ರೇಣುಕಾಸ್ವಾಮಿ ಕೊಲೆ ಕೇಸ್‌ – ಅ. 14 ರಂದು ದರ್ಶನ್,  ಪವಿತ್ರಾ ಗೌಡ ಜಾಮೀನು ಭವಿಷ್ಯ ನಿರ್ಧಾರ!

ರೇಣುಕಾಸ್ವಾಮಿ ಕೊಲೆ ಕೇಸ್‌ – ಅ. 14 ರಂದು ದರ್ಶನ್,  ಪವಿತ್ರಾ ಗೌಡ ಜಾಮೀನು ಭವಿಷ್ಯ ನಿರ್ಧಾರ!

ರೇಣುಕಾಸ್ವಾಮಿ ಕೊಲೆ ಕೇಸ್‌ ನಲ್ಲಿ ನಟ ದರ್ಶನ್‌ ಹಾಗೂ ಪವಿತ್ರಾ ಗೌಡ ಜೈಲು ಸೇರಿದ್ದಾರೆ. ದರ್ಶನ್‌ ಹಾಗೂ  ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ಭವಿಷ್ಯ ಅ.14 ರಂದು ಪ್ರಕಟವಾಗಲಿದೆ.

ಇದನ್ನೂ ಓದಿ: ಸ್ವರ್ಗದಿಂದ ನರಕಕ್ಕೆ ಎಂಟ್ರಿಕೊಟ್ಟ ಐಶ್ವರ್ಯ – ಕುಣಿದು ಕುಪ್ಪಳಿಸಿದ ಲಾಯರ್‌ ಜಗದೀಶ್‌!

ಕೊಲೆ ಕೇಸ್‌ ಸಂಬಂಧ ಸುದೀರ್ಘ ವಿಚಾರಣೆ ನಡೆಸಿದ್ದ ಸೆಷನ್ಸ್‌ ಕೋರ್ಟ್‌ ನ್ಯಾ. ಜೈಶಂಕರ್‌ ಗುರುವಾರ ವಿಚಾರಣೆಯನ್ನು ಮುಕ್ತಾಯಗೊಳಿಸಿದ್ದಾರೆ. ಅ.14 ರಂದು ಜಾಮೀನು ಅದೇಶ ಪ್ರಕಟಿಸುವುದಾಗಿ ತಿಳಿಸಿದರು.

ಗುರುವಾರ ದರ್ಶನ್‌ ಪರ ಹಿರಿಯ ಕ್ರಿಮಿನಲ್‌ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರೆ ಪೊಲೀಸರ ಪರವಾಗಿ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದಿಸಿದರು. ಬುಧವಾರ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಕೋರ್ಟ್‌ ಅ.14 ರಂದು ಆದೇಶ ಪ್ರಕಟಿಸುವುದಾಗಿ ಹೇಳಿತ್ತು. ಇದೀಗ ಅ.14 ರಂದು ಜಾಮೀನು ಅದೇಶ ಪ್ರಕಟಿಸುವುದಾಗಿ ಕೋರ್ಟ್‌ ತಿಳಿಸಿದೆ.

Shwetha M