ಸಿ.ಟಿ ರವಿ ಬಳಸಿದ ಪದ ಸರಿನಾ? – ಲಕ್ಷ್ಮೀ ಹೆಬ್ಬಾಳ್ಕರ್ ಕಣ್ಣೀರು
ವಿಧಾನಸಭೆ ಚಳಿಗಾಲದ ಅಧಿವೇಶನದ ಕೊನೆಯ ದಿನವಾದ ಗುರುವಾರ ಕಲಾಪದಲ್ಲಿ ಭಾರೀ ಹೈಡ್ರಾಮ ಉಂಟಾಗಿತ್ತು. ಪರಿಷತ್ನಲ್ಲಿ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದ ಹೇಳಿಕೆಯ ಚರ್ಚೆಯ ಸಂದರ್ಭದಲ್ಲಿ ಗದ್ದಲ ಉಂಟಾಗಿದೆ. ಈ ವೇಳೆ ಬಿಜೆಪಿ ಪರಿಷತ್ ಸದಸ್ಯ ಸಿ ಟಿ ರವಿ ತಮ್ಮ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿದ್ದಾರೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಆರೋಪ ಮಾಡಿದ್ದರು. ಇದೀಗ ಈ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದ್ದು, ನಾನು ಕೊಲೆಗಡುಕ ಅಂದಿದ್ದು ನಿಜ, ಆದ್ರೆ ಅವರು ಬಳಸಿದ ಪದ ಸರಿನಾ? ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ನಿವೃತ್ತಿ ಸುಳಿವು ಬಿಟ್ಟುಕೊಟ್ಟ ರೋಹಿತ್ ಶರ್ಮಾ – ಕೊಹ್ಲಿಯೂ ಅದೇ ತೀರ್ಮಾನ ಮಾಡ್ತಾರಾ?
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಲಕ್ಷ್ಮೀ ಹೆಬ್ಬಾಳ್ಕರ್, ರಾಜಕಾರಣದಲ್ಲಿ ರೋಷಾವೇಶವಾಗಿ ಮಾತನಾಡಬಹುದು, ಆದ್ರೆ ಸಿ.ಟಿ ರವಿ ಹೇಳಿದ ಪದ ಹೇಳೋದಕ್ಕೂ ಅಸಹ್ಯವಾಗುತ್ತೆ. ಅವರ ಪರವಾಗಿ ನಿಂತು ಎಲ್ಲರೂ ಧೃತರಾಷ್ಟ್ರರಾದ್ರು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಣ್ಣೀರಿಟ್ಟಿದ್ದಾರೆ.
ನಿನ್ನೆ ಸದನದಲ್ಲಿ ಅಂಬೇಡ್ಕರ್ ಅವರ ಬಗ್ಗೆ ಅವಹೇಳನ ಖಂಡಿಸಿ ಧರಣಿ ಮಾಡುತ್ತಿದ್ದೆವು. ಧರಣಿ ಮಾಡಿ ನಾವೆಲ್ಲ ಕೂತಿದ್ದೆವು ಸಭಾಪತಿಗಳು ಅಡ್ಜರ್ನ್ ಮಾಡಿದ್ದರು. ನಾನು ನನ್ನ ಸೀಟಲ್ಲಿ ಕೂತಿದ್ದೆ ನಮ್ಮ ನಾಯಕ ರಾಹುಲ್ ಗಾಂಧಿಗೆ ಡ್ರಗ್ ಅಡಿಕ್ಟ್ ಅಂತ 3-4 ಬಾರಿ ಹೇಳಿದರು, ನಾನು ಸುಮ್ಮನೆ ಕುಳಿತಾಗ ಮತ್ತೆ ಹೇಳಿದರು. ಇದರಿಂದ ಸಿಟ್ಟಾಗಿ ನಾವು ಅವರ ಅಪಘಾತ ಪ್ರಕರಣ ಪ್ರಸ್ತಾಪಿಸಿದೆ. ಅದಕ್ಕೆ ಆ ಪದ ಉಪಯೋಗಿಸಿದ್ದಾರೆ. ಒಮ್ಮೆ ಅಲ್ಲ ಹತ್ತು ಬಾರಿ ಹೇಳಿದ್ದಾರೆ ಎಂದು ಕಣ್ಣೀರಿಟ್ಟಿದ್ದಾರೆ.
ನಾನು ಒಬ್ಬ ತಾಯಿ ಇದ್ದೀನಿ, ಅಕ್ಕ ಇದ್ದೀನಿ. ರಾಜಕಾರಣದಲ್ಲಿ ರೋಷಾವೇಶವಾಗಿ ಮಾತನಾಡಬಹುದು, ನಾನು ಯಾರಿಗೂ ಕಾಟ ಕೊಟ್ಟಿಲ್ಲ. ಆದ್ರೆ ಸಿ.ಟಿ ರವಿ ಅವರು ಹೇಳಿದ ಪದ ಹೇಳೋದಕ್ಕೂ ಅಸಹ್ಯ ಆಗುತ್ತೆ. ಅವರ ಪರವಾಗಿ ನಿಂತು ಎಲ್ಲರೂ ಧೃತರಾಷ್ಟ್ರ ಆದ್ರು. ಡ್ರಗ್ ಅಡಿಕ್ಟ್ ಅಂದಿದ್ದಕ್ಕೆ ನೀವು ಆಕ್ಸಿಡೆಂಟ್ ಮಾಡಿ ಮೂವರ ಕೊಲೆಗಾರ ಎಂದಿದ್ದೆ. ಅದಕ್ಕೆ ಆ ರೀತಿ ಮಾತನಾಡಿದ್ದಾರೆ. ಸದನದಲ್ಲಿ ನ್ಯಾಯ ಸಿಗದ ಬಗ್ಗೆ ನಾನು ಏನೂ ಹೇಳಲ್ಲ. ನನ್ನ ಸೊಸೆ ನನ್ನ ಮಗ ನನಗೆ ಧೈರ್ಯ ತುಂಬಿದ್ದರೆಂದು ತಿಳಿಸಿದ್ದಾರೆ.