ನಟ ಶಿವರಾಜ್‌ ಕುಮಾರ್‌ ಗೆ ವಿಶ್ವದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಚಿಕಿತ್ಸೆ – ಭಾರತ ಮೂಲದ ಮುರುಗೇಶ್ ನೇತೃತ್ವದ ತಜ್ಞವೈದ್ಯರಿಂದ ಚಿಕಿತ್ಸೆ

ನಟ ಶಿವರಾಜ್‌ ಕುಮಾರ್‌ ಗೆ ವಿಶ್ವದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಚಿಕಿತ್ಸೆ – ಭಾರತ ಮೂಲದ ಮುರುಗೇಶ್ ನೇತೃತ್ವದ ತಜ್ಞವೈದ್ಯರಿಂದ ಚಿಕಿತ್ಸೆ

ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಿದ್ದಾರೆ.  ಶಸ್ತ್ರ ಚಿಕಿತ್ಸೆಗಾಗಿ ಬುಧವಾರ ಬೆಂಗಳೂರಿನಿಂದ ಅಮೆರಿಕಗೆ ಬುಧವಾರ ಪ್ರಯಾಣ ಬೆಳೆಸಿದ್ದಾರೆ. ಶಿವರಾಜ್‌ ಕುಮಾರ್‌ ಗೆ ವಿಶ್ವದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ದೊಡ್ಮನೆಯಲ್ಲಿ ಹಳೇ ಸೇಡಿನ ಜಿದ್ದಾಜಿದ್ದಿ – ಗೌತಮಿಯನ್ನು ಸ್ವಿಮ್ಮಿಂಗ್​ ಪೂಲ್​​ಗೆ ತಳ್ಳಿದ ಮೋಕ್ಷಿತಾ..!

ಡಿಸೆಂಬರ್ 24ರಂದು ಫ್ಲೋರಿಡಾ ರಾಜ್ಯದ ಮಿಯಾಮಿಯಲ್ಲಿರುವ ಮಿಯಾಮಿ ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌ (MCI) ಆಸ್ಪತ್ರೆಯಲ್ಲಿ ಶಿವರಾಜ್‌ಕುಮಾರ್ ಗೆ ಸರ್ಜರಿ ನಡೆಯಲಿದೆ. ಡಾಕ್ಟರ್ ಮುರುಗೇಶ್ ನೇತೃತ್ವದಲ್ಲಿ ಶಸ್ತ್ರ ಚಿಕಿತ್ಸೆ ನಡೆಯಲಿದೆ. ಬರೋಬ್ಬರಿ ಒಂದು ತಿಂಗಳು ಕಾಲ ಅಮೆರಿಕದಲ್ಲೇ ಶಿವರಾಜ್‌ಕುಮಾರ್ ಉಳಿದುಕೊಳ್ಳಲಿದ್ದಾರೆ. ಜನವರಿ 25ರಂದು ಅಮೆರಿಕದಿಂದ ಶಿವರಾಜ್‌ಕುಮಾರ್ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಮಿಯಾಮಿ ಕ್ಯಾನ್ಸರ್ ಇನಿಸ್ಟಿಟ್ಯೂಟ್‌ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ದಾಖಲಾಗಲಿರುವ ಶಿವರಾಜ್‌ಕುಮಾರ್‌ಗೆ ಅಲ್ಲಿ ಭಾರತ ಮೂಲದ ಮುರುಗೇಶ್ ನೇತೃತ್ವದ ತಜ್ಞವೈದ್ಯರ ತಂಡದಿಂದ ಚಿಕಿತ್ಸೆ ನಡೆಯಲಿದೆ. ಮಿಯಾಮಿ ಕ್ಯಾನ್ಸರ್ ಇನಿಸ್ಟಿಟ್ಯೂಟ್‌ ನೆಕ್ಷ್ಟ್‌ ಜನರೇಶನ್ ಕ್ಯಾನ್ಸರ್ ಚಿಕಿತ್ಸಾ ಆಸ್ಪತ್ರೆಯಾಗಿದ್ದು, ವೈದ್ಯಕೀಯ ಆರೈಕೆ, ಸಂಶೋಧನೆ, ಹಾಗೂ ಆಧುನಿಕ ತಂತ್ರಜ್ಞಾನಕ್ಕೆ ಹೆಸರುವಾಸಿಯಾಗಿದೆ.

ವಿಶ್ವಮಾನ್ಯತೆ ಪಡೆದ ಆಂಕೋಲಾಜಿಸ್ಟ್‌ಗಳೆಂದು ಕರೆಯಲಾಗುವ ತಜ್ಞ ವೈದ್ಯರ ತಂಡ ಇದೆ. ಇವರು ಜಗತ್ತಿನ ಉನ್ನತ ಕ್ಯಾನ್ಸರ್ ಕೇಂದ್ರಗಳಿಂದ ನೇಮಕಗೊಂಡ ವೈದ್ಯರುಗಳಾಗಿದ್ದು, ಇಲ್ಲಿ ಶಸ್ತ್ರ ಚಿಕಿತ್ಸೆಯಿಂದ ಗುಣವಾಗುವ ಪ್ರಮಾಣ ಹೆಚ್ಚಿದೆ. ಈ ಕಾರಣಕ್ಕೆ ಹಲವು ದೇಶಗಳಿಂದ ಚಿಕಿತ್ಸೆಗೆ ಇಲ್ಲಿಗೆ ಆಗಮಿಸುತ್ತಿದ್ದಾರೆ.

Shwetha M

Leave a Reply

Your email address will not be published. Required fields are marked *