ಅಲ್ಲು ಅರ್ಜುನ್‌ಗೆ ಮತ್ತೆ ಸಂಕಷ್ಟ – ಮತ್ತೆ ಜೈಲಿಗೆ ಹೋಗ್ತಾನಾ ಪುಷ್ಪ?
ಪೊಲೀಸರು ಜಾಮೀನು ಸುಪ್ರೀಂ ಮೆಟ್ಟಿಲೇರುವ ಸಾಧ್ಯತೆ

ಅಲ್ಲು ಅರ್ಜುನ್‌ಗೆ ಮತ್ತೆ ಸಂಕಷ್ಟ – ಮತ್ತೆ ಜೈಲಿಗೆ ಹೋಗ್ತಾನಾ ಪುಷ್ಪ?ಪೊಲೀಸರು ಜಾಮೀನು ಸುಪ್ರೀಂ ಮೆಟ್ಟಿಲೇರುವ ಸಾಧ್ಯತೆ

ಪುಷ್ಪ 2 ಪ್ರೀಮಿಯರ್  ಅಭಿಮಾನಿ ಸಾವಿನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ಜಾಮೀನಿನ ಮೇಲೆ ನಟ ಅಲ್ಲು ಅರ್ಜುನ್ ಹೊರಬಂದಿದ್ದಾರೆ. ಆದರೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಡಿ.13 ರಂದು ಹೈದರಾಬಾದ್‌ನಲ್ಲಿ ಚಿಕ್ಕಡಪಲ್ಲಿ ಪೊಲೀಸರು ಅಲ್ಲು ಅರ್ಜುನ್ ಅವರನ್ನು ಬಂಧಿಸಿದ್ದರು. ಬಳಿಕ ತೆಲಂಗಾಣ ಹೈಕೋರ್ಟ್ಗೆ ಹಾಜರುಪಡಿಸಿದಾಗ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು. ಕೋರ್ಟ್ ಆದೇಶದ ಬೆನ್ನಲ್ಲೇ ಅಲ್ಲು ಅರ್ಜುನ್ ಅವರನ್ನು ಚಂಚಲಗೂಡ ಜೈಲಿಗೆ ಶಿಫ್ಟ್ ಮಾಡುವ ಪ್ರಕ್ರಿಯೆ ಆರಂಭವಾಗಿತ್ತು. ತದನಂತರ ತುರ್ತು ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ 50,000 ವೈಯಕ್ತಿಕ ಬಾಂಡ್ ಆಧಾರದ ಮೇಲೆ 4 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.

ಇದನ್ನೂ ಓದಿ : ಪವಿತ್ರಾ ರಿಲೀಸ್‌..ಅಡಕತ್ತರಿಯಲ್ಲಿ ದಾಸ!.. ದರ್ಶನ್‌ನ ಬಿಡಲ್ವಾ ಪವಿತ್ರಾಗೌಡ? – ವಿಜಯಲಕ್ಷ್ಮೀ ಪ್ರಮಾಣ ಮಾಡಿಸಿಕೊಂಡ್ರಾ?

ಈ ಪ್ರಕರಣಕ್ಕೆ ಸಂಬಂಧ ಇದೀಗ ತೆಲಂಗಾಣ ಪೊಲೀಸ್ ಅಧಿಕಾರಿಗಳು ಅಲ್ಲು ಅರ್ಜುನ್‌ಗೆ ನೀಡಿರುವ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಏನಿದುಪ್ರಕರಣ ?
ಡಿ.04 ರಂದು ಪುಷ್ಪ 2 ಸಿನಿಮಾದ ಪ್ರೀಮಿಯರ್ ಶೋ ವೇಳೆ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದರು. ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಅವರೊಂದಿಗೆ ಶೋಗೆ ಬಂದಿದ್ದ ಅಲ್ಲು ಅರ್ಜುನ್ ಅವರನ್ನು ನೋಡಲು ಬೃಹತ್ ಜನಸ್ತೋಮ ಜಮಾಯಿಸಿತ್ತು. ಈ ವೇಳೆ ನಡೆದ ಗಲಾಟೆಯಲ್ಲಿ ಥಿಯೇಟರ್‌ನ ಮುಖ್ಯ ಗೇಟ್ ಕುಸಿದು ನೂಕುನುಗ್ಗಲು ಉಂಟಾಯಿತು. ಇದರಿಂದ ಅವ್ಯವಸ್ಥೆ ಉಂಟಾಗಿ ಕಾಲ್ತುಳಿತಕ್ಕೊಳಗಾಗಿ 35 ವರ್ಷದ ಮಹಿಳೆ ಪ್ರಾಣ ಕಳೆದುಕೊಂಡಿದ್ದು, ಅವರ 9 ವರ್ಷದ ಮಗನಿಗೆ ತೀವ್ರ ಗಾಯಗಳಾಗಿದ್ದವು. ಈ ಘಟನೆ ಕುರಿತಂತೆ ನಟ ಅಲ್ಲು ಅರ್ಜುನ್ ಹಾಗೂ ಇನ್ನೂ ಇತರರ ವಿರುದ್ಧ ದೂರು ದಾಖಲಾಗಿತ್ತು.

Kishor KV

Leave a Reply

Your email address will not be published. Required fields are marked *