ಏರ್‌ ಶೋ ವೇಳೆ ನಾಲ್ವರು ಸಾವು – 230 ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಏರ್‌ ಶೋ ವೇಳೆ ನಾಲ್ವರು ಸಾವು – 230 ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಚೆನ್ನೈನ ಮರೀನಾ ಬೀಚ್‌ನಲ್ಲಿ ನಡೆದ ಏರ್ ಶೋ ನೋಡಲು ಹೋಗಿದ್ದ ನಾಲ್ವರು ಪೇಕ್ಷಕರು ಸಾವನ್ನಪ್ಪಿದ್ದಾರೆ. 230ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಸಿಎಂ ಬದಲಾವಣೆ ಫಿಕ್ಸ್?‌  – ಕುರ್ಚಿಗಾಗಿ ಕಸರತ್ತು.. ಕೈ ನಾಯಕರ ಸರಣಿ ಸಭೆ ರಹಸ್ಯ ಏನು?

ಭಾರತೀಯ ವಾಯುಪಡೆಯ 92 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ಹಿನ್ನೆಲೆ ಚೆನ್ನೈನ ಮರೀನಾ ಬೀಚ್‌ನಲ್ಲಿ ಏರ್ ಶೋ ನಡೆಸಲಾಗಿತ್ತು. ಕಾರ್ಯಕ್ರಮದಲ್ಲಿ 72 ವಿಮಾನಗಳು ವಿವಿಧ ಸಾಹಸಗಳನ್ನು ಪ್ರದರ್ಶಿಸಿದ್ದವು. 15 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಣೆಗೆ ಆಗಮಿಸಿದ್ದರು. ಈ ವೇಳೆ ಬಿಸಿಲಿನತಾಪಕ್ಕೆ 5 ಮಂದಿ ಸಾವಾಗಿದ್ದು, 230ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ . ಅವರ ಸಾವಿಗೆ ಬಿಸಿಲಿನ ತಾಪ ಕಾರಣ.

ಏರ್ ಶೋ ವೀಕ್ಷಿಸಿ ವಾಪಾಸ್ ತೆರಳುವಾಗ ಬಿಸಿಲಿನ ತಾಪಕ್ಕೆ ಜನರ ನಡುವೆ ನೂಕು ನುಗ್ಗಲು ಸಂಭವಿಸಿದೆ. ಈ ವೇಳೆ ಉಸಿರಾಡಲಾಗದೇ 230ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. 100 ಕ್ಕೂ ಹೆಚ್ಚು ಜನರಿಗೆ ಉಸಿರಾಟದ ಸಮಸ್ಯೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಖ್ಯ ರಸ್ತೆಯಲ್ಲಿ ವಾಹನ ಸಂದಣಿ ಹಾಗೂ ಜನಸಂದಣಿ ಏರ್ಪಟ್ಟಿತ್ತು. ಅಸ್ವಸ್ಥರಾದವರನ್ನ ಆಂಬ್ಯಲೆನ್ಸ್ಗೆ ಸಾಗಿಸಿವುದಕ್ಕೆ ಪರದಾಡಬೇಕಾಯಿತು. ಮೃತರನ್ನು ಜಾನ್ (60), ತಿರುವೊಟ್ಟಿಯೂರು ಮೂಲದ ಕಾರ್ತಿಕೇಯನ್, ದಿನೇಶ್ ಕುಮಾರ್ (37), ಪೆರುಂಗಲತ್ತೂರಿನ ಶ್ರೀನಿವಾಸನ್, ಎಂದು ಗುರುತಿಸಲಾಗಿದೆ.

Shwetha M

Leave a Reply

Your email address will not be published. Required fields are marked *