ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಪುಟದಿಂದ ಒಪ್ಪಿಗೆ – ಪ್ರಸಕ್ತ ಅಧಿವೇಶನದಲ್ಲೇ ಮಂಡನೆ?
ದೇಶದಲ್ಲಿ ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಸದ್ಯ ಪರ ವಿರೋಧ ಚರ್ಚೆಗಳು ನಡೆಯುತ್ತಿದೆ. ಈ ನಡುವೆಯೇ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇದೇ ಡಿ.16 ರಂದು ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡಿಸಲಿದ್ದಾರೆಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಪ್ರಕಟ-ಟಗರು ಪುಟ್ಟಿ ಶ್ರೇಯಾಂಕ ಲೆಕ್ಕಕ್ಕಿಲ್ವಾ?
ಅರ್ಜುನ್ ರಾಮ್ ಮೇಘವಾಲ್ ಅವರು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳ (ತಿದ್ದುಪಡಿ) ಮಸೂದೆ, 2024 ಅನ್ನು ಸಹ ಮಂಡಿಸಲಿದ್ದಾರೆ. ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ ಕಾಯಿದೆ, 1963, ದೆಹಲಿ ಸರ್ಕಾರದ ರಾಷ್ಟ್ರೀಯ ರಾಜಧಾನಿ ಪ್ರದೇಶ ಕಾಯ್ದೆ, 1991 ಮತ್ತು ಜಮ್ಮುಗೆ ತಿದ್ದುಪಡಿ ಮಾಡಲು ಮತ್ತಷ್ಟು ಮಸೂದೆಯನ್ನು ಪರಿಚಯಿಸಲು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆ, 2019 ಮಸೂದೆಯನ್ನು ಮಂಡನೆ ಮಾಡಲಿದ್ದಾರೆ.
ಪ್ರಧಾನಿ ಮೋದಿ ನೇತೃತ್ವದ ಸಂಪುಟ ಈಚೆಗೆ ಮಸೂದೆಗೆ ಒಪ್ಪಿಗೆ ನೀಡಿತ್ತು. ಒಪ್ಪಿಗೆ ಬೆನ್ನಲ್ಲೇ ಈಗ ಬಿಲ್ ಮಂಡಿಸಲು ತಯಾರಿ ನಡೆಸಲಾಗುತ್ತಿದೆ. ಮಸೂದೆ ಮಂಡನೆ ನಂತರ ಚರ್ಚೆಗಾಗಿ ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) ಕಳುಹಿಸಲಾಗುವುದು ಎಂದು ಹೇಳಲಾಗುತ್ತಿದೆ.