ಬಸವನಗುಡಿಯಲ್ಲಿ ಕಡಲೆಕಾಯಿ ಪರಿಷೆ ಸಂಭ್ರಮ – ಇತಿಹಾಸ ಪ್ರಸಿದ್ಧ ಹಬ್ಬಕ್ಕೆ ಜನಸಾಗರ

ಬಸವನಗುಡಿಯಲ್ಲಿ ಕಡಲೆಕಾಯಿ ಪರಿಷೆ ಸಂಭ್ರಮ – ಇತಿಹಾಸ ಪ್ರಸಿದ್ಧ ಹಬ್ಬಕ್ಕೆ ಜನಸಾಗರ

ಬೆಂಗಳೂರು ಬಸವನಗುಡಿಯಲ್ಲಿ ಕಡಲೆಕಾಯಿ ಪರಿಷೆ ನಡೆಯುತ್ತಿದೆ. ಪ್ರತಿವರ್ಷ ಕಾರ್ತಿಕ ಮಾಸದ ಕೊನೆ ಸೋಮವಾರದಿಂದ ಎರಡು ದಿನಗಳ ಕಾಲ ಕಡಲೆಕಾಯಿ ಪರಿಷೆ ನಡೆಯುತ್ತದೆ. ಬಸವನಗುಡಿಯ ದೊಡ್ಡ ಬಸವನ ದೇವಸ್ಥಾನದ ಹತ್ತಿರ ಈ ಜಾತ್ರೆ ನಡೆಯುತ್ತದೆ.

ಇದನ್ನೂ ಓದಿ: ಕಾಂತಾರ ಕಲಾವಿದರು ತೆರಳುತ್ತಿದ್ದ ವಾಹನ ಪಲ್ಟಿ –  6 ಮಂದಿಗೆ ಗಂಭೀರ

ಬಸವನಗುಡಿಯಲ್ಲಿ ನೂರಾರು ವರ್ಷಗಳಿಂದ ಕಡಲೆಕಾಯಿ ಪರಿಷೆ ನಡೆಯುತ್ತಿದೆ. ಈ ಬಾರಿಯ ಕಡಲೆಕಾಯಿ ಪರಿಷೆ ನವೆಂಬರ್ 25ರಿಂದ ಆರಂಭವಾಗಿದೆ. ಆದರೆ, ಎಂದಿನಂತೆ ಎರಡು ದಿನಕ್ಕೆ ಮುಂಚಿತವಾಗಿಯೇ ಸಡಗರ ಶುರುವಾಗಿದೆ.

ಬಸವನಗುಡಿ ಕಡಲೆಕಾಯಿ ಪರಿಷೆ ಬೆಂಗಳೂರಿನ ಬಸವನಗುಡಿ ಪ್ರದೇಶದಲ್ಲಿ ನಡೆಯುವ ವಾರ್ಷಿಕ ನೆಲಗಡಲೆ ಜಾತ್ರೆಯಾಗಿದೆ. ಈ ಪರಿಷೆಯನ್ನು ಬುಲ್ ಟೆಂಪಲ್ ರಸ್ತೆಯ ಎರಡೂ ಬದಿಗಳಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರತಿವರ್ಷ ಎರಡು ದಿನಗಳ ಕಾಲ ನಡೆಯುತ್ತದೆ. ಬೆಂಗಳೂರು ಬೆಳೆದು ಮಹಾ ನಗರವಾಗುವ ಮೊದಲು, ಬಸವನಗುಡಿಯ ಪಕ್ಕದ ಹಳ್ಳಿಗಳಲ್ಲಿ ಸಾಕಷ್ಟು ನೆಲಗಡಲೆ ಬೆಳೆಯುತ್ತಿದ್ದರು. ಕಟಾವಿಗೆ ಸಿದ್ಧವಾದ ನೆಲಗಡಲೆಯನ್ನೆಲ್ಲಾ ಗದ್ದೆಗೆ ಬಂದು ದಾಳಿ ಮಾಡುತ್ತಿದ್ದ ಬಸವ ಹಾಳು ಮಾಡುತ್ತಿದ್ದ. ಹೀಗಾಗಿ ರೈತರು ತಮ್ಮ ಬೆಳೆಯನ್ನು ರಕ್ಷಿಸಿಕೊಳ್ಳಲು ತಮ್ಮ ಮೊದಲ ಬೆಳೆಯನ್ನು ಬಸವನಿಗೆ ಅರ್ಪಿಸುತ್ತೇವೆ ಎಂದು ಪ್ರಾರ್ಥಿಸಿಕೊಂಡರು. ಇದಾದ ಕೆಲ ಸಮಯಗಳ ನಂತರ ಬಸವನಗುಡಿ ಪ್ರದೇಶದಲ್ಲಿ ನಂದಿಯ ವಿಗ್ರಹವೊಂದು ದೊರಕಿತು. ನಂತರ ಈ ಸ್ಥಳದಲ್ಲಿ ನಾಡಪ್ರಭು ಕೆಂಪೇಗೌಡರು 16ನೇ ಶತಮಾನದಲ್ಲಿ ನಂದಿಯ ವಿಗ್ರಹದ ಸುತ್ತಲೂ ದೇವಾಯವನ್ನು ನಿರ್ಮಿಸಿದರು. ಇದನ್ನು ಬಸವನ ಗುಡಿ ಅಥವಾ ಬಿಗ್ ಬುಲ್ ಟೆಂಪಲ್ ಎಂದು ಕರೆಯಾಗುತ್ತದೆ. ಕಡಲೆಕಾಯಿ ಪರಿಷೆ ಈ ದೇವಾಲಯದ ಸುತ್ತ ಕೇಂದ್ರೀಕೃತವಾಗಿದೆ ಮತ್ತು ಬಸವ ರೈತರು ಅರ್ಪಿಸಿದ ನೆಲಗಡಲೆಯನ್ನು ಸ್ವೀಕರಿಸಿ ಆಶೀರ್ವದಿಸುತ್ತಾನೆ ಎಂಬುದು ರೈತರ ನಂಬಿಕೆ. ಪ್ರತಿ ವರ್ಷ ಕಾರ್ತಿಕ ಮಾಸದ ಕೊನೆಯ ಸೋಮವಾರದಂದು ಬಸವನಗುಡಿ ಕಡಲೆ ಕಾಯಿ ಪರಿಷೆ ನಡೆಯುತ್ತದೆ. ಕಾರ್ತಿಕ ಮಾಸದ ಸೋಮವಾರವು ಭಗವಾನ್ ಶಿವನ ನೆಚ್ಚಿನ ದಿನವಾಗಿದ್ದು, ನಂದಿಯು ಶಿವನ ವಾಹನವಾಗಿರುವುದರಿಂದ ನಂದಿಗೆ ಈ ದಿನಗಳು ಪ್ರಿಯವಾಗಿದೆ. ಆದ್ದರಿಂದ ಕಾರ್ತಿಕ ಮಾಸದಲ್ಲಿ ಕಡೆಲೆಕಾಯಿ ಪರಿಷೆ ನಡೆಯುತ್ತದೆ.

suddiyaana

Leave a Reply

Your email address will not be published. Required fields are marked *