ವಿಂಡೀಸ್ ಮಣಿಸಿ ಸರಣಿ ಗೆದ್ದ ಇಂಡಿಯಾ – ಸ್ಮೃತಿ ಮಂಧಾನ ವಿಶ್ವದಾಖಲೆ, ರಿಚಾ ಘೋಷ್… ವೇಗದ ಅರ್ಧಶತಕ

ವಿಂಡೀಸ್ ಮಣಿಸಿ ಸರಣಿ ಗೆದ್ದ ಇಂಡಿಯಾ – ಸ್ಮೃತಿ ಮಂಧಾನ ವಿಶ್ವದಾಖಲೆ, ರಿಚಾ ಘೋಷ್… ವೇಗದ ಅರ್ಧಶತಕ

ಭಾರತ ಮಹಿಳಾ ಕ್ರಿಕೆಟ್ ತಂಡವು ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯನ್ನ ಕೈವಶ ಮಾಡಿಕೊಂಡಿದೆ. ಮೂರನೇ ಮತ್ತು ನಿರ್ಣಾಯಕ ಪಂದ್ಯದಲ್ಲಿ ಭಾರತ ವನಿತಾ ಪಡೆ 60 ರನ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿತು. ಇದರೊಂದಿಗೆ 3 ಪಂದ್ಯಗಳ ಸರಣಿಯನ್ನು 2-1 ಅಂತರದಲ್ಲಿ ವಶಪಡಿಸಿಕೊಂಡಿದೆ. ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಬರೋಬ್ಬರಿ 217 ರನ್​ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್ ತಂಡ157 ರನ್‌ಗಳಿಸಿ ಸೋಲೊಪ್ಪಿಕೊಂಡಿತು.

ಇದನ್ನೂ ಓದಿ:ನಿವೃತ್ತಿ ಸುಳಿವು ಬಿಟ್ಟುಕೊಟ್ಟ ರೋಹಿತ್ ಶರ್ಮಾ – ಕೊಹ್ಲಿಯೂ ಅದೇ ತೀರ್ಮಾನ ಮಾಡ್ತಾರಾ?

ಹ್ಯಾಟ್ರಿಕ್ ಅರ್ಧಶತಕದೊಂದಿಗೆ ಟಿ20 ಕ್ರಿಕೆಟ್​ನಲ್ಲಿ ವಿಶ್ವದಾಖಲೆ ಬರೆದಿದ್ದಾರೆ ಸ್ಮೃತಿ ಮಂಧಾನ. ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲೂ ಟೀಂ ಇಂಡಿಯಾದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಅಮೋಘ ಅರ್ಧಶತಕ ಸಿಡಿಸಿದ್ದಾರೆ. ವಿಂಡೀಸ್ ವಿರುದ್ಧದ ಈ ಸರಣಿಯಲ್ಲಿ ಸ್ಮೃತಿ ಅವರ ಸತತ ಮೂರನೇ ಅರ್ಧಶತಕ ಇದಾಗಿದೆ. ಈ ಮೂಲಕ ಸ್ಮೃತಿ ಅಂತರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಅರ್ಧಶತಕಗಳನ್ನು ಬಾರಿಸಿರುವ ಮೊದಲ ಮಹಿಳಾ ಕ್ರಿಕೆಟರ್ ಎಂಬ ವಿಶ್ವದಾಖಲೆಗೆ ಪಾತ್ರರಾಗಿದ್ದಾರೆ. ಈ ಇನ್ನಿಂಗ್ಸ್​ನಲ್ಲಿ 47 ಎಸೆತಗಳನ್ನು ಎದುರಿಸಿದ ಸ್ಮೃತಿ 13 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 77 ರನ್​ಗಳಿಸಿ ವಿಕೆಟ್ ಒಪ್ಪಿಸಿದರು.

ಭಾರತ ಮಹಿಳಾ ಕ್ರಿಕೆಟ್ ತಂಡದ ಯುವ ವಿಕೆಟ್ ಕೀಪರ್- ಬ್ಯಾಟರ್ ರಿಚಾ ಘೋಷ್ ಅವರು ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಅತಿ ವೇಗದ ಅರ್ಧಶತ ಸಿಡಿಸಿದ್ರು. 18 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ದಾಖಲೆ ಬರೆದಿದ್ದಾರೆ. ತಮ್ಮ ವೃತ್ತಿಜೀವನದಲ್ಲಿ ಈಗಾಗಲೇ ಹಲವು ಸ್ಫೋಟಕ ಇನ್ನಿಂಗ್ಸ್‌ಗಳನ್ನು ಆಡಿರುವ ರಿಚಾ ಘೋಷ್ ಇದೀಗ ಇತಿಹಾಸ ಸೃಷ್ಟಿಸಿದ್ದಾರೆ. ಮಹಿಳಾ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ರಿಚಾ ಪಾತ್ರರಾಗಿದ್ದಾರೆ. ಅಷ್ಟೇ ಅಲ್ಲ, ಸಿಕ್ಸರ್ ಬಾರಿಸುತ್ತಲೇ ರಿಚಾ ವೇಗದ ಅರ್ಧಶತಕದ ವಿಶ್ವದಾಖಲೆಯನ್ನೂ ಸರಿಗಟ್ಟಿದ್ದು ಅವರ ಇನ್ನಿಂಗ್ಸ್​ನ ವಿಶೇಷತೆಯಾಗಿತ್ತು.

suddiyaana

Leave a Reply

Your email address will not be published. Required fields are marked *