ಡ್ರೋನ್ ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ- ಅನುಮತಿ ಪಡೆಯದೇ ತಪ್ಪು ಮಾಡಿದ್ರಾ ಪ್ರತಾಪ್?

ಡ್ರೋನ್ ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ- ಅನುಮತಿ ಪಡೆಯದೇ ತಪ್ಪು ಮಾಡಿದ್ರಾ ಪ್ರತಾಪ್?

ಡ್ರೋನ್ ಪ್ರತಾಪ್ ಮಾಡಿಕೊಂಡಿರೋ ಎಡವಟ್ಟಿಗೆ ಈಗ ಜೈಲು ಪಾಲಾಗಿದ್ದಾರೆ. ತುಮಕೂರಿನಲ್ಲಿ ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟಿಸಿದ ಪ್ರಕರಣದಲ್ಲಿ ಡ್ರೋನ್​ ಪ್ರತಾಪ್​ಗೆ 10 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇದನ್ನೂ ಓದಿ: ಮತ್ತೊಂದು ಪ್ರಯೋಗ.. ಡ್ರೋನ್ ಪ್ರತಾಪ್ ಅರೆಸ್ಟ್! – ಬುದ್ಧಿ ಕಲಿಯೋದೇ ಇಲ್ವಾ ಪ್ರತಾಪ್?

ತುಮಕೂರಿನಲ್ಲಿ ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟಿಸಿದ ಪ್ರಕರಣದಲ್ಲಿ ಡ್ರೋನ್ ಪ್ರತಾಪ್ ಅವರನ್ನು ಮಿಡಿಗೇಶಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದರು. ಅನುಮತಿಯಿಲ್ಲದೆ ಸ್ಫೋಟಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಪ್ರತಾಪ್ ಗೆ ಮಧುಗಿರಿ ಜೆಎಂಎಫ್‌ಸಿ ನ್ಯಾಯಾಲಯವು ಡಿಸೆಂಬರ್ 26 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಘಟನೆಯ ಸಂಪೂರ್ಣ ವರದಿ ನೀಡುವಂತೆ ಮುಖ್ಯಮಂತ್ರಿಗಳ ಕಚೇರಿ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮಧುಗಿರಿ ಸಿಪಿಐ ಕಚೇರಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ತೆರಳಿ ಮಾಹಿತಿ ಪಡೆದುಕೊಂಡರು. ಬಳಿಕ, ಅಧಿಕಾರಿಗಳು ಸೋಡಿಯಂ ಸ್ಫೋಟಗೊಂಡ ಜನಕಲೋಟಿ ಬಳಿಯ ಕೃಷಿಹೊಂಡಕ್ಕೆ ತೆರಳಿ ನೀರು ಮತ್ತು ಸ್ಥಳದಲ್ಲಿದ್ದ ಕೆಮಿಕಲ್ ಸ್ಯಾಂಪಲ್ ಸಂಗ್ರಹಿಸಿ ಲ್ಯಾಬ್​ಗೆ ಕಳುಹಿಸಿದ್ದಾರೆ.

ಪೊಲೀಸರ ಮನವಿ ಮೇರೆಗೆ ನ್ಯಾಯಾಲಯ ಡ್ರೋನ್​ ಪ್ರತಾಪ್​ ಅವರನ್ನು ಪೊಲೀಸ್​ ಕಸ್ಟಡಿಗೆ ನೀಡಿದ್ದರು. ಸೋಮವಾರ ಪೊಲೀಸ್​ ಕಸ್ಟಡಿ ಅಂತ್ಯವಾಗಿದ್ದು, ಪೊಲೀಸರು ಡ್ರೋನ್​ ಪ್ರತಾಪ್​ ಅವರನ್ನು ನಾಯ್ಯಾಲಯದ ಮುಂದೆ ಹಾಜರುಪಡಿಸಿದರು. ನ್ಯಾಯಾಲಯ ಡ್ರೋನ್​ ಪ್ರತಾಪ್​ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ. ಪ್ರಕರಣ ಸಂಬಂಧ ಡ್ರೋನ್​ ಪ್ರತಾಪ್​ ಅವರ ವಿರುದ್ಧ ಮಿಡಿಗೇಶಿ ಠಾಣೆ ಪೊಲೀಸರು BNS ಸೆಕ್ಷನ್ 288 ಮತ್ತು ಸ್ಫೋಟ ವಸ್ತು ನಿಯಂತ್ರಣ ಕಾಯ್ದೆ 3ರ ಅಡಿ ಪ್ರಕರಣ ದಾಖಲಿಸಿದ್ದಾರೆ.

ಜಮೀನು ಮಾಲೀಕನಿಗೆ ತಾನು ಸೋಡಿಯಂನಿಂದ ಸ್ಫೋಟಿಸುತ್ತಿರುವ ವಿಚಾರ ತಿಳಿಸದೆ, ಪ್ಲಾಸಿಕ್​ ಕವರ್​​ನಲ್ಲಿ ಸೋಡಿಯಂ ಉಂಡೆಯನ್ನು ಹಾಕಿ ಕೃಷಿ ಹೊಂಡದಲ್ಲಿ ಡ್ರೋನ್​ ಪ್ರತಾಪ್​ ಎಸೆದಿದ್ದಾರೆ. ಆಗ, ದೊಡ್ಡ ಪ್ರಮಾಣದ ಸದ್ದಿನೊಂದಿಗೆ ಸೋಡಿಯಂ ಸ್ಫೋಟಗೊಂಡಿದೆ. ಇದರಿಂದ ಅಕ್ಕ-ಪಕ್ಕದ ತೋಟದಲ್ಲಿದ್ದ ಜನರು ಮತ್ತು ಮನೆಯವರು ಗಾಭರಿಗೊಂಡಿದ್ದರು. ಇಂತಹ ಪ್ರಯೋಗಗಳಿಗೆ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು. ಸ್ಥಳೀಯ ಪೊಲೀಸ್ ಠಾಣೆ ಹಾಗೂ ಸಂಬಂಧಿಸಿದ ಇಲಾಖೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಕೃಷಿ ಇಲಾಖೆ ಸೇರಿದಂತೆ ಹಲವು ಇಲಾಖೆಯ ಅನುಮತಿ ಪಡೆಯಬೇಕು. ಆದರೆ, ಡ್ರೋನ್​ ಪ್ರತಾಪ್​ ಯಾವುದೇ ಅನುಮತಿಯನ್ನು ಪಡೆದಿರಲಿಲ್ಲ ಎಂದು ಮಾಹಿತಿ ದೊರೆತಿದೆ.

suddiyaana

Leave a Reply

Your email address will not be published. Required fields are marked *