ಬಾಡಿಗೆದಾರರ ತಲೆ ಕೆಡಿಸಿದ ಬಜೆಟ್- ಎಲ್ಲಾ ಸರ್ಕಾರಿ ಶಾಲೆಗಳಿಗೆ ಇಂಟರ್‌ನೆಟ್

ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಮಂಡಿಸಿರೋ ಬಜೆಟ್‌ನಲ್ಲಿ ಡಿಜಿಟಲ್ ಕಲಿಕೆಗೆ ಒತ್ತು ನೀಡಲಾಗಿದೆ. ದೇಶದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಇಂಟರ್ನೆಟ್ ಸೌಲಭ್ಯ ಕಲ್ಪಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಶಿಕ್ಷಣ ವಲಯದಲ್ಲಿ ಸಂಪೂರ್ಣ ಬದಲಾವಣೆ ತರುವ ವಿಚಾರದಲ್ಲಿ ಎಲ್ಲಾ ಸರ್ಕಾರಿ ಸೆಕಂಡರಿ ಸ್ಕೂಲ್ಗಲಿಗೆ ಬ್ರಾಡ್ಬ್ಯಾಂಡ್ ಕನೆಕ್ಟಿವಿಟಿ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿ ಡೇ ಕೇರ್ ಕ್ಯಾನ್ಸರ್ ಸೆಂಟರ್ ಆರಂಭಿಸಲಾಗುವುದು ಎಂದು ಬಜೆಟ್ ನಲ್ಲಿ ಘೋಷಣೆಯಾಗಿದೆ. ಅಸ್ಸಾಂನಲ್ಲಿ ಯೂರಿಯಾ ಪ್ಲಾಂಟ್ ಆರಂಭವಾಗಲಿದೆ. 12.7 ಲಕ್ಷ ಮೆಟ್ರಿಕ್ ಟನ್ ಸಾಮರ್ಥ್ಯದ ಪ್ಲ್ಯಾಂಟ್ ಇದಾಗಲಿದೆ. 1 ಕೋಟಿ ಹಾಲುಣಿಸುವ ತಾಯಂದಿರಿಗೆ ನ್ಯೂಟ್ರೀಷನ್ ಭರಿತ ಆಹಾರ ನೀಡುವ ಯೋಜನೆ ಬಜೆಟ್‌ನಲ್ಲಿ ಘೋಷಣೆಯಾಗಿದೆ. ಈ ಮೂಲಕ ಬಾಣಂತಿಯರಿಗೆ ಪೋಷಕಾಂಶಭರಿತ ಆಹಾರದ ಭರವಸೆ ಸಿಕ್ಕಿದೆ. ಬಾಣಂತಿಯರ ಆರೋಗ್ಯ ವೃದ್ಧಿಸುವ ಉದ್ದೇಶದಿಂದ ಈ ಯೋಜನೆ ಘೋಷಣೆಯಾಗಿದೆ. ಭಾರತದ ಪಾದರಕ್ಷೆ ಮತ್ತು ಚರ್ಮದ ವಲಯಕ್ಕೆ ಮೀಸಲಾದ ಯೋಜನೆ ಬಜೆಟ್‌ನಲ್ಲಿ ಘೋಷಣೆಯಾಗಿದೆ. ಇದರಿಂದಾಗಿ 22 ಲಕ್ಷ ವ್ಯಕ್ತಿಗಳಿಗೆ ಉದ್ಯೋಗವನ್ನು ಸೃಷ್ಟಿಸುವ ನಿರೀಕ್ಷೆಯಿದೆ. ಜೊತೆಗೆ 4 ಲಕ್ಷ ಕೋಟಿ ರೂಪಾಯಿ ಆದಾಯವನ್ನ ನಿರೀಕ್ಷಿಸಲಾಗಿದೆ. ಆಟಿಕೆಗಳ ತಯಾರಿಕೆಗೆ ಒತ್ತು ನೀಡಲಾಗಿದೆ. ಮೇಕ್ ಇನ್ ಇಂಡಿಯಾ ಬ್ರ್ಯಾಂಡ್ ಜೊತೆ ಆಟಿಕೆ ತಯಾರಿಕೆಗೆ ಒತ್ತು ನೀಡಲಾಗಿದೆ. ಆಟಿಕೆಗಳ ತಯಾರಿಕೆ ವಲಯಕ್ಕಾಗಿ ಕ್ರಮಕೈಗೊಳ್ಳಲಿದ್ದು, ಭಾರತವನ್ನು ಜಾಗತಿಕ ಆಟಿಕೆ ಉತ್ಪಾದನಾ ಕೇಂದ್ರವನ್ನಾಗಿ ಮಾಡಲು ಬಜೆಟ್‌ನಲ್ಲಿ ಯೋಜನೆ ರೂಪಿಸಲಾಗಿದೆ. ಇನ್ನು, ಬಾಡಿಗೆಯ ಮೇಲಿನ TDS ಮಿತಿ ಹೆಚ್ಚಳ ಮಾಡಲಾಗಿದೆ. ಬಾಡಿಗೆಯ ಮೇಲಿನ ಟಿಡಿಎಸ್ನ ವಾರ್ಷಿಕ ಮಿತಿಯನ್ನು 2.40 ಲಕ್ಷ ರೂ.ನಿಂದ 6 ಲಕ್ಷ ರೂ.ಗೆ ಹೆಚ್ಚಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಹಿರಿಯ ನಾಗರಿಕರಿಗೆ TDS ಮಿತಿಯಲ್ಲಿ ಹೆಚ್ಚಳವಾಗಿದೆ. ಹೊಸ ಆದಾಯ ತೆರಿಗೆ ಮಸೂದೆಯು ಮಧ್ಯಮ ವರ್ಗದ ಮೇಲೆ ಕೇಂದ್ರೀಕೃತವಾಗಿರುತ್ತದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಹಿರಿಯ ನಾಗರಿಕರಿಗೆ ತೆರಿಗೆ ವಿನಾಯಿತಿಯನ್ನು 50,000 ರೂ.ನಿಂದ 1 ಲಕ್ಷ ರೂ.ಗೆ ಹೆಚ್ಚಿಸಲಾಗುತ್ತಿದೆ ಎಂದು ಸಚಿವೆ ಘೋಷಿಸಿದ್ರು.
- ಶಾಲೆಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕ
- ಗ್ರಾಮೀಣ ಭಾಗದಲ್ಲಿರುವ ಎಲ್ಲಾ ಪ್ರಾಥಮಿಕ ಶಾಲೆಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕ
- ಎಲ್ಲಾ ಜಿಲ್ಲೆಗಳಲ್ಲಿ ಡೇ ಕೇರ್ ಕ್ಯಾನ್ಸರ್ ಸೆಂಟರ್
- ಅಸ್ಸಾಂನಲ್ಲಿ ಯೂರಿಯಾ ಪ್ಲಾಂಟ್ ಆರಂಭ
- 12.7 ಲಕ್ಷ ಮೆಟ್ರಿಕ್ ಟನ್ ಸಾಮರ್ಥ್ಯದ ಪ್ಲ್ಯಾಂಟ್
- 1 ಕೋಟಿ ಬಾಣಂತಿಯರಿಗೆ ಪೋಷಕಾಂಶಭರಿತ ಆಹಾರ
- ಭಾರತದ ಪಾದರಕ್ಷೆ ಮತ್ತು ಚರ್ಮದ ವಲಯಕ್ಕೆ ಮೀಸಲಾದ ಯೋಜನೆ
- 22 ಲಕ್ಷ ವ್ಯಕ್ತಿಗಳಿಗೆ ಉದ್ಯೋಗವನ್ನು ಸೃಷ್ಟಿಸುವ ನಿರೀಕ್ಷೆ
- ರಫ್ತುಗಳನ್ನು 1.1 ಲಕ್ಷ ಕೋಟಿಗೆ ರೂ.ಗೆ ಹೆಚ್ಚಿಸುತ್ತದೆ
- ಆಟಿಕೆಗಳ ತಯಾರಿಕೆಗೆ ಬಜೆಟ್‌ನಲ್ಲಿ ಒತ್ತು
- ಮೇಕ್ ಇನ್ ಇಂಡಿಯಾ ಬ್ರ್ಯಾಂಡ್ ಜೊತೆ ಆಟಿಕೆ ತಯಾರಿಕೆ
- ಆಟಿಕೆಗಳ ತಯಾರಿಕೆ ವಲಯಕ್ಕಾಗಿ ಕ್ರಮ
- ಭಾರತವನ್ನು ಜಾಗತಿಕ ಆಟಿಕೆ ಉತ್ಪಾದನಾ ಕೇಂದ್ರವನ್ನಾಗಿ ಮಾಡಲುಯೋಜನೆ
- ಬಾಡಿಗೆಯ ಮೇಲಿನ TDS ಮಿತಿ ಹೆಚ್ಚಳ
- TDS ವಾರ್ಷಿಕ ಮಿತಿ 2.40 ಲಕ್ಷ ರೂ.ನಿಂದ 6 ಲಕ್ಷ ರೂ.ಗೆ ಹೆಚ್ಚಳ
- ಹಿರಿಯ ನಾಗರಿಕರಿಗೆ TDS ಮಿತಿಯಲ್ಲಿ ಹೆಚ್ಚಳ
- ತೆರಿಗೆ ವಿನಾಯಿತಿ 50,000 ರೂ.ನಿಂದ 1 ಲಕ್ಷ ರೂ.ಗೆ ಹೆಚ್ಚಳ