ಭತ್ತಕ್ಕೆ 2.300 ರೂ. ಬಂಪರ್ ಬೆಲೆ – ರೈತರಿಗೆ ಕೇಂದ್ರದ ದೀಪಾವಳಿ ಗಿಫ್ಟ್
ಅನ್ನದಾತರಿಗೆ ಧೈರ್ಯ ತುಂಬಿದ ಪ್ರಲ್ಹಾದ್ ಜೋಶಿ

ಭತ್ತಕ್ಕೆ 2.300 ರೂ. ಬಂಪರ್ ಬೆಲೆ – ರೈತರಿಗೆ ಕೇಂದ್ರದ ದೀಪಾವಳಿ ಗಿಫ್ಟ್ಅನ್ನದಾತರಿಗೆ ಧೈರ್ಯ ತುಂಬಿದ ಪ್ರಲ್ಹಾದ್ ಜೋಶಿ

ಕೇಂದ್ರ ಸರ್ಕಾರ ಅನ್ನದಾತರಿಗೆ ದೀಪಾವಳಿ ಹಬ್ಬಕ್ಕೆ ಬೆಂಬಲ ಬೆಲೆಯ ಗಿಫ್ಟ್ ನೀಡಿದೆ. ಭತ್ತದ ಬೆಂಬಲ ಬೆಲೆ ಹೆಚ್ಚಿಸುವ ಮೂಲಕ ಭತ್ತ ಬೆಳೆಗಾರರ ಬದುಕಿಗೆ ಬೆಳಕು ಬೀರಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಕೇಂದ್ರ ಸರ್ಕಾರ ಭತ್ತದ ಬೆಳೆಗಾರರ ಬೆಂಬಲಕ್ಕೆ ನಿಂತಿರುವ ಬಗ್ಗೆ ಅಗತ್ಯ ಮಾಹಿತಿ ನೀಡಿದರು.

ಇದನ್ನೂ ಓದಿ:ನೀವು ಮಕ್ಕಳಿಗೆ ಕಾಜಲ್ ಹಚ್ಚುತ್ತೀರಾ?  ಮಗುವಿನ ಕಣ್ಣುಗಳಿಗೆ ಕಾಡಿಗೆ ಹಚ್ಚುವ ಮುನ್ನ ಈ ವಿಚಾರ ತಿಳಿದುಕೊಳ್ಳಿ!

2013-14 ರಲ್ಲಿ ಪ್ರತಿ ಕ್ವಿಂಟಲ್ ಭತ್ತಕ್ಕೆ ರೂ.1,310 ಇದ್ದು, ಈಗ ಅದನ್ನು 2,300 ರೂಪಾಯಿಗೆ ಹೆಚ್ಚಿಸಲಾಗಿದೆ. ಕೇಂದ್ರ ಆಹಾರ ಇಲಾಖೆ ಮತ್ತು ಭಾರತೀಯ ಆಹಾರ ನಿಗಮವು ಪ್ರಸಕ್ತ ಮುಂಗಾರು ಹಂಗಾಮಿನ 185 ಲಕ್ಷ ಟನ್ ಭತ್ತ ಮತ್ತು 124 ಲಕ್ಷ ಟನ್ ಅಕ್ಕಿ ಸಂಗ್ರಹಕ್ಕೆ ಯೋಜನೆ ಹಾಕಿಕೊಂಡಿದೆ ಎಂದಿದ್ದಾರೆ.

 

ಭತ್ತದ ಬೆಳೆಗಾರರ ಆತಂಕ ಪಡುವ ಅಗತ್ಯವಿಲ್ಲ. ಪ್ರಸ್ತುತ ಮುಂಗಾರು ಹಂಗಾಮು ಭತ್ತ ಸಂಗ್ರಹಕ್ಕೆ ಸಾಕಷ್ಟು ಸ್ಥಳವಿದೆ. ಪ್ರಸ್ತುತ 14 LMT ಭತ್ತ ಸಂಗ್ರಹಕ್ಕೆ ಸ್ಥಳಾವಕಾಶವಿದೆ. ಪಂಜಾಬಿನಲ್ಲಿ ಸಂಗ್ರಹಿಸಿರುವ ಅಕ್ಕಿಯನ್ನು ತ್ವರಿತವಾಗಿ ಸ್ಥಳಾಂತರಿಸಲಾಗುತ್ತಿದೆ. ಅಕ್ಟೋಬರ್ 1ರಿಂದ 2700 ಮಂಡಿಗಳಲ್ಲಿ ಭತ್ತ ಸಂಗ್ರಹಣೆ ಪ್ರಾರಂಭಿಸಿದ್ದು, ಇಂದಿಗೆ ಒಟ್ಟು 50 LMT ಭತ್ತವನ್ನು ಸಂಗ್ರಹಿಸಲಾಗಿದೆ ಎಂದರು.

Kishor KV

Leave a Reply

Your email address will not be published. Required fields are marked *