ಭವಾನಿ ರೇವಣ್ಣಗೆ ಬಿಗ್‌ ರಿಲೀಫ್‌ – ಜಾಮೀನು ಅರ್ಜಿ ವಜಾ ಮಾಡಲು ನಿರಾಕರಿಸಿದ ಸುಪ್ರೀಂ ಕೋರ್ಟ್‌!

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್‌ – ಜಾಮೀನು ಅರ್ಜಿ ವಜಾ ಮಾಡಲು ನಿರಾಕರಿಸಿದ ಸುಪ್ರೀಂ ಕೋರ್ಟ್‌!

ಪ್ರಜ್ವಲ್‌ ರೇವಣ್ಣ ಕೇಸ್‌ ನ ಸಂತ್ರಸ್ತೆಯನ್ನು ಕಿಡ್ನಾಪ್‌ ಮಾಡಿದ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ಬಿಗ್‌ ರಿಲೀಫ್‌ ಸಿಕ್ಕಿದೆ.  ಭವಾನಿ ರೇವಣ್ಣ ಜಾಮೀನು ಅರ್ಜಿ ವಜಾ ಮಾಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ಇದನ್ನೂ ಓದಿ: ವಾಟ್ಸಪ್ ಬಳಕೆದಾರರಿಗೆ ಬಿಗ್ ಶಾಕ್ – 80 ಲಕ್ಷ ಅಕೌಂಟ್ ಬ್ಯಾನ್‌ ಆಗಿದ್ದೇಕೆ?

ಅಪಹರಣ ಕೇಸ್‌ ನಲ್ಲಿ ಭವಾನಿ ರೇವಣ್ಣಗೆ  ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ, ಎಸ್‌ಐಟಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸೂರ್ಯಕಾಂತ್‌ ನೇತೃತ್ವದ ಪೀಠ, ಜಾಮೀನು ಅರ್ಜಿ ವಜಾ ಮಾಡಲು ನಿರಾಕರಿಸಿದೆ.

ಈಗಾಗಲೇ ಚಾರ್ಜ್‌ಶೀಟ್ ಫೈಲ್ ಆಗಿದೆ. ರಾಜಕೀಯ ಕುಟುಂಬ ಎನ್ನುವ ಕಾರಣಕ್ಕೆ ಜಾಮೀನು ನಿರಾಕರಿಸಲು ಸಾಧ್ಯವಿಲ್ಲ. ಕೆಲವು ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು. ಈ ಪ್ರಕರಣದಲ್ಲಿ ತನಿಖೆ ದಾರಿ ತಪ್ಪಿದ್ದಿಯೇ? ತಪ್ಪಿದ್ದರೆ ನಾವು ನಿಮ್ಮ ನೆರವಿಗೆ ಬರಬಹುದು. ಆದರೆ ಇಲ್ಲಿ ಯಾವುದು ಆ ರೀತಿ ಕಾಣ್ತಿಲ್ಲ ಎಂದು ಕೋರ್ಟ್‌ ತಿಳಿಸಿದೆ.

ಆರೋಪಿ ಮಹಿಳೆ ಪ್ರಕರಣದಲ್ಲಿ ನೇರ ಸಂಬಂಧ ಹೊಂದಿದ್ದಾರೆ. ಅತ್ಯಾಚಾರ ಎಸಗಿದ ಆರೋಪಿಯ ತಾಯಿ ಆಗಿದ್ದಾರೆ. ಸಂತ್ರಸ್ತೆಯ ಅಪಹರಣದಲ್ಲಿ ಭಾಗಿಯಾಗಿದ್ದಾರೆ. ಆರೋಪಿಗಳು ಪ್ರತಿಷ್ಠಿತ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದವರು. ಹೀಗಾಗಿ ನಿರೀಕ್ಷಣಾ ಜಾಮೀನು ರದ್ದು ಮಾಡಬೇಕು ಎಂದಷ್ಟೆ ವಾದ ಎಂದು ತನಿಖೆಯ ಅಗತ್ಯತೆಯನ್ನು ಎಸ್‌ಐಟಿ ಪರ ವಕೀಲರು ಒತ್ತಿ ಹೇಳಿದರು.

ಪ್ರಕರಣದ ಪ್ರಮುಖರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಮಗ ಮತ್ತು ಪತಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಚಾರ್ಜ್‌ಶೀಟ್ ಫೈಲ್ ಮಾಡಲಾಗಿದೆ. ನಿರೀಕ್ಷಣಾ ಜಾಮೀನು ರದ್ದು ಮಾಡಲು ಯಾವುದೇ ಸಕಾರಣ ಕಾಣುತ್ತಿಲ್ಲ ಎಂದು ಜಾಮೀನು ರದ್ದು ಮಾಡಲು ಕೋರ್ಟ್‌ ನಿರಾಕರಿದೆ.

Shwetha M

Leave a Reply

Your email address will not be published. Required fields are marked *