ಪಂಚಭೂತಗಳಲ್ಲಿ ಲೀನರಾದ ಮಾಜಿಪ್ರಧಾನಿ – ಮನಮೋಹನ್ ಸಿಂಗ್ ಇನ್ನು ನೆನಪು ಮಾತ್ರ

ಪಂಚಭೂತಗಳಲ್ಲಿ ಲೀನರಾದ ಮಾಜಿಪ್ರಧಾನಿ – ಮನಮೋಹನ್ ಸಿಂಗ್ ಇನ್ನು ನೆನಪು ಮಾತ್ರ

ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ನೆರವೇರಿದೆ. ಶನಿವಾರ ನವದೆಹಲಿಯ ನಿಗಮಬೋಧ ಘಾಟ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ.

ಇದನ್ನೂ ಓದಿ:  ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣ – ಭೂಮಿ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ

ಅಂತ್ಯ ಸಂಸ್ಕಾರದ ವೇಳೆ ಕುಟುಂಬಸ್ಥರು ಹಾಗೂ ಗಣ್ಯರು ಪಾಲ್ಗೊಂಡಿದ್ದರು.  ಅಂತ್ಯಕ್ರಿಯೆಗೂ ಮುನ್ನ ಡಾ. ಸಿಂಗ್‌ ಅವರಿಗೆ ಮೂರು ಸೇನಾ ಪಡೆಗಳು ಗೌರವ ಸಮರ್ಪಣೆ ಮಾಡಿದವು. ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಮನಮೋಹನ್‌ ಸಿಂಗ್‌ ಅವರ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛವನ್ನಿರಿಸಿ ಗೌರವ ನಮನ ಸಲ್ಲಿಸಿದರು. ಬಳಿಕ ಸಿಂಗ್‌ ಅವರ ಪಾರ್ಥಿವ ಶರೀರದ ಮೇಲೆ ಹೊದಿಸಿದ್ದ ರಾಷ್ಟ್ರಧ್ವಜವನ್ನು ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.

ಅಂತ್ಯ ಸಂಸ್ಕಾರದ ವೇಳೆ ‘ಮನಮೋಹನ್‌ ಸಿಂಗ್‌ ಅಮರ್‌ ರಹೇ.. ಅಮರ್‌ ರಹೇ’ ಎಂದು ಘೋಷಣೆ ಕೂಗಲಾಯಿತು. ನಂತರ ಸಿಖ್‌ ಸಂಪ್ರದಾಯದ ವಿಧಿವಿಧಾನದಂತೆ ಅಂತ್ಯಸಂಸ್ಕಾರ ನಡೆಯಿತು.

ಉಪರಾಷ್ಟ್ರಪತಿ ಜಗದೀಪ್‌ ಧನಕರ್, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌,‌ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಾಲ್ಗೊಂಡಿದ್ದರು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವರಾದ ಹೆಚ್‌.ಕೆ.ಪಾಟೀಲ್‌, ಎಂ.ಬಿ.ಪಾಟೀಲ್‌, ಹೆಚ್‌.ಸಿ.ಮಹದೇವಪ್ಪ, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಆರ್‌.ವಿ.ದೇಶಪಾಂಡೆ ಮುಂತಾದವರು ಮನಮೋಹನ್‌ ಸಿಂಗ್‌ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.

Shwetha M

Leave a Reply

Your email address will not be published. Required fields are marked *