ಶಬರಿಮಲೆ ಸನ್ನಿಧಿಯಲ್ಲಿ ಕನಕಪುರದ ಭಕ್ತ ಆತ್ಮಹತ್ಯೆ – ಅಯ್ಯಪ್ಪನ ದರ್ಶನಕ್ಕೆ ತೆರಳಿ ಪ್ರಾಣ ಬಿಟ್ಟಿದ್ಯಾಕೆ?
ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ತೆರಳಿದ ಭಕ್ತರೊಬ್ಬರು ಅಯ್ಯಪ್ಪನ ಸನ್ನಿಧಾನದಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಯ್ಯಪ್ಪನ ದರ್ಶನಕ್ಕೆ ಹೋಗಿದ್ದ ಮಾಲಾಧಾರಿ ಭಕ್ತರೊಬ್ಬರು ಈ ರೀತಿ ದುರಂತ ಅಂತ್ಯ ಕಂಡಿದ್ದಾರೆ.
ಇದನ್ನೂ ಓದಿ: Byv 150 ಕೋಟಿ ಆಮಿಷಕ್ಕೆ ಟ್ವಿಸ್ಟ್.. ವಿಜಯೇಂದ್ರ ಬೆನ್ನಿಗೆ ನಿಂತ್ರಾ ಯತ್ನಾಳ್? – ‘ಕೈ’ ಆರೋಪಕ್ಕೆ BJP ತಿರುಗುಮಂತ್ರ!
ಶಬರಿಮಲೆ ದೇಗುಲದ ಸ್ಕೈವಾಕ್ ಮೇಲಿಂದ ಬಿದ್ದು ಅಯ್ಯಪ್ಪ ಭಕ್ತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕನಕಪುರದ ಮದ್ದೂರಮ್ಮ ಬೀದಿ ನಿವಾಸಿ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಭಕ್ತ. ಮೃತ ಕುಮಾರ್ ಗಾರೆ ಕೆಲಸ ಮಾಡಿಕೊಂಡಿದ್ದರು. ಮೂರು ದಿನದ ಹಿಂದೆ ಕುಮಾರ್ ಸೇರಿ 6 ಮಂದಿ ರಾಮನಗರ ಜಿಲ್ಲೆಯಿಂದ ಶಬರಿಮಲೆಗೆ ತೆರಳಿದ್ದರು. ಅಯ್ಯಪ್ಪನ ದರ್ಶನ ಪಡೆದ ಬಳಿಕ ದೇವಾಲಯದ ಸ್ಕೈವಾಕ್ ಶೆಲ್ಟರ್ ಮೇಲಿನಿಂದ ಜಿಗಿದು ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.. ಕುಮಾರ್ ಅವರಿಗೆ 40 ವರ್ಷ ವಯಸ್ಸಾಗಿತ್ತು.
ಸನ್ನಿಧಾನಂನಲ್ಲಿ ಫ್ಲೈಓವರ್ನಿಂದ ಬಿದ್ದ ರಭಸಕ್ಕೆ ಕೈ ಮತ್ತು ಕಾಲಿಗೆ ಗಾಯವಾಗಿತ್ತು. ತಕ್ಷಣ ಅವರಿಗೆ ಸನ್ನಿಧಾನಂ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಹೆಚ್ಚುವರಿ ಚಿಕಿತ್ಸೆಗಾಗಿ ಕೊಟ್ಟಾಯಂ ವೈದ್ಯಕೀಯ ಕಾಲೇಜಿಗೆ ಕರೆದೊಯ್ದಿದ್ದಾರೆ. ಆದರೆ ಪರಿಸ್ಥಿತಿ ಗಂಭೀರವಾಗಿದ್ದರಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.