ಭಾರತೀಯ ಸೇನೆಯ ಭರ್ಜರಿ ಕಾರ್ಯಾಚರಣೆ- ಇಬ್ಬರು ಉಗ್ರರು ಫಿನಿಷ್
ಗುಗಲ್‌ಧಾರ್‌ನಲ್ಲಿ ಗುಂಡಿನ ಚಕಮಕಿ
ಕಣಿವೆನಾಡಿನ ಕುಪ್ವಾರದಲ್ಲಿ ಭಾರತೀಯ ಸೇನೆಯ ಗಡಿ ನಿಯಂತ್ರಣ ಸಮೀಪ ನಡೆಯುತ್ತಿರುವ ಆಪರೇಷನ್ ಗುಗಲ್‌ಧಾರ್‌ನಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಶಸ್ತ್ರಾಸ್ತ್ರಗಳನಿಟ್ಟ ಮಳಿಗೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಸೇನೆ ತಿಳಿಸಿದೆ. ಗುಗಲ್‌ಧಾರ್‌ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಈ ಪ್ರದೇಶದಲ್ಲಿ ಶೋಧ ಕಾರ್ಯ ನಡೆಯುತ್ತಿದೆ ಮತ್ತು ಕಾರ್ಯಾಚರಣೆ ಪ್ರಗತಿಯಲ್ಲಿದೆ .
ಅಕ್ಟೋಬರ್ 4ರಂದು, ಒಳನುಸುಳುವಿಕೆ ಯತ್ನದ ಬಗ್ಗೆ ಗುಪ್ತಚರ ಮಾಹಿತಿ ಆಧಾರದ ಮೇಲೆ, ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರದ ಪೊಲೀಸರು ಜಂಟಿ ಕುಪ್ವಾರದ ಗುಗಲ್‌ಧಾರ್‌ನಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ರಕ್ಷಣಾ ಪಡೆಗಳು ಅನುಮಾನಾಸ್ಪದ ಚಟುವಟಿಕೆ ಗುರುತಿಸಿ ದಾಳಿ ನಡೆಸಿವೆ. ಭಯೋತ್ಪಾದಕರಿಂದಳೂ ಪ್ರತಿದಾಳಿ ನಡೆದ ಹಿನ್ನೆಲೆಯಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ” ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿತ್ತು.