ಇಸ್ರೋ ನೂತನ ಮುಖ್ಯಸ್ಥರಾಗಿ ವಿ.ನಾರಾಯಣನ್ ನೇಮಕ- ಜ.14ಕ್ಕೆ ಅಧಿಕಾರ ಸ್ವೀಕಾರ
ಇಸ್ರೋವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಭರವಸೆ

ಇಸ್ರೋ ನೂತನ ಮುಖ್ಯಸ್ಥರಾಗಿ ವಿ.ನಾರಾಯಣನ್ ನೇಮಕ-  ಜ.14ಕ್ಕೆ ಅಧಿಕಾರ ಸ್ವೀಕಾರಇಸ್ರೋವನ್ನು ಮತ್ತಷ್ಟು  ಎತ್ತರಕ್ಕೆ ಕೊಂಡೊಯ್ಯುವ ಭರವಸೆ

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೊದ ನೂತನ ಅಧ್ಯಕ್ಷರಾಗಿ ಮತ್ತು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ವಿ ನಾರಾಯಣನ್ ಅವರನ್ನು ನೇಮಿಸಲಾಗಿದೆ. ನಾರಾಯಣನ್ ಅವರು ಜನವರಿ 14 ರಂದು ಸಂಸ್ಥೆಯ ಪ್ರಸ್ತುತ ಮುಖ್ಯಸ್ಥ ಎಸ್ ಸೋಮನಾಥ್ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಕೇಂದ್ರ ಸರ್ಕಾರ ಹೊರಡಿಸಿರುವ ಪ್ರಕಟಣೆಯಲ್ಲಿ, ಸಚಿವ ಸಂಪುಟದ ನೇಮಕಾತಿ ಸಮಿತಿಯು ವಲಿಯಮಾಲಾ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ (ಎಲ್‌ಪಿಎಸ್‌ಸಿ) ಮುಖ್ಯಸ್ಥರಾಗಿರುವ ನಾರಾಯಣನ್ ಅವರು ಇಸ್ರೊ ಮುಖ್ಯಸ್ಥರಾಗಿ ಎರಡು ವರ್ಷಗಳ ಅಧಿಕಾರಾವಧಿಯನ್ನು ಹೊಂದಿರುತ್ತಾರೆ ಎಂದು ತಿಳಿಸಲಾಗಿದೆ. ಬಾಹ್ಯಾಕಾಶ ಆಯೋಗದ ಅಧ್ಯಕ್ಷರೂ ಆಗಿರುವ ನಾರಾಯಣನ್ ಅವರು ಕ್ರಯೋಜೆನಿಕ್ ಎಂಜಿನ್ ನ್ನು ಅಭಿವೃದ್ಧಿಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ, ಇದು ದೇಶಕ್ಕೆ ನಿರಾಕರಿಸಲ್ಪಟ್ಟ ತಂತ್ರಜ್ಞಾನವಾಗಿದೆ.

ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿರುವ ನಾರಾಯಣನ್ ಅವರು, ನಾವು ಭಾರತಕ್ಕೆ ಸ್ಪಷ್ಟ ಮಾರ್ಗಸೂಚಿಯನ್ನು ಹೊಂದಿದ್ದೇವೆ. ನಮ್ಮಲ್ಲಿ ಉತ್ತಮ ಪ್ರತಿಭೆ ಇರುವುದರಿಂದ ಇಸ್ರೋವನ್ನು ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯುವ ಭರವಸೆ ಇದೆ ಎಂದು ಹೇಳಿದ್ದಾರೆ.

 

Kishor KV