ಕಾನೂನು ಸಮರದಲ್ಲಿ ಕಾಂತಾರಕ್ಕೆ ಗೆಲುವು? – ರಿಷಬ್ ಹೇಳಿದ್ದೇನು?
ರಿಷಬ್ ಶೆಟ್ಟಿ ನಟಿಸಿ, ನಿದೇರ್ಶನ ಮಾಡಿರುವ ‘ಕಾಂತಾರ’ ಸಿನಿಮಾ ಎಷ್ಟು ಸದ್ದು ಮಾಡಿತ್ತೋ, ಅಷ್ಟೇ ವಿವಾದಕ್ಕೆ ಸಿಲುಕಿತ್ತು. ಕಾಂತಾರ ಚಿತ್ರದಲ್ಲಿ ಮೂಡಿ ಬಂದ ‘ವರಾಹ ರೂಪಂ’ ಹಾಡಿಗೆ ಕೃತಿಚೌರ್ಯದ ಆರೋಪ ಮಾಡಲಾಗಿತ್ತು. ಬಳಿಕ ಈ ಹಾಡು ಪ್ರಸಾರ ಮಾಡದಂತೆ ಕೇರಳದ ಸ್ಥಳೀಯ ನ್ಯಾಯಾಲಯ ಆದೇಶ ಹೊರಡಿಸಿತ್ತು. ಹಾಗಾಗಿ ಯೂಟ್ಯೂಬ್, ಮ್ಯೂಸಿಕ್ ಆ್ಯಪ್ಗಳಾದ ‘ಸಾವನ್’.. ಮೊದಲಾದ ಪ್ಲಾಟ್ಫಾರ್ಮ್ಗಳಿಂದ ಈ ಸಾಂಗ್ ಡಿಲೀಟ್ ಮಾಡಲಾಗಿತ್ತು. ಆದರೆ ಈಗ ‘ವರಾಹ ರೂಪಂ’ ಹಾಡು ಯೂಟ್ಯೂಬ್ನಲ್ಲಿ ಪ್ರತ್ಯಕ್ಷವಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಿಷಬ್ ಶೆಟ್ಟಿ, ‘ದೈವಾನು ದೈವಗಳ ಆಶೀರ್ವಾದ ಹಾಗೂ ಜನರ ಅಭಿಮಾನದಿಂದ ವರಾಹರೂಪಂ ಕೇಸ್ ಗೆದ್ದಿದ್ದೇವೆ. ಜನರ ಕೋರಿಕೆಯನ್ನು ಪರಿಗಣಿಸಿ ಅತಿ ಶೀಘ್ರದಲ್ಲಿ ಒಟಿಟಿ ವೇದಿಕೆಯಲ್ಲಿ ಹಾಡನ್ನು ಬದಲಾಯಿಸಲಿದ್ದೇವೆ’ ಎಂದು ಹೇಳಿದ್ದಾರೆ.
ದೈವಾನು ದೈವಗಳ ಆಶೀರ್ವಾದ ಹಾಗು ಜನರ ಅಭಿಮಾನದಿಂದ ವರಾಹರೂಪಂ ಕೇಸ್ ಗೆದ್ದಿದ್ದೇವೆ. ಜನರ ಕೋರಿಕೆಯನ್ನು ಪರಿಗಣಿಸಿ ಅತಿ ಶೀಘ್ರದಲ್ಲಿ OTT platform ನಲ್ಲಿ ಹಾಡನ್ನು ಬದಲಾಯಿಸಲಿದ್ದೇವೆ . @VKiragandur@ChaluveG @AJANEESHB @Karthik1423 @hombalefilms @KantaraFilmhttps://t.co/STsNEyKmuT
— Rishab Shetty (@shetty_rishab) December 3, 2022
ಇದನ್ನೂ ಓದಿ: ಹರಿಪ್ರಿಯ ಜೊತೆ ಸಿಂಪಲ್ ಆಗಿ ನಿಶ್ಚಿತಾರ್ಥ ಮಾಡಿಕೊಂಡ ವಸಿಷ್ಠ ಸಿಂಹ
ಚಿತ್ರದ ‘ವರಾಹ ರೂಪಂ’ಹಾಡಿನ ವಿರುದ್ಧ ಕೇರಳ ಮ್ಯೂಸಿಕ್ ಬ್ಯಾಂಡ್ ‘ಥೈಕುಡಂ ಬ್ರಿಡ್ಜ್ ಸಲ್ಲಿಸಿತ್ತು. ಈ ಅರ್ಜಿಗೆ ಸಂಬಂಧಿಸಿ ಕಲ್ಲಿಕೋಟೆ ಜಿಲ್ಲಾ ನ್ಯಾಯಾಲಯದಲ್ಲಿ ನೀಡಿದ್ದ ಆದೇಶಕ್ಕೆ ಕೇರಳ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ಪಿ ಸೋಮರಾಜನ್ ಅವರಿದ್ದ ಏಕಸದಸ್ಯ ಪೀಠ, ವರಾಹ ರೂಪಂ’ ಹಾಡಿಗೆ ಅನುಮತಿ ನೀಡಿ ಆದೇಶಿಸಿದ್ದ ಜಿಲ್ಲಾ ನ್ಯಾಯಾಲಯದ ತೀರ್ಪಿಗೆ ಡಿಸೆಂಬರ್ 8 ರವರೆಗೆ ತಡೆ ನೀಡಿದೆ. ಅಲ್ಲದೇ ಹೊಂಬಾಳೆ ಬ್ಯಾನರ್, ರಿಷಬ್ ಶೆಟ್ಟಿ, ಪೃಥ್ವಿರಾಜ್ ಫಿಲ್ಮ್ಸ್, ಅಮೆಜಾನ್ ಸೆಲ್ಲರ್ ಸರ್ವೀಸ್ ಪ್ರೈವೇಟ್ ಲಿಮಿಟೆಡ್, ಗೂಗಲ್ ಇಂಡಿಯಾ ಹೆಡ್ ಆಫೀಸ್, ಪೃಥ್ವಿರಾಜ್ ಸುಕುಮಾರನ್ ಸೇರಿದಂತೆ ಇತರರಿಗೆ ನೋಟಿಸ್ ಜಾರಿ ಮಾಡಿದೆ.
ಆದರೆ ಈ ಹಾಡು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿದೆ. ಅದರಂತೆ, ತಕ್ಷಣಕ್ಕೆ ಬರುವಂತೆ ಇಂದಿನಿಂದ ಚಿತ್ರಮಂದಿರ, ಓಟಿಟಿ, ಸೋಷಿಯಲ್ ಮೀಡಿಯಾ ಸೇರಿದಂತೆ ಎಲ್ಲ ವೇದಿಕೆಗಳಲ್ಲೂ ಮೂಲ ‘ವರಾಹ ರೂಪಂ’ ಹಾಡು ಪುನಃ ಸಿಗಲಿದೆ ಎನ್ನಲಾಗಿದೆ. ಅಲ್ಲದೇ ಈ ಹಾಡು ಲಭ್ಯವಾಗಿರುವುದನ್ನು ನೋಡಿದರೆ ಈ ಕೇಸ್ ಕೂಡ ಹೊಂಬಾಳೆ ಫಿಲ್ಮ್ಸ್ ಪರ ಆದಂತಿದೆ ಎಂದು ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.