ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಟೆಸ್ಟ್ ಸರಣಿಗೆ ಕೌಂಟ್‌ಡೌನ್ – ಮೊದಲ ಪಂದ್ಯ ಮಳೆಗೆ ಆಹುತಿ?

ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಟೆಸ್ಟ್ ಸರಣಿಗೆ ಕೌಂಟ್‌ಡೌನ್ – ಮೊದಲ ಪಂದ್ಯ ಮಳೆಗೆ ಆಹುತಿ?

ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಕೌಂಟ್‌ಡೌನ್ ಶುರುವಾಗಿದೆ. ಅಕ್ಟೋಬರ್ 16 ರಂದು ಮೊದಲ ಪಂದ್ಯ ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಮೊದಲ ಪಂದ್ಯಕ್ಕೆ ಆತಿಥ್ಯವಹಿಸಿದೆ. ಎರಡನೇ ಪಂದ್ಯವು ಪುಣೆಯಲ್ಲಿ ನಡೆಯಲಿದೆ. ಹಾಗೆಯೇ ಮೂರನೇ ಪಂದ್ಯವು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಜರುಗಲಿದೆ.

ಇದನ್ನೂ ಓದಿ:NZ ಕದನಕ್ಕೆ RO-KO ಸ್ಟ್ರಾಟಜಿ  – ಚಿನ್ನಸ್ವಾಮಿ ಸೀಕ್ರೆಟ್ ಹೇಳಿದ ದ್ರಾವಿಡ್

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಫ್ಯಾನ್ಸ್ ಕಾಯ್ತಿದ್ದಾರೆ. ಆದರೆ, ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಹವಾಮಾನ ವರದಿ ಪ್ರಕಾರ, ಬುಧವಾರ ಬೆಂಗಳೂರಿನಲ್ಲಿ ಶೇ.100 ರಷ್ಟು ಮೋಡ ಕವಿದ ವಾತಾವರಣ ಇರಲಿದ್ದು, ಮಳೆ ಸುರಿಯೋದು ಗ್ಯಾರಂಟಿ. ಹೀಗಾಗಿ ಮೊದಲ ಟೆಸ್ಟ್ ಸರಣಿ ಬಹುತೇಕ ಮಳೆಗೆ ಆಹುತಿಯಾಗಲಿದೆ. ಹವಾಮಾನ ವರದಿ ಪ್ರಕಾರ, ಬುಧವಾರ ಬೆಂಗಳೂರಿನಲ್ಲಿ ಶೇ.100 ರಷ್ಟು ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ 41% ಮಳೆಯಾಗಲಿದೆ. ಬೆಳಿಗ್ಗೆಯಿಂದಲೇ ತುಂತುರು ಮಳೆ ಶುರುವಾಗುವುದರಿಂದ ಪಂದ್ಯವು ತಡವಾಗಿ ಆರಂಭಗೊಳ್ಳುವ ಸಾಧ್ಯತೆಯಿದೆ. ಇನ್ನು ಎರಡನೇ ದಿನದಾಟಕ್ಕೂ ವರುಣ ಅಡ್ಡಿಪಡಿಸಲಿದ್ದಾನೆ. ಗುರುವಾರ ಮಧ್ಯಾಹ್ನಯಿಂದ ಬೆಂಗಳೂರಿನಲ್ಲಿ ಶೇ.40ರಷ್ಟು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಹಾಗೆಯೇ ಮೂರನೇ ದಿನದಾಟದ ವೇಳೆ 67% ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ಹೇಳಿದೆ.

ಇನ್ನು, ನ್ಯೂಝಿಲೆಂಡ್ ಟೀಮ್ ನಲ್ಲಿ ಭಾರತೀಯ ಮೂಲದ ರಚಿನ್ ರವೀಂದ್ರ ಕಣಕ್ಕಿಳಿಯಲಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯಲು ರಚಿನ್ ಉತ್ಸುಕರಾಗಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಚಿನ್ ರವೀಂದ್ರ, ಬೆಂಗಳೂರು ನನ್ನ ಕುಟುಂಬಸ್ಥರು ನೆಲೆಸಿರುವ ಸ್ಥಳ. ಇಲ್ಲಿ ಆಡಲು ಸಾಧ್ಯವಾಗುವುದು ನನ್ನ ಪಾಲಿಗೆ ವಿಶೇಷ ಕ್ಷಣ. ನಾನು ಬೆಂಗಳೂರಿನಲ್ಲಿ ಕಣಕ್ಕಿಳಿಯುವುದನ್ನು ನನ್ನ ತಂದೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೂತು ನೋಡಲಿದ್ದಾರೆ. ಹೀಗಾಗಿ ಮೊದಲ ಟೆಸ್ಟ್ ಪಂದ್ಯವು ನನ್ನ ಪಾಲಿಗೆ ಅಸ್ಮರಣೀಯ ಎಂದಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿ ಬಗ್ಗೆ ಟೀಂ ಇಂಡಿಯಾ ಕೋಚ್ ಗೌತಮ್ ಗಂಭೀರ್ ಪ್ರತಿಕ್ರಿಯೆ ನೀಡಿದ್ದಾರೆ. ಆಟಗಾರರು ಆಕ್ರಮಣಕಾರಿಯಾಗಬೇಕೆಂದು ನಾನು ಬಯಸುತ್ತೇನೆ. ಆಟಗಾರರು ತಮ್ಮ ಸಹಜ ಆಟ ಆಡಿದರೆ ಟೆಸ್ಟ್ ಪಂದ್ಯದ ಒಂದೇ  ದಿನದಲ್ಲಿ 400 ಅಥವಾ 500 ರನ್ ಗಳಿಸಬಹುದು ಎಂದಿದ್ದಾರೆ ಗೌತಮ್ ಗಂಭೀರ್.

Sulekha