ಚಾಂಪಿಯನ್ಸ್ ಟ್ರೋಫಿಗಿಲ್ಲ ಸ್ಟಾರ್ಸ್ – ಬುಮ್ರಾ, ಕಮಿನ್ಸ್, ಸೈಮ್.. ಯಾರೆಲ್ಲಾ ಔಟ್?
![ಚಾಂಪಿಯನ್ಸ್ ಟ್ರೋಫಿಗಿಲ್ಲ ಸ್ಟಾರ್ಸ್ – ಬುಮ್ರಾ, ಕಮಿನ್ಸ್, ಸೈಮ್.. ಯಾರೆಲ್ಲಾ ಔಟ್?](https://suddiyaana.com/wp-content/uploads/2025/02/the-cricket-lounge-177.png)
ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಫೆಬ್ರವರಿ 19 ರಿಂದ ಶುರುವಾಗಲಿರುವ ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಆದ್ರೆ ಎಲ್ಲಾ ತಂಡಗಳಲ್ಲೂ ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆಯಾಗಿದ್ದ ಕೆಲ ಆಟಗಾರರು ಇಂಜುರಿಯಿಂದ ಹೊರ ಬಿದ್ದಿದ್ದಾರೆ. ಈ ಪೈಕಿ ಆಸ್ಟ್ರೇಲಿಯಾದ ಪ್ಲೇಯರ್ಸ್ ಅತೀ ಹೆಚ್ಚು ಇದ್ದಾರೆ. ಇದೆಲ್ಲಕ್ಕಿಂತ ಹೆಚ್ಚಾಗಿ ಭಾರತದ ಪಾಲಿಗೆ ಬ್ರಹ್ಮಾಸ್ತ್ರವಾಗಿರೋ ಜಸ್ಪ್ರೀತ್ ಬುಮ್ರಾ ಅವ್ರೇ ತಂಡದಿಂದ ಹೊರ ಬಿದ್ದಿದ್ದಾರೆ.
ಇದನ್ನೂ ಓದಿ : ಸೂಪರ್ ಸ್ಟ್ರಾಂಗ್ SRH.. ಅಭಿ & ಹೆಡ್ ಡೆಡ್ಲಿ ಓಪನರ್ಸ್ – IPL ಟ್ರೋಫಿಗಾಗಿ ಕಾವ್ಯಾ ರಣತಂತ್ರ
ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿದೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಕೊನೆ ಕ್ಷಣದಲ್ಲಿ ವರುಣ್ ಚಕ್ರವರ್ತಿ ಅವರನ್ನು ಆಯ್ಕೆ ಮಾಡಲಾಗಿದ್ದು, ಈ ಆಯ್ಕೆಯೊಂದಿಗೆ ಬಿಸಿಸಿಐ ಪರಿಷ್ಕೃತ ಭಾರತ ಏಕದಿನ ತಂಡವನ್ನು ಪ್ರಕಟಿಸಿದೆ. ಆದರೆ ಈ ತಂಡದಲ್ಲಿ ಜಸ್ಪ್ರೀತ್ ಬುಮ್ರಾ ಅವರ ಹೆಸರನ್ನು ಎಲ್ಲೂ ಕೂಡ ಪ್ರಸ್ತಾಪಿಸಿಲ್ಲ. ಹೀಗಾಗಿ ಚಾಂಪಿಯನ್ಸ್ ಟ್ರೋಫಿಯನ್ನ ಬುಮ್ರಾ ಆಡೋದು ಡೌಟಿದೆ. ಆಸ್ಟ್ರೇಲಿಯಾ ಸರಣಿಯಲ್ಲಿ ಬೆನ್ನು ನೋವಿಗೆ ತುತ್ತಾಗಿದ್ದ ಬುಮ್ರಾ ಈವರೆಗೂ ಕಂಪ್ಲೀಟ್ ಆಗಿ ಫಿಟ್ ಆಗಿಲ್ಲ.
ಚಾಂಪಿಯನ್ಸ್ ಟ್ರೋಫಿ ತಂಡದಿಂದ ಆಸ್ಟ್ರೇಲಿಯಾದ ನಾಲ್ವರು ಆಟಗಾರರು ಹೊರ ಬಿದ್ದಿದ್ದಾರೆ. ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರರು ಈಗಾಗಲೇ ಗಾಯದ ಸಮಸ್ಯೆಗಳಿಂದ ಬಳಲುತ್ತಿತ್ತು. ಮಾರ್ಕಸ್ ಸ್ಟೊಯಿನಿಸ್ ಅವರ ನಿವೃತ್ತಿಯ ಹಠಾತ್ ನಿರ್ಧಾರವು ಆಸ್ಟ್ರೇಲಿಯಾ ತಂಡಕ್ಕೆ ದೊಡ್ಡ ಪೆಟ್ಟು ನೀಡಿದೆ. ಚಾಂಪಿಯನ್ಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಮತ್ತು ಜೋಶ್ ಹೇಜಲ್‌ವುಡ್ ಗಾಯಗಳಿಂದಾಗಿ ಹೊರಗುಳಿದಿದ್ದಾರೆ. ಮಾರ್ಕಸ್ ಸ್ಟೊಯಿನಿಸ್, ಕಮ್ಮಿನ್ಸ್ ಮತ್ತು ಹೇಜಲ್‌ವುಡ್ ಹೊರತುಪಡಿಸಿ, ಆಲ್‌ರೌಂಡರ್ ಮಿಚೆಲ್ ಮಾರ್ಷ್ ಕೂಡ ಗಾಯದ ಕಾರಣದಿಂದಾಗಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಲು ಸಾಧ್ಯವಾಗುತ್ತಿಲ್ಲ. ಇದರರ್ಥ ಆಸ್ಟ್ರೇಲಿಯಾ ತನ್ನ ಆರಂಭಿಕ 15 ಸದಸ್ಯರ ತಂಡದಲ್ಲಿ ಕನಿಷ್ಠ ನಾಲ್ಕು ಬದಲಾವಣೆಗಳನ್ನು ಮಾಡಬೇಕಾಗಿದೆ.
ಪಾಕಿಸ್ತಾನ ಎಲ್ಲಾ ತಂಡಗಳಿಗಿಂತ ಕಡೆಯದಾಗಿ ತಂಡವನ್ನ ಅನೌನ್ಸ್ ಮಾಡಿತ್ತು. ಅದಕ್ಕೆ ಕಾರಣ ಸೈಮ್ ಅಯೂಬ್. ಪಾಕಿಸ್ತಾನ ವಿರುದ್ಧದ ಕೇಪ್‌ಟೌನ್ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡಿದ್ದ ಸೈಮ್ ಅಯೂಬ್, ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಗಾಯದ ಕಾರಣದಿಂದಾಗಿ ಚಿಕಿತ್ಸೆ ಪಡೀತಿದ್ರು. ಅವ್ರ ಫಿಟ್ನೆಸ್ ರಿಪೋರ್ಟ್ ಬಂದ ಮೇಲೆ ಅಂತಿಮವಾಗಿ ತಂಡ ಪ್ರಕಟ ಮಾಡೋಕೆ ಪಿಸಿಬಿ ಕೂಡ ಕಾಯ್ತಿತ್ತು. ಆದ್ರೆ ಕಂಪ್ಲೀಟ್ ಫಿಟ್ ಆಗದ ಸೈಮ್ ಆಯೂಬ್ ಚಾಂಪಿಯನ್ಸ್ ಟ್ರೋಫಿ ಮಿಸ್ ಮಾಡಿಕೊಳ್ಳುತ್ತಿದ್ದಾರೆ.
ಅಷ್ಟೇ ಅಲ್ದೇ ದಕ್ಷಿಣ ಆಫ್ರಿಕಾದ ಸ್ಟಾರ್ ಆಟಗಾರ ಜೆರಾಲ್ಡ್ ಕೋಟ್ಜೀ ಕೂಡ ತೊಡೆಸಂದು ಬಿಗಿತ ಮತ್ತು ಮಂಡಿರಜ್ಜು ಗಾಯದಿಂದಾಗಿ ಬಳಲುತ್ತಿದ್ದಾರೆ. ಹಾಗೇ ದಕ್ಷಿಣ ಆಫ್ರಿಕಾದ ಸ್ಟಾರ್ ವೇಗಿ ಅನ್ರಿಚ್ ನಾರ್ಟ್ಜೆ ಕೂಡ ಬೆನ್ನುನೋವಿನಿಂದಾಗಿ ಹೊರಗುಳಿಯಲಿದ್ದಾರೆ. ಇಂಗ್ಲೆಂಡ್‌ನ ಸ್ಟಾರ್ ಆಟಗಾರ ಜೇಮೀ ಸ್ಮಿತ್ ಕೂಡ ಸ್ನಾಯು ನೋವು ಕಾರಣ 2025 ರ ಐಸಿಸಿ ಪುರುಷರ ಚಾಂಪಿಯನ್ಸ್ ಟ್ರೋಫಿಯನ್ನು ಕಳೆದುಕೊಳ್ಳಲಿದ್ದಾರೆ. ಹೀಗೆ ಸ್ಟಾರ್ ಪ್ಲೇಯರ್ಸ್ ಇಂಜುರಿ ಸಮಸ್ಯೆಯಿಂದಾಗಿ ಚಾಂಪಿಯನ್ಸ್ ಟ್ರೋಫಿ ಮಿಸ್ ಮಾಡಿಕೊಳ್ತಿದ್ದಾರೆ.