ಪ್ರಯಾಣಿಕರಿಗೆ ಶಾಕ್‌ ಕೊಟ್ಟ ಬಿಎಂಆರ್‌ಸಿಎಲ್‌ –  ನಮ್ಮ ಮೆಟ್ರೋ ದರ ಏರಿಕೆ?

 ಪ್ರಯಾಣಿಕರಿಗೆ ಶಾಕ್‌ ಕೊಟ್ಟ ಬಿಎಂಆರ್‌ಸಿಎಲ್‌ –  ನಮ್ಮ ಮೆಟ್ರೋ ದರ ಏರಿಕೆ?

ಸಿಲಿಕಾನ್‌ ಸಿಟಿಯ ಸಂಚಾರ ಜೀವನಾಡಿ ನಮ್ಮ ಮೆಟ್ರೋ ಎಂದೇ ಹೇಳಬಹುದು. ಆಫೀಸ್‌ಗೆ ಹೋಗಲು, ಕಾಲೇಜ್‌ಗೆ ಹೋಗಲು ಸಾವಿರಾರು ಮಂದಿ ಮೆಟ್ರೋವನ್ನೇ ಅವಲಂಭಿಸಿದ್ದಾರೆ. ಇದೀಗ ಮೆಟ್ರೋ ಪ್ರಯಾಣಿಕರಿಗೆ ಬ್ಯಾಡ್‌ ನ್ಯೂಸ್‌ ವೊಂದಿದೆ.. ಶೀಘ್ರದಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: CSKಗೆ ಬೇಡ್ವಾ ಅನ್ ಕ್ಯಾಪ್ಡ್ ರೂಲ್ಸ್? – 18ನೇ ಸೀಸನ್ IPLಗಿಲ್ವಾ ಧೋನಿ?

ಹೌದು, ನಗರದ ನಮ್ಮ ಮೆಟ್ರೋ ರೈಲು ಇದೀಗ ದರ ಏರಿಕೆ ಬಗ್ಗೆ ಪ್ರಸ್ತಾಪ ಮಾಡಿದ್ದು, ಶೀಘ್ರದಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆಯಾಗುವ ಸಾಧ್ಯತೆಯಿದೆ. ಇದಕ್ಕೂ ಮುಂಚೆ ಹಲವಾರು ಬಾರಿ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್‌ಸಿಎಲ್  ಪ್ರಸ್ತಾಪಿಸಿತ್ತು. ಆದರೆ ಕಳೆದ ಹಲವು ವರ್ಷಗಳಿಂದ ದರ ಏರಿಕೆ ಮಾಡಿರಲಿಲ್ಲ. ಸದ್ಯ ಈ ಬಾರಿ ದರ ಏರಿಕೆ ಮಾಡಲು ಮುಂದಾಗಿದೆ. ಟಿಕೆಟ್ ದರ ಏರಿಕೆಗೆ ಈಗಾಗಲೇ ಮೆಟ್ರೋ ದರ ನಿಗದಿ ಸಮಿತಿಯನ್ನು ರಚಿಸಿದ್ದು 15% ರಿಂದ 20% ರಷ್ಟು ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಬಿಎಂಆರ್‌ಸಿಎಲ್‌ ಮೂಲಗಳು ತಿಳಿಸಿದೆ.

ಈ ಕುರಿತು ಬಿಎಂಆರ್‌ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಯಶವಂತ್ ಚೌಹಾನ್ ಮಾತನಾಡಿ, ರಾಜ್ಯ ಹಾಗೂ ಕೇಂದ್ರದ ಹಿರಿಯ ಅಧಿಕಾರಿಗಳು, ನಿವೃತ್ತ ನ್ಯಾಯಾಧೀಶರನ್ನು ಒಳಗೊಂಡು ದರ ಏರಿಕೆ ಬಗ್ಗೆ ಕಮಿಟಿ ಆಗಿದೆ. ಇದೊಂದು ಸ್ವತಂತ್ರ ಸಮಿತಿಯಾಗಿದ್ದು, ಒಂದು ಸಭೆ ಕೂಡಾ ಆಗಿದೆ. ಕಮಿಟಿ ಶೀಘ್ರದಲ್ಲೇ ವರದಿ ನೀಡಲಿದ್ದು, ವರದಿ ಆಧಾರದ ಮೇಲೆ ದರ ಏರಿಕೆ ಆಗಲಿದೆ. ಕಮಿಟಿ ಸಾರ್ವಜನಿಕ ಅಭಿಪ್ರಾಯ ಸಂಗ್ರಹ ಮಾಡಲಿದೆ. ನಮ್ಮ ಖರ್ಚು ವೆಚ್ಚ ನೋಡಿಕೊಂಡು ದರ ಏರಿಕೆ ಮಾಡಲಿದ್ದೇವೆ. ಇನ್ನೂ ಮೂರು ತಿಂಗಳ ಒಳಗಾಗಿ ದರ ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಅ.21 ರೊಳಗೆ ಪ್ರಯಾಣಿಕರು ಬಿಎಂಆರ್ಸಿಎಲ್‌ಗೆ ತಮ್ಮ ಅಭಿಪ್ರಾಯ ತಿಳಿಸಲು ಕಾಲಾವಕಾಶ ನೀಡಿದ್ದು, ಸಲಹೆಯನ್ನ ffc@bmrc.co.in ಇಮೇಲ್‌ಗೆ ಕಳಿಸುವಂತೆ ತಿಳಿಸಿದೆ.

Shwetha M

Leave a Reply

Your email address will not be published. Required fields are marked *