ಹೊಸ ವರ್ಷದ ಆಚರಣೆಗೆ ಕಟ್ಟುನಿಟ್ಟಿನ ಕ್ರಮ – ಬೆಂಗಳೂರಿನಲ್ಲಿ ಖಾಕಿ ಅಲರ್ಟ್
ಲೈಂಗಿಕ ಕಿರುಕುಳ ತಡೆಯಲು ಖಡಕ್ ಸೂಚನೆ

ಹೊಸ ವರ್ಷದ ಆಚರಣೆಗೆ ಕಟ್ಟುನಿಟ್ಟಿನ ಕ್ರಮ – ಬೆಂಗಳೂರಿನಲ್ಲಿ ಖಾಕಿ ಅಲರ್ಟ್ಲೈಂಗಿಕ ಕಿರುಕುಳ ತಡೆಯಲು ಖಡಕ್ ಸೂಚನೆ

ಹೊಸ ವರ್ಷಾಚರಣೆಗೆ ದಿನಗಣನೆ ಆರಂಭವಾದ ಹಿನ್ನೆಲೆಯಲ್ಲಿ ನಗರದಲ್ಲಿ ಕಟ್ಟೆಚ್ಚರ ವಹಿಸುವಂತೆ ಬೆಂಗಳೂರು ಪೊಲೀಸ್ ಆಯುಕ್ತ​ ಬಿ ದಯಾನಂದ್ ಅವರು ಪೊಲೀಸ್ ಅಧಿಕಾರಿಗಳಿಗೆ ಖಡಕ್​​ ಸೂಚನೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಿದ ಹಿನ್ನೆಲೆಯಲ್ಲಿ ಹೊಸ ವರ್ಷದ ಸಂದರ್ಭದಲ್ಲಿ ಶಾಂತಿಭಂಗವನ್ನುಂಟು ಮಾಡುವ ಸಾಧ್ಯತೆ ಇರುತ್ತದೆ. ಹೀಗಾಗಿ, ಅಂತವರ ಮೇಲೆ ನಿಗಾವಹಿಸಿ, ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಿ ಎಂದು ಆದೇಶಿಸಿದ್ದರೆ.

ಇದನ್ನೂ ಓದಿ : ಉತ್ತರ ಕರ್ನಾಟಕ ಹುಲಿ ಬಾಳು ಬೆಳಗುಂದಿ.. 3ನೇ ಕ್ಲಾಸ್.. ಕುರಿ ಕಾಯಕ.. 600 ಹಾಡು!

ಹೊಸ ವರ್ಷಾಚರಣೆ ವಿರೋಧಿಸುವ ಸಂಘ ಸಂಸ್ಥೆಗಳ ಬಗ್ಗೆ ಗುಪ್ತವಾಗಿ ಮಾಹಿತಿ ಸಂಗ್ರಹಿಸಿ, ಮುನ್ನೆಚ್ಚರಿಕೆ ವಹಿಸಿ. ಮಾಲ್​ಗಳಲ್ಲಿ ಸಿಸಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿ ಇಡುವಂತೆ ಅಲ್ಲಿನ ಸಿಬ್ಬಂದಿಗಳಿಗೆ ಸೂಚನೆ ನೀಡಿ. ಎಲ್ಲ ಅಧಿಕಾರಿಗಳು ಸರ್ವೀಸ್ ರಿವಾಲ್ವಾರ್ ಹೊಂದಿರಬೇಕು. ಪೊಲೀಸ್​​ ಸಿಬ್ಬಂದಿ ಹೆಲ್ಮೆಟ್, ಲಾಠಿಗಳನ್ನು ಹೊಂದಿರಬೇಕು. ಹೆಣ್ಣು ಮಕ್ಕಳನ್ನು ಚುಡಾಯಿಸುವವರ ಮೇಲೆ ಕೂಡಲೇ ಕ್ರಮ ಕೈಗೊಳ್ಳಿ. ರಸ್ತೆ ಮೇಲೆ ಬಾಟಲಿ ಹೊಡೆದು ದಾಂದಲೆ ಮಾಡುವವರನ್ನು ಕೂಡಲೇ ವಶಕ್ಕೆ ಪಡೆದು ಕ್ರಮಕೈಗೊಳ್ಳಿ ಎಂದು ಹೇಳಿದ್ದಾರೆ.

 

ಮದ್ಯ ಮಾರಾಟ ಜಾಗದಲ್ಲಿ ಗಲಾಟೆ, ದೊಂಬಿ, ಬಾಟಲಿ ಎಸೆಯುವುದು, ಮಹಿಳೆಯರ ಚುಡಾಯಿಸುವುದು ನಡೆದರೆ ಅದಕ್ಕೆ ಮಾಲೀಕರೇ ಹೊಣೆಗಾರರಾಗುತ್ತಾರೆ. ಜನ ಸೇರುವ ರಸ್ತೆ ಮತ್ತು ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಸಿ. ರಸ್ತೆಗಳಲ್ಲಿ ವಿದ್ಯುತ್ ದೀಪಗಳು ಕೆಲಸ ಮಾಡುವಂತೆ ನೋಡಿಕೊಳ್ಳಬೇಕು. ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಎಂ.ಜಿ.ರಸ್ತೆ ಸೇರಿದಂತೆ ಇತರೆಡೆ ಜನರ ಆಗಮನ ಮತ್ತು ನಿರ್ಗಮನಕ್ಕೆ ಸೂಕ್ತ ಕ್ರಮಕೈಗೊಳ್ಳಿ ಎಂದಿದ್ದಾರೆ.

ರೌಡಿಗಳ ಚಟುವಟಿಕೆಗಳ ಮೇಲೆ ನಿಗಾ ಇಡಿ. ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆ, ಪ್ರಮುಖ ಪ್ರೈಓವರ್‌ಗಳ ಮೇಲೆ ವಾಹನ ಸಂಚಾರ ನಿಷೇಧಿಸಿ. ಮತ್ತು ಠಾಣೆಯ ಹೊಯ್ಸಳ ಮತ್ತು ಚೀತಾಗಳು ಸದಾ ಗಸ್ತು ನಿರ್ವಹಿಸಬೇಕು ಎಂದು ಪೊಲೀಸ್​ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.

 

Kishor KV

Leave a Reply

Your email address will not be published. Required fields are marked *