ನಮ್ಮ ಮೆಟ್ರೋ ನಿಲ್ದಾಣದಲ್ಲಿ ಕಂಠ ಪೂರ್ತಿ ಕುಡಿದು ರಂಪಾಟ – ಓರ್ವ ಪೊಲೀಸರ ವಶಕ್ಕೆ

ನಮ್ಮ ಮೆಟ್ರೋ ನಿಲ್ದಾಣದಲ್ಲಿ ಕಂಠ ಪೂರ್ತಿ ಕುಡಿದು ರಂಪಾಟ – ಓರ್ವ ಪೊಲೀಸರ ವಶಕ್ಕೆ

ನಮ್ಮ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಕಂಠ ಪೂರ್ತಿ ಕುಡಿದು ಗಲಾಟೆ ಮಾಡಿರುವ ಘಟನೆ ನಡೆದಿದೆ. ಕಾಡುಗೋಡಿ ಟ್ರೀ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಆ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ : ಸೂರ್ಯ ಸಿಡಿಲು.. ಪಾಂಡ್ಯ ಮಿಂಚು – ಬಾಂಗ್ಲಾ ಬಾಯ್ಸ್ ಸದೆ ಬಡಿದ ಭಾರತ

ನಾಲ್ವರು ಕುಡಿದ ಅಮಲಿನಲ್ಲಿ ಕಾಡುಗೋಡಿ ಟ್ರೀ ಪಾರ್ಕ್ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ಭದ್ರತಾ ಅಧಿಕಾರಿಗಳು ಅವರನ್ನು ತಡೆದಿದ್ದಾರೆ. ಈ ವೇಳೆ ಸಿಬ್ಬಂದಿ ಮೇಲೆ ಇಬ್ಬರು ಹಲ್ಲೆ ನಡೆಸಿದ್ದಾರೆ.

ಮಹಿಳಾ ಸಿಬ್ಬಂದಿ ಹಾಗೂ ಟಿಕೆಟ್ ಆಪರೇಟರ್ ಜೊತೆ ಅಸಭ್ಯ ಪದ ಬಳಸಿ ನಿಂದಿಸಿದ್ದಾರೆ. ಬಳಿಕ ಭದ್ರತಾ ಸಿಬ್ಬಂದಿ ಓರ್ವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವೇಳೆ ಮೂವರು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಬಿಎಮ್‌ಆರ್‌ಸಿಎಲ್‌ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.

Shwetha M

Leave a Reply

Your email address will not be published. Required fields are marked *