ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು – ಇ ಅನ್ನಪೂರ್ಣ ಭರ್ಜರಿ ಜಯಭೇರಿ
ಸಂಡೂರು ಕ್ಷೇತ್ರ ಮತ್ತೆ ಕಾಂಗ್ರೆಸ್ ಕೈ ಸೇರಿದೆ. ಇ ಅನ್ನಪೂರ್ಣ ಭರ್ಜರಿ ಗೆಲುವು ದಾಖಲಿಸಿದ್ದು, ಬಂಗಾರ ಹನುಮಂತು ಹೀನಾಯವಾಗಿ ಸೋಲು ಅನುಭವಿಸಿದ್ದಾರೆ. ಇವರಿಬ್ಬರಿಗೆ ಬಿದ್ದಿರೋ ಮತಗಳೆಷ್ಟು? ಮತಗಳ ಅಂತರ ಎಷ್ಟಿದೆ ಅನ್ನೋದರ ಬಗ್ಗೆ ಫುಲ್ ಡಿಟೇಲ್ಸ್ ಇಲ್ಲಿದೆ.
ಇದನ್ನೂ ಓದಿ:ಲೋಕಸಭೆ ಪ್ರವೇಶಿಸಿದ ಪ್ರಿಯಾಂಕಾ ಗಾಂಧಿ – ವಯನಾಡು ಉಳಿಸಿಕೊಂಡ ರಾಹುಲ್ ಗಾಂಧಿ ಸಹೋದರಿ
ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇ.ಅನ್ನಪೂರ್ಣ 93,051 ಮತಗಳೊಂದಿಗೆ ಗೆಲುವು ಸಾಧಿಸಿದ್ದಾರೆ. ಮೈತ್ರಿ ಅಭ್ಯರ್ಥಿ ಬಂಗಾರ ಹನುಮಂತು 83,483 ಮತಗಳನ್ನ ಪಡೆದು ಸೋಲು ಅನುಭವಿಸಿದ್ದಾರೆ. ಅನ್ನಪೂರ್ಣ 9,568 ಮತಗಳ ಅಂತರದಿಂದ ಗೆಲುವು ಪಡೆದಿದ್ದಾರೆ.
ಇ. ತುಕಾರಾಂ ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆದ್ರೆ ಅವರು ಸಂಸದರಾದ ಹಿನ್ನಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು. ಇದರಿಂದ ತೆರೆವಾದ ಸ್ಥಾನಕ್ಕೆ ತನ್ನ ಹೆಂಡತಿಗೆ ಟಿಕೆಟ್ ಕೊಡಿಸಿ ಗೆಲ್ಲಿಸಿಕೊಂಡು ಬಂದಿದ್ದಾರೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಹ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ತಂತ್ರ ರೂಪಿಸಿ ಯಶಸ್ವಿಯಾಗಿದ್ದಾರೆ. ಹಾಗೇ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ.
ಸಂಡೂರಿನಲ್ಲಿ ನಡೆಯಲಿಲ್ಲ ಗಣಿಧಣಿ ಆಟ
ಸಂಡೂರು ಕ್ಷೇತ್ರವನ್ನ ಜನಾರ್ದನ ರೆಡ್ಡಿ, ಬಿ. ಶ್ರೀರಾಮುಲು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ರು. ಉಪ ಚುನಾವಣೆ ದಿನಾಂಕ ಘೋಷಣೆಗೂ ಮೊದಲು ಸುಪ್ರೀಂಕೋರ್ಟ್ ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಬಳ್ಳಾರಿ ಭೇಟಿಗೆ ಇದ್ದ ನಿರ್ಬಂಧ ಸಡಿಲಿಸಿತು. ಆದ್ದರಿಂದ ಅವರು ಸಂಡೂರು ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡರು. ಈ ಮೂಲಕ ಸಿದ್ದರಾಯ್ಯಗೆ ತಿರುಗೇಟು ನೀಡಬೇಕು ಅಂತಾ ಅಂದುಕೊಂಡಿದ್ದರು. ಆದ್ರೆ ಎಲ್ಲಾ ಉಲ್ವಾಪಲ್ಟಾ ಆಗಿದ್ದು, ಗಣಿಧಣಿ ಆಟ ಸಂಡೂರಿನಲ್ಲಿ ನಡೆದಿಲ್ಲ.