ಸಿದ್ರಾಮುಲ್ಲಾ ಖಾನ್‌ ಎಂದು ಕರೆಯುವುದ್ಯಾಕೆ ?-ಸರಣಿ ಟ್ವೀಟ್‌ ಮೂಲಕ ವಿವರಿಸಿದ ಬಿಜೆಪಿ

ಸಿದ್ರಾಮುಲ್ಲಾ ಖಾನ್‌ ಎಂದು ಕರೆಯುವುದ್ಯಾಕೆ ?-ಸರಣಿ ಟ್ವೀಟ್‌ ಮೂಲಕ ವಿವರಿಸಿದ ಬಿಜೆಪಿ

ಸಿದ್ರಾಮುಲ್ಲಾ ಖಾನ್ ಎಂದು ಕರೆಯುವುದ್ಯಾಕೆ ?-ಸರಣಿ ಟ್ವೀಟ್ ಮೂಲಕ ವಿವರಿಸಿದ ಬಿಜೆಪಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂದು ಬಿಜೆಪಿ ಕರೆಯುವುದು ಯಾಕೆ ಅನ್ನೋದನ್ನ ಸ್ವತಃ ಬಿಜೆಪಿ ಮುಖಂಡರೇ ಈಗ ವಿವರಿಸಿದ್ದಾರೆ. ಈ ಬಗ್ಗೆ ಬಿಜೆಪಿ ಟ್ವೀಟ್ ಮಾಡಿದ್ದು ಸಿದ್ರಾಮುಲ್ಲಾ ಖಾನ್ ಎಂದು ಏಕೆ ಕರೆಯುತ್ತಾರೆ ಎಂಬ ಬಗ್ಗೆ ತಿಳಿಸಿದೆ. ಸಿದ್ದರಾಮಯ್ಯರನ್ನ ಸಿದ್ರಾಮುಲ್ಲಾ ಖಾನ್ ಎಂದು ವಿನಾಕಾರಣ ಕರೆದಿಲ್ಲ. ಸರ್ವಜನಾಂಗದ ಶಾಂತಿಯ ತೋಟಕ್ಕೆ ಮತಾಂಧ ಟಿಪ್ಪುನನ್ನು ನುಗ್ಗಿಸಿ ಪೆಡಂಭೂತದ ಜಯಂತಿಯನ್ನು ಆಚರಣೆಯಾಗಿ ತಂದವರು. ಇಂಥವರು ಸಿದ್ರಾಮುಲ್ಲಾ ಖಾನ್ ಅಲ್ಲದೇ ಇನ್ಯಾರು?. ತಮ್ಮವರನ್ನೇ ತುಳಿಯುವ ಸಿದ್ದರಾಮಯ್ಯರ ಮನಸ್ಥಿತಿ ಕಂಡು ದೇವೇಗೌಡರು ಅಂದೇ ಸಿದ್ದರಾಮಯ್ಯರನ್ನು ಹೊರಹಾಕಿದ್ದರು. ಆಗ ಕಾಂಗ್ರೆಸ್ ಸೇರಲು ಅಹಿಂದ ಹೆಸರಲ್ಲಿ ಬಲಪ್ರದರ್ಶಿಸಿದರು ಎಂದು ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ.

ಇದನ್ನೂ ಓದಿ :  ‘ಕಾಂಗ್ರೆಸ್ ತನ್ನ ಪಕ್ಷದ ತುಂಬಾ ಗೂಂಡಾಗಳನ್ನೇ ತುಂಬಿಸಿಕೊಂಡಿದೆ’ – ಬಿಜೆಪಿ ಟ್ವೀಟ್ ತಿರುಗೇಟು  

ಹಿಜಾಬ್‌‌ ಸಮರ್ಥನೆಗೆ ಸ್ವಾಮೀಜಿಗಳು ಹಿಜಾಬ್ ಹಾಕಲ್ವಾ, ಹಿಂದೂ ಮಹಿಳೆಯರು ದುಪಟ್ಟಾ ಹಾಕಲ್ವಾ ಎಂದು ಎಲ್ಲದರಲ್ಲೂ ಹಿಜಾಬನ್ನೇ ಕಂಡ ಮೌಲ್ವಿ ನಮ್ಮ ಸಿದ್ರಾಮುಲ್ಲಾ ಖಾನ್. ಗೋ ಹತ್ಯೆಯಾದರೂ ಬೀಫ್ ಮಾರ್ಕೆಟ್ ನಿಲ್ಲಬಾರದೆಂದ ಹರಿಕಾರ @siddaramaiah. ಇಂಥವರು ಖಾನ್ ಆಗದೇ ಕೇಶವ ಆಗಲು ಸಾಧ್ಯವೇ? ಎಂದು ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸರಣಿ ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದೆ.

ಕೇವಲ ಒಂದು ಸಮುದಾಯದ ಓಲೈಕೆ ಮಾಡಲು ಸೆಕ್ಯುಲರಿಸಂ ಹೆಸರಿನಲ್ಲೇ ತುಷ್ಟೀಕರಣಕ್ಕಿಳಿದಿರಿ. ಇಂಥವರನ್ನು ಸಿದ್ರಾಮುಲ್ಲಾ ಖಾನ್ ಎನ್ನದೆ ಮತ್ತೇನೆಂದು ಕರೆದಾರು? ದೇಶಾದ್ಯಂತ ಮತಾಂಧತೆಯನ್ನು ಪಸರಿಸುತ್ತಾ ಅಲ್ಲಲ್ಲಿ ಭಯೋತ್ಪಾದಕ ದಾಳಿ ನಡೆಸಲು ಹೊಂಚು ಹಾಕುತ್ತಿದ್ದ ಪಿಎಫ್ಐನ 175 ಗೂಂಡಾಗಳ ಮೇಲಿದ್ದ ಕೇಸುಗಳನ್ನು ವಿಚಾರಣೆಯಿಲ್ಲದೆ ಹಿಂಪಡೆದದ್ದಕ್ಕಾಗಿ ವಿಚಾರವಾದಿ ಸಿದ್ದುಗೆ ಸಿದ್ರಾಮುಲ್ಲಾ ಖಾನ್ ಎಂಬ ಬಿರುದನ್ನು ನಾವಲ್ಲ, ಜನರೇ ನೀಡಿದ್ದಾರೆ. ಟಿಪ್ಪು ಎಕ್ಸ್‌ಪ್ರೆಸ್‌ ಎಂಬ ಹೆಸರನ್ನು ಬದಲಾಯಿಸಿ ಜನ ಇಂದಿಗೂ ಸ್ಮರಿಸುವ-ಆರಾಧಿಸುವ ‘ಒಡೆಯರ್’‌ ಎಕ್ಸ್‌ಪ್ರೆಸ್‌ ಎಂದು ಕರೆದಾಗ ನಿಮಗೆ ಆದ ಅಸಹನೆಯನ್ನು ನಾಡಿನ ಜನ ಕಂಡಿದ್ದಾರೆ. ಮುಂಬೈ ದಾಳಿಯಲ್ಲಿ ಸಾರ್ವಜನಿಕರ ಪ್ರಾಣ ಉಳಿಸಲು ಪ್ರಾಣಾರ್ಪಣೆ ಮಾಡಿದ ಮೇಜರ್ ಸಂದೀಪ್‌ ಉನ್ನಿಕೃಷ್ಣನ್‌‌ರವರ ವೀರಗಾಥೆಯುಳ್ಳ “ಕರಾಳ ರಾತ್ರಿ” ಪಾಠವನ್ನು ಕೈಬಿಟ್ಟವರು ತಾವು. ರಾಷ್ಟ್ರೀಯತೆಯ ಪರಮ ವಿರೋಧಿ ನೀವು, ಹೀಗಿರುವಾಗ ತಮ್ಮನ್ನು ಸಿದ್ರಾಮುಲ್ಲಾ ಖಾನ್‌ ಎಂದು ಕರೆಯದೆ ಬೇರೆ ಬಿರುದು ಕೊಟ್ಟಾರೆಯೇ? ಎಂದು ಬಿಜೆಪಿ ಸರಣಿ ಟ್ವೀಟ್ ಮಾಡುವ ಮೂಲಕ ಸಿದ್ರಾಮುಲ್ಲಾ ಖಾನ್ ಎಂದು ಕರೆದಿದ್ದಕ್ಕೆ ಸಮರ್ಥನೆ ಕೊಟ್ಟಿದೆ.

suddiyaana