ಮಹಾ ಕುಂಭಮೇಳದಲ್ಲಿ ಕಾಲ್ತುಳಿತಕ್ಕೆ 30 ಮಂದಿ ಬಲಿ – ಇಂದು ಪ್ರಯಾಗ್‌ರಾಜ್‌ಗೆ ಯೋಗಿ ಭೇಟಿ

ಮಹಾ ಕುಂಭಮೇಳದಲ್ಲಿ ಕಾಲ್ತುಳಿತಕ್ಕೆ 30 ಮಂದಿ ಬಲಿ – ಇಂದು ಪ್ರಯಾಗ್‌ರಾಜ್‌ಗೆ ಯೋಗಿ ಭೇಟಿ

ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಘೋರ ದುರಂತ ಸಂಭವಿಸಿದೆ. ಕಾಲ್ತುಳಿತದಲ್ಲಿ 30 ಭಕ್ತರು ಸಾವನ್ನಪ್ಪಿದ್ದಾರೆ. ಈ  ಹಿನ್ನೆಲೆ ಗುರುವಾರ ಪ್ರಯಾಗರಾಜ್‌ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಇದನ್ನೂ ಓದಿ: ಚಲಿಸುತ್ತಿದೆ ವಿಶ್ವದ ದೈತ್ಯ ಮಂಜುಗಡ್ಡೆ- ಬ್ರಿಟಿಷ್ ದ್ವೀಪಕ್ಕೆ ಡಿಕ್ಕಿಯಾಗುತ್ತಾ?

ಫೆ.3ರಂದು ಬಸಂತ ಪಂಚಮಿ ಹಿನ್ನೆಲೆ ಮತ್ತೊಂದು ಅಮೃತ ಸ್ನಾನ ನಡೆಯಲಿದೆ. ಈ ಹಿನ್ನೆಲೆ ಯೋಗಿ ಆದಿತ್ಯನಾಥ್ ತಯಾರಿ ಪರಿಶೀಲನೆ ನಡೆಸಲಿದ್ದಾರೆ. ಫೆ.1ರಂದು 50ಕ್ಕೂ ಹೆಚ್ಚು ದೇಶಗಳ ಉಪಾಧ್ಯಕ್ಷರು ಹಾಗೂ ರಾಯಭಾರಿಗಳು ಆಗಮಿಸಲಿದ್ದಾರೆ. ಫೆ.5ರಂದು ಪ್ರಧಾನಿ ನರೇಂದ್ರ ಮೋದಿ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲಿದ್ದಾರೆ. ಈ ಹಿನ್ನೆಲೆ ಯಾವುದೇ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸುವ ಸಲುವಾಗಿ ಯೋಗಿ ಖುದ್ದು ಪ್ರಯಾಗ್‌ರಾಜ್‌ಗೆ ತೆರಳಿ ವ್ಯವಸ್ಥೆಗಳ ಪರಿಶೀಲನೆ ನಡೆಸಲಿದ್ದಾರೆ.

ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯ ಬಗ್ಗೆ ಭಾರೀ ಬೇಸರ ವ್ಯಕ್ತಪಡಿಸಿರುವ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ ನೀಡಿದ್ದಾರೆ. ಅದರೊಂದಿಗೆ ಪ್ರಯಾಗ್‌ರಾಜ್‌ನಲ್ಲಿ ನಡೆದ ಘಟನೆಯಲ್ಲಿ ಒಟ್ಟು 30 ಮಂದಿ ಸಾವು ಕಂಡಿದ್ದನ್ನು ಖಚಿತಪಡಿಸಿದ್ದು, 60 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಕಾಲ್ತುಳಿತದಲ್ಲಿ ಮೃತಪಟ್ಟ ವ್ಯಕ್ತಿಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ.

Shwetha M

Leave a Reply

Your email address will not be published. Required fields are marked *