ಚನ್ನಪಟ್ಟಣ ಬೈ ಎಲೆಕ್ಷನ್‌ ಗೆ ಕೌಂಟ್‌ ಡೌನ್‌ – ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಕಣಕ್ಕೆ?

ಚನ್ನಪಟ್ಟಣ ಬೈ ಎಲೆಕ್ಷನ್‌ ಗೆ ಕೌಂಟ್‌ ಡೌನ್‌ – ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಕಣಕ್ಕೆ?

ಚನ್ನಪಟ್ಟಣ ಕ್ಷೇತ್ರದ ಬೈ ಎಲೆಕ್ಷನ್‌ ಗೆ ಕೌಂಟ್‌ಡೌನ್‌ ಶುರುವಾಗಿದೆ. ಚನ್ನಪಟ್ಟಣ ಕ್ಷೇತ್ರವನ್ನು ಕೈವಶ ಮಾಡಿಕೊಳ್ಳಲು ಡಿಕೆ ಬ್ರದರ್ಸ್‌ ರಣತಂತ್ರ ಹೆಣೆಯುತ್ತಿದ್ದಾರೆ. ಇತ್ತ ಹೆಚ್‌ಡಿಕೆ ಕೂಡ ಕ್ಷೇತ್ರವನ್ನು ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದಾರೆ..  ಇದೀಗ ಚನ್ನಪಟ್ಟಣ ಅಖಾಡಕ್ಕೆ ಹೆಚ್​ಡಿ ಕುಮಾರಸ್ವಾಮಿ ಎಂಟ್ರಿ ಕೊಟ್ಟಿದ್ದು ಜೆಡಿಎಸ್​ನಲ್ಲಿ ಭರ್ಜರಿ ತಯಾರಿ ಶುರುವಾಗಿದೆ. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ಒತ್ತಡ ಹೆಚ್ಚಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ : ಏರ್‌ ಶೋ ವೇಳೆ ನಾಲ್ವರು ಸಾವು – 230 ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಲೋಕಸಭೆ ಚುನಾವಣೆಯಲ್ಲಿ ಹೆಚ್‌.ಡಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ರು.. ಈ ಬೆನ್ನಲ್ಲೇ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು.. ಈ ಸ್ಥಾನ ತೆರವಾಗಿದ್ದು, ಈಗ ಉಪಚುನಾವಣೆಗೆ ಸಿದ್ಧತೆ ನಡೆದಿದೆ. ಚನ್ನಪಟ್ಟಣದ ಕೋಡಂಬಳ್ಳಿ ಗ್ರಾಮದಲ್ಲಿ ಜೆಡಿಎಸ್​ ಕಾರ್ಯಕರ್ತರ ಜೊತೆ ಹೆಚ್​ಡಿ ಕುಮಾರಸ್ವಾಮಿಯವರು ಸಭೆ ನಡೆಸಿದ್ದು ಈ ವೇಳೆ ನಿಖಿಲ್ ಸ್ಪರ್ಧೆಗೆ ಕೂಗು ಕೇಳಿ ಬಂದಿದೆ. ನಿಖಿಲ್ ಸ್ಪರ್ಧೆ ಮಾಡುವಂತೆ ಕಾರ್ಯಕರ್ತರು ಬಹಿರಂಗವಾಗಿ ಒತ್ತಡ ಹಾಕಿದ್ದಾರೆ.  ಹೀಗಾಗಿ ಚನ್ನಪಟ್ಟಣದಲ್ಲಿ ನಿಖಿಲ್ ಸ್ಪರ್ಧೆ ಬಗ್ಗೆ ಚರ್ಚೆ ಜೋರಾಗಿದೆ. ಮತ್ತೊಂದೆಡೆ HD ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿಯವರು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್​ ದಾಸ್​ ಅಗರ್ವಾಲ್ ಅವರನ್ನು ಭೇಟಿ ಮಾಡಿದ್ದಾರೆ. ಜೊತೆಗೆ ಹೆಚ್​ಡಿಕೆ, ನಿಖಿಲ್​ ಚನ್ನಪಟ್ಟಣ ಉಪ ಚುನಾವಣೆ ಬಗ್ಗೆ ಚರ್ಚಿಸಿದ್ದಾರೆ. ರಾಧಾಮೋಹನ್​ ದಾಸ್ ಅವರು ಕ್ಷೇತ್ರದ ವಿಚಾರದಲ್ಲಿ ಗೊಂದಲವಿಲ್ಲ ಎಂದಿದ್ದಾರೆ.

ಇನ್ನು ಕುಮಾರಸ್ವಾಮಿಗೆ ಎರಡೆರಡೂ ಟೆನ್ಷನ್ ಇದೆ. ಎನ್​ಡಿಎ ಅಭ್ಯರ್ಥಿಯ ಜೊತೆಗೆ ಮಗನ ರಾಜಕೀಯ ಭವಿಷ್ಯವೂ ಮುಖ್ಯ ಆಗಿದೆ. ಒಂದು ವೇಳೆ ಕ್ಷೇತ್ರ ಕೈ ತಪ್ಪಿದ್ರೆ ಚನ್ನಪಟ್ಟಣದಲ್ಲಿ ಹಿಡಿತ ಸಾಧಿಸೋಕೆ ಆಗಲ್ಲ, ಇನ್ನು ಜೆಡಿಎಸ್​ ಹಾಗೂ ಕಾಂಗ್ರೆಸ್​ಗೆ ನೇರಾ ನೇರ ಪೈಪೋಟಿ ಇರೋದ್ರಿಂದ ಸಿ.ಪಿ.ಯೋಗೇಶ್ವರ್​​ನ್ನೂ ಒಟ್ಟಾಗಿ ಕರೆದುಕೊಂಡು ಹೋಗೋದು ಸವಾಲು ಆಗಿದೆ.

ಪರಿಷತ್​ ಬಿಜೆಪಿ ಸದಸ್ಯ ಸಿ.ಪಿ.ಯೋಗೇಶ್ವರ್ ಮನವೊಲಿಕೆ ಬಗ್ಗೆ ಚರ್ಚೆ ನಡೆದಿದೆ. JDS, ಬಿಜೆಪಿ ಒಟ್ಟಾಗಿ ಹೋದರೆ ಮಾತ್ರ ಕಾಂಗ್ರೆಸ್ ಸೋಲಿಸಬಹುದು. ಇಲ್ಲವಾದರೆ ಮತ ವಿಭಜನೆಯಾಗಿ ಕಾಂಗ್ರೆಸ್​​ ಲಾಭ ಪಡೆಯುತ್ತದೆ. ಸಿ.ಪಿ.ಯೋಗೇಶ್ವರ್​ ಮನವೊಲಿಸಲು H.D.ಕುಮಾರಸ್ವಾಮಿ ರಾಧಾಮೋಹನ್ ಅವರಿಗೆ ಸಲಹೆ ನೀಡಿದ್ದಾರೆ. ಹೀಗಾಗಿ‌‌‌ ಹೆಚ್​.ಡಿ.ಕುಮಾರಸ್ವಾಮಿ ನಡೆ ಕುತೂಹಲ ಮೂಡಿಸಿದೆ.

Shwetha M

Leave a Reply

Your email address will not be published. Required fields are marked *