ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಆಗ್ತಾರಾ ಸಿಪಿ ಯೋಗೇಶ್ವರ್? – ಸಂಡೂರು ಕ್ಷೇತ್ರದ ಟಿಕೆಟ್ ಸಂಸದ ಇ ತುಕಾರಾಂ ಪತ್ನಿಗೆ!
ರಾಜ್ಯದಲ್ಲಿ ಉಪಚುನಾವಣೆಯ ಕಾವು ಜೋರಾಗಿದೆ. ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ಗೆಲ್ಲಲು ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ದೋಸ್ತಿಗಳು ಸಖತ್ ಪ್ಲಾನ್ ರೂಪಿಸಿಕೊಂಡಿದ್ದಾರೆ. ಈ ನಡುವೆ ದಳಪತಿಗಳಿಗೆ ಸೈನಿಕ ಸಿಪಿ ಯೋಗೇಶ್ವರ್ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ನಾನು ಚುನಾವಣೆಗೆ ಸ್ಪರ್ಧಿಸುವುದು ಖಚಿತ ಎಂದಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ, ಸಿಪಿ ಯೋಗೇಶ್ವರ್ ಕಾಂಗ್ರೆಸ್ ಗೆ ಬರುವ ಮುನ್ಸೂಚನೆ ಕೊಟ್ಟಿದ್ದಾರೆ.
ಇದನ್ನೂ ಓದಿ: 1 ವಾರ .. 90ಕ್ಕೂ ಹೆಚ್ಚು ಬಾಂಬ್ ಬೆದರಿಕೆ! – ನಷ್ಟದ ಸುಳಿಯಲ್ಲಿ ವಿಮಾನಯಾನ!
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಚನ್ನಪಟ್ಟಣ ಕ್ಷೇತ್ರಕ್ಕೆ ಡಿಕೆ ಸುರೇಶ್ ಹೆಸರು ಕೂಡ ಇದೆ. ನಮ್ಮ ಪಕ್ಷದ ಅಧ್ಯಕ್ಷರೇ ಅಲ್ಲಿ ಇರುವ ಕಾರಣ ಅವರೇ ಸೂಕ್ತ ಅಭ್ಯರ್ಥಿ ತೀರ್ಮಾನ ಮಾಡುತ್ತಾರೆ. ಒಳ್ಳೆಯ ಅಭ್ಯರ್ಥಿ ಹಾಕಬೇಕು ಎಂದು ಹೇಳಿದ್ದೇನೆ. ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಯಾರೇ ಪಕ್ಷಕ್ಕೆ ಬಂದರೂ ಸ್ವಾಗತ ಎಂಬ ಹೇಳಿಕೆ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಸಿಪಿ ಯೋಗೇಶ್ವರ್ ಪಕ್ಷಕ್ಕೆ ಬರುವ ಮುನ್ಸೂಚನೆ ಕೊಟ್ಟಿದ್ದಾರೆ.
ಸಂಡೂರಿನಿಂದ ತುಕಾರಾಮ್ ಪತ್ನಿಗೆ ಟಿಕೆಟ್ ನೀಡುತ್ತೇವೆ. ಇಂದು ಚನ್ನಪಟ್ಟಣ ಮತ್ತು ಶಿಗ್ಗಾಂವಿ ಟಿಕೆಟ್ ವಿಚಾರ ತೀರ್ಮಾನ ಆಗುತ್ತೆ. ಸಂಜೆ ವೇಳೆಗೆ ಮೂರು ಕ್ಷೇತ್ರಗಳ ಟಿಕೆಟ್ ಘೋಷಣೆ ಆಗುತ್ತದೆ ಎಂದು ತಿಳಿಸಿದರು.