ದೆಹಲಿ ವಿಧಾನಸಭಾ ಚುನಾವಣೆ 2025ರ ಮತದಾನ ಪ್ರಕ್ರಿಯೆ ಆರಂಭ
ಬಿಜೆಪಿ ಮತ್ತು APP ನಡುವೆ ಪೈಪೋಟಿ
ದೆಹಲಿ ವಿಧಾನಸಭಾ ಚುನಾವಣೆ 2025ರ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು, ಪ್ರಧಾನ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮತ್ತು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮುಂದಾಳತ್ವದ ಆಮ್ ಆದ್ಮಿ ಪಕ್ಷದ ನಡುವೆ ಗೆಲುವಿಗಾಗಿ ಭಾರೀ ಪೈಪೋಟಿ ಶುರುವಾಗಿದೆ. ಹೀಗಾಗಿ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ.
ಇದನ್ನೂ ಓದಿ: ಬಾಸ್ ಯಾರೆಂದು ತೋರಿಸಿದ ಟ್ರಂಪ್ – ಬೆದರಿದ ಪನಾಮ, ಚೀನಾ ಒಪ್ಪಂದ ಕ್ಯಾನ್ಸಲ್
ದೆಹಲಿ ವಿಧಾನಸಭೆಯ 70 ಸ್ಥಾನಗಳಿಗೆ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಸತತ 10 ವರ್ಷಗಳಿಂದ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷ ಹ್ಯಾಟ್ರಿಕ್ ಕನಸಿನಲ್ಲಿದ್ದರೆ, 27 ವರ್ಷಗಳ ಬಳಿಕ ಅಧಿಕಾರಕ್ಕೇರುವ ಹುಮ್ಮಸ್ಸಿನಲ್ಲಿ ಬಿಜೆಪಿ ಹಾಗೂ 10 ವರ್ಷಗಳ ಬಳಿಕ ಅಧಿಕಾರದ ಗುರಿಯಲ್ಲಿ ಕಾಂಗ್ರೆಸ್ ಇದೆ.
70 ಸ್ಥಾನಗಳಿಗೆ ಒಟ್ಟು 699 ಅಭ್ಯರ್ಥಿಗಳು ಸ್ಪರ್ಧಿಸಿದ್ದು, 1.56 ಕೋಟಿ ಮತದಾರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಮತದಾನಕ್ಕಾಗಿ ಒಟ್ಟು 13766 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಬವಾಗಿದೆ.
ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಚುನಾಣೋತ್ತರ ಸಮೀಕ್ಷೆಗಳು ಪ್ರಕಟವಾಗಲಿವೆ. ದೆಹಲಿಯ ಮುಂದಿನ ಚುಕ್ಕಾಣಿ ಯಾರ ಕೈಗೆ ಸಿಗಲಿದೆ ಎಂಬುದರ ಸುಳಿವು ದೊರೆಯಲಿದೆ.
ಮಾಜಿ ಮುಖ್ಯಮಂತ್ರ ಅರವಿಂದ ಕೇಜ್ರಿವಾಲ ವಿರುದ್ಧ ಬಿಜೆಪಿಯಿಂದ ಪರ್ವೇಶ್ ಶರ್ಮಾ, ಹಾಲಿ ಸಿಎಂ ಆತಿಶಿ ವಿರುದ್ಧ ಬಿಜೆಪಿಯಿಂದ ರಮೇಶ್ ಬಿದೂರಿ ಕಾಂಗ್ರೆಸ್ ನಿಂದ ಅಲ್ಕಾ ಲಂಬಾ ಕಣದಲ್ಲಿದ್ದಾರೆ. ಉಳಿದಂತೆ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ, ಮಾಜ ಸಚಿವ ಸತ್ಯೇಂದ್ರ ಜೈನ್, ಸೋಮನಾಥ್ ಭಾರ್ತಿ ಮೊದಲಾದವರು ಕಣದಲ್ಲಿದ್ದಾರೆ.