ಸಂವಿಧಾನ ಪುಸ್ತಕ ಹಿಡಿದು ಲೋಕಸಭಾ ಸಂಸದೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕ ಗಾಂಧಿ

ಸಂವಿಧಾನ ಪುಸ್ತಕ ಹಿಡಿದು ಲೋಕಸಭಾ ಸಂಸದೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕ ಗಾಂಧಿ

ಪ್ರಿಯಾಂಕ ಗಾಂಧಿ ಮೊದಲ ಬಾರಿಗೆ ಸಂಸದೆಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕೈಯಲ್ಲಿ ಸಂವಿಧಾನ ಪುಸ್ತಕ ಹಿಡಿದು ಲೋಕಸಭಾ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕರಿಸಿದರು.

ಇದನ್ನೂ ಓದಿ: ಬೀದಿಗಿಳಿದ ಬಾಂಗ್ಲಾ ಹಿಂದೂಗಳು! – ಸನಾತನ ಸಂತನಿಗೆ ಚಿತ್ರಹಿಂಸೆ!?

ಲೋಕಸಭಾ ಚುನಾವಣೆಯಲ್ಲಿ ರಾಹುಲ್‌ ಗಾಂಧಿ ವಯನಾಡ್‌ ಮತ್ತು ರಾಯ್‌ಬರೇಲಿ ಕ್ಷೇತ್ರಗಳಿಂದ ಸ್ಪರ್ಥಿಸಿ ಗೆದ್ದಿದ್ದರು. ಕೊನೆಗೆ ವಯನಾಡ್‌ ಕ್ಷೇತ್ರವನ್ನು ಬಿಟ್ಟರು. ಅವರಿಂದ ತೆರವಾದ ಸ್ಥಾನಕ್ಕೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದ್ದರು. ನ.23 ರಂದು ನಡೆದ ಮತ ಎಣಿಕೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ವಯನಾಡ್‌ನಿಂದ ಭಾರಿ ಅಂತರದ ಗೆಲುವು ದಾಖಲಿಸಿದರು. ಅವರು 6.22 ಲಕ್ಷ ಮತಗಳನ್ನು ಪಡೆದರು. ಎರಡನೇ ಸ್ಥಾನದಲ್ಲಿರುವ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಸತ್ಯನ್ ಮೊಕೇರಿಗಿಂತ ನಾಲ್ಕು ಲಕ್ಷಕ್ಕಿಂತ ಹೆಚ್ಚು ಮತ್ತು ಬಿಜೆಪಿಯ ನವ್ಯಾ ಹರಿದಾಸ್‌ಗಿಂತ 5.12 ಲಕ್ಷ ಹೆಚ್ಚು ಮತಗಳ ಅಂತರದಿಂದ ಗೆದ್ದು ದಾಖಲೆ ಬರೆದಿದ್ದಾರೆ.

ಪ್ರಿಯಾಂಕಾ ಗಾಂಧಿ ಅವರು ಈಗ ಸಂಸತ್‌ ಪ್ರವೇಶಿಸಿದ ಗಾಂಧಿ ಕುಟುಂಬದ ಮೂರನೇ ಸದಸ್ಯರಾಗಿದ್ದಾರೆ. ಅವರ ತಾಯಿ ಸೋನಿಯಾ ಗಾಂಧಿ ರಾಜಸ್ಥಾನದಿಂದ ಪಕ್ಷದ ರಾಜ್ಯಸಭಾ ಸಂಸದರಾಗಿದ್ದಾರೆ.

Shwetha M

Leave a Reply

Your email address will not be published. Required fields are marked *