪಿಸಿದ್ದಾರೆ.

Shwetha M

Leave a Reply

Your email address will not be published. Required fields are marked *