ಬುಮ್ರಾ OUT.. ರಾಣಾ IN – ಸಿರಾಜ್ ಆಟಕ್ಕುಂಟು ಲೆಕ್ಕಕ್ಕಿಲ್ಲ
![ಬುಮ್ರಾ OUT.. ರಾಣಾ IN – ಸಿರಾಜ್ ಆಟಕ್ಕುಂಟು ಲೆಕ್ಕಕ್ಕಿಲ್ಲ](https://suddiyaana.com/wp-content/uploads/2025/02/f1d81-16947555144537-1920.webp)
ಚಾಂಪಿಯನ್ಸ್ ಟ್ರೋಫಿಗೂ ಮುನ್ನವೇ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಇದು ಬಿಗ್ ಶಾಕ್ ಅಂದ್ರೂ ತಪ್ಪಾಗಲ್ಲ. ಯಾಕಂದ್ರೆ ಅಭಿಮಾನಿಗಳು, ಮಾಜಿ ಆಟಗಾರರು ಸೇರಿದಂತೆ ಯಾವುದು ಆಗ್ಬಾರ್ದು ಅಂತಾ ಪ್ರಾರ್ಥನೆ ಮಾಡ್ತಿದ್ರೋ ಅದೇ ಆಗಿ ಹೋಗಿದೆ. ಬೆನ್ನು ನೋವಿನಿಂದ ಬಳಲುತ್ತಿರೋ ಜಸ್ಪ್ರೀತ್ ಬುಮ್ರಾ ಕಂಪ್ಲೀಟ್ ಆಗಿ ರಿಕವರ್ ಆಗಿಲ್ಲ. ಇದೇ ಕಾರಣಕ್ಕೆ ಈಗ ಪ್ರತಿಷ್ಠಿತ ಚಾಂಪಿಯನ್ಸ್ ಟ್ರೋಫಿಯಿಂದಲೇ ಹೊರಬಿದ್ದಿದ್ದಾರೆ. ಫೆಬ್ರವರಿ 19ರಿಂದ ಶುರುವಾಗಲಿರುವ ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾ ಫೈನಲ್ ಟೀಂ ಅನೌನ್ಸ್ ಮಾಡಿದೆ. ಈ ಹಿಂದೆ ಪ್ರಕಟಿಸಲಾಗಿದ್ದ 15 ಸದಸ್ಯರ ತಂಡದಿಂದ ಇಬ್ಬರನ್ನು ಕೈ ಬಿಡಲಾಗಿದೆ. ಒಂದು ಜಸ್ಪ್ರೀತ್ ಬುಮ್ರಾ ಮತ್ತೊಂದು ಯಶಸ್ವಿ ಜೈಸ್ವಾಲ್. ಅಲ್ದೇ ಈ ಸಲ ಮೂವರು ಮೀಸಲು ಆಟಗಾರರು ಸೇರಿ ಒಟ್ಟು 18 ಸದಸ್ಯರ ತಂಡವನ್ನ ಪ್ರಕಟ ಮಾಡಲಾಗಿದೆ.
ಇದನ್ನೂ ಓದಿ : ಇಂಗ್ಲೆಂಡ್ ವಿರುದ್ಧ ಗೆದ್ದವರೇ ಫೈನಲ್ – ಚಾಂಪಿಯನ್ಸ್ ಟ್ರೋಫಿಗೆ ಸಿದ್ಧವಾಯ್ತಾ ಪ್ಲೇಯಿಂಗ್ 11?
ಚಾಂಪಿಯನ್ಸ್ ಟ್ರೋಫಿಗೆ ಹೊಸ ಟೀಂ!
ರೋಹಿತ್ ಶರ್ಮಾ
ಶುಭಮನ್ ಗಿಲ್
ವಿರಾಟ್ ಕೊಹ್ಲಿ
ಶ್ರೇಯಸ್ ಅಯ್ಯರ್
ಕೆಎಲ್ ರಾಹುಲ್
ರಿಷಭ್ ಪಂತ್
ಹಾರ್ದಿಕ್ ಪಾಂಡ್ಯ
ರವೀಂದ್ರ ಜಡೇಜಾ
ಅಕ್ಷರ್ ಪಟೇಲ್
ವಾಷಿಂಗ್ಟನ್ ಸುಂದರ್
ಕುಲ್ದೀಪ್ ಯಾದವ್
ಮೊಹಮ್ಮದ್ ಶಮಿ
ಅರ್ಷದೀಪ್ ಸಿಂಗ್
ಹರ್ಷಿತ್ ರಾಣಾ
ವರುಣ್ ಚಕ್ರವರ್ತಿ
ಮೀಸಲು ಆಟಗಾರರು
ಮೊಹಮ್ಮದ್ ಸಿರಾಜ್
ಯಶಸ್ವಿ ಜೈಸ್ವಾಲ್
ಶಿವಂ ದುಬೆ
ಚಾಂಪಿಯನ್ಸ್ ಟ್ರೋಫಿಯಲ್ಲಿ ಮೊದಲು ಅನೌನ್ಸ್ ಮಾಡಿದ್ದ ತಂಡಕ್ಕೂ ಈಗ ಅನೌನ್ಸ್ ಆಗಿರೋ ತಂಡಕ್ಕೂ ಎರಡು ಮೇಜರ್ ಬದಲಾವಣೆಗಳನ್ನ ಮಾಡ್ಲಾಗಿದೆ. ಜಸ್ಪ್ರೀತ್ ಬುಮ್ರಾ ಹಾಗೇ ಯಶಸ್ವಿ ಜೈಸ್ವಾಲ್ ತಂಡದಿಂದ ಹೊರ ಬಿದ್ದಿದ್ದಾರೆ. ಜಸ್ಪ್ರೀತ್ ಬುಮ್ರಾ ಬದಲಿಗೆ ಹರ್ಷಿತ್ ರಾಣಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಹಾಗೆಯೇ 15 ಸದಸ್ಯರ ಬಳಗದಲ್ಲಿದ್ದ ಯುವ ಎಡಗೈ ಬ್ಯಾಟ್ಸ್ಮನ್ ಯಶಸ್ವಿ ಜೈಸ್ವಾಲ್ ಅವರನ್ನು ಈ ಬಾರಿ ತಂಡದಿಂದ ಕೈ ಬಿಟ್ಟಿದ್ದು, ಅವರ ಬದಲಿಗೆ ವರುಣ್ ಚಕ್ರವರ್ತಿಗೆ ಸ್ಥಾನ ಕಲ್ಪಿಸಲಾಗಿದೆ. ಇಷ್ಟೇ ಅಲ್ಲದೇ ಮೂವರು ಮೀಸಲು ಆಟಗಾರರೂ ಇರಲಿದ್ದಾರೆ. ಅದ್ರಲ್ಲೂ ಈ ಲಿಸ್ಟ್ನಲ್ಲಿ ಮೊಹಮ್ಮದ್ ಸಿರಾಜ್ ಕಾಣಿಸಿಕೊಂಡಿದ್ದಾರೆ. ಕಳೆದ ಕೆಲ ವರ್ಷಗಳಿಂದ ಭಾರತ ತಂಡದ ಖಾಯಂ ಸದಸ್ಯರಾಗಿದ್ದ ಸಿರಾಜ್ ರನ್ನು ಈ ಬಾರಿಯ ಚಾಂಪಿಯನ್ಸ್ ಟ್ರೋಫಿಗೆ ಸೆಲೆಕ್ಟ್ ಮಾಡಿರಲಿಲ್ಲ. ಇದೀಗ ಪರಿಷ್ಕೃತ ತಂಡದಲ್ಲಿ ಮೀಸಲು ಆಟಗಾರರ ಪಟ್ಟಿಗೆ ಸೇರಿಸಲಾಗಿದೆ. ಸಿರಾಜ್ ಜೊತೆ ಯಶಸ್ವಿ ಜೈಸ್ವಾಲ್ ಹಾಗೂ ಶಿವಂ ದುಬೆ ಸಹ ರಿಸರ್ವ್ ಪ್ಲೇಯರ್ಸ್ ಲಿಸ್ಟ್ನಲ್ಲಿದ್ದಾರೆ.
ಇಲ್ಲೇ ಇರೋದು ನೋಡಿ ಟ್ವಿಸ್ಟ್. ಕಳೆದ ಬಾರಿ ಟಿ-20 ವಿಶ್ವಕಪ್ ವೇಳೆ ರಿಸರ್ವ್ ಪ್ಲೇಯರ್ಸ್ ಸಹ ತಂಡದೊಂದಿಗೆ ಅಮೆರಿಕಕ್ಕೆ ಹಾರಿದ್ರು. ಆದ್ರೆ ಚಾಂಪಿಯನ್ಸ್ ಟ್ರೋಫಿಗೆ ಹಾಗಿಲ್ಲ. ಮೀಸಲು ಆಟಗಾರರಾಗಿ ಸೆಲೆಕ್ಟ್ ಆದ ಮೂವರು ಚಾಂಪಿಯನ್ಸ್ ಟ್ರೋಫಿಗಾಗಿ ಟೀಮ್ ಇಂಡಿಯಾ ಜೊತೆ ತೆರಳುವುದಿಲ್ಲ. ಭಾರತದಲ್ಲೇ ಉಳಿದುಕೊಳ್ಳಲಿದ್ದಾರೆ. ಬಿಸಿಸಿಐ ನೀಡಿರುವ ಮಾಹಿತಿ ಪ್ರಕಾರ, ಮೊಹಮ್ಮದ್ ಸಿರಾಜ್, ಯಶಸ್ವಿ ಜೈಸ್ವಾಲ್ ಹಾಗೂ ಶಿವಂ ದುಬೆ ಅವರನ್ನು ಪ್ರಯಾಣೇತರ ಬದಲಿ ಆಟಗಾರರಾಗಿ ಆಯ್ಕೆ ಮಾಡಲಾಗಿದೆ. ಹೀಗಾಗಿ ಟೀಮ್ ಇಂಡಿಯಾದ 15 ಸದಸ್ಯರಲ್ಲಿ ಯಾರಾದರೂ ಗಾಯಗೊಂಡರೆ, ಆಗ ಮಾತ್ರ ಬದಲಿ ಆಟಗಾರರಾಗಿ ದುಬೈಗೆ ಪ್ರಯಾಣಿಸಲಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಕೊನೆ ಕ್ಷಣದಲ್ಲಿ ತಂಡದಲ್ಲಿ ಎರಡು ಬದಲಾವಣೆ ಮಾಡಿಕೊಂಡಿದ್ದು, ಇದೀಗ ಅಂತಿಮ ಪಟ್ಟಿಯನ್ನು ಐಸಿಸಿಗೆ ಸಲ್ಲಿಸಿದೆ. ಇನ್ಮುಂದೆ ಗಾಯದ ಸಮಸ್ಯೆ ಅಥವಾ ಇನ್ನಿತರ ಕಾರಣಗಳಿಗಾಗಿ ಬದಲಿ ಆಟಗಾರರನ್ನು ಆಯ್ಕೆ ಮಾಡಬೇಕಾದರೆ ಐಸಿಸಿಯ ಟೆಕ್ನಿಕಲ್ ಕಮಿಟಿಯ ಅನುಮತಿ ಪಡೆಯಬೇಕಾಗುತ್ತೆ.
ಭಾರತದ ಬೌಲಿಂಗ್ ವಿಭಾಗದಲ್ಲಿ ಬ್ರಹ್ಮಾಸ್ತ್ರವಾಗಿರುವ ಜಸ್ಪ್ರೀತ್ ಬುಮ್ರಾ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ 150ಕ್ಕೂ ಹೆಚ್ಚು ಓವರ್ ಬೌಲ್ ಮಾಡಿ ಬೆನ್ನು ನೋವಿಗೆ ತುತ್ತಾಗಿದ್ದರು. ಇದರಿಂದಾಗಿ ಸಿಡ್ನಿಯಲ್ಲಿ ನಡೆದ 5ನೇ ಪಂದ್ಯದಲ್ಲಿ ಅರ್ಧಕ್ಕೆ ಮೈದಾನ ತೊರಿದಿದ್ದ ಅವರು ಬಳಿಕ ಬೌಲಿಂಗ್ ಮಾಡಲು ಸಾಧ್ಯವಾಗಿರಲಿಲ್ಲ. ಬೆನ್ನು ನೋವಿನಿಂದ ಬಳಲುತ್ತಿರುವ ಬುಮ್ರಾ ಇನ್ನೂ ಚೇತರಿಸಿಕೊಂಡಿಲ್ಲ. ಇದೇ ಕಾರಣಕ್ಕೆ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯಲ್ಲೂ ಕಣಕ್ಕಿಳಿದಿರಲಿಲ್ಲ. ಇದೀಗ ಚಾಂಪಿಯನ್ಸ್ ಟ್ರೋಫಿಯ ಅಂತಿಮ ತಂಡದಿಂದ ಹೊರ ಬಿದ್ದಿದ್ದಾರೆ. ಬುಮ್ರಾ ಅವರು ಸಂಪೂರ್ಣವಾಗಿ ಫಿಟ್ನೆಸ್ ಸಾಧಿಸಲು ಕನಿಷ್ಠ ಮೂರು ವಾರಗಳಾದ್ರೂ ಬೇಕಾಗುತ್ತೆ ಎಂದು ತಜ್ಞ ವೈದ್ಯರೇ ಹೇಳಿದ್ದಾರೆ. ಹೀಗಾಗಿ ಜಸ್ಪ್ರೀತ್ ಬುಮ್ರಾ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದಿದ್ದಾರೆ. ಜಸ್ಪ್ರೀತ್ ಬುಮ್ರಾ ಅಲಭ್ಯರಾಗಿರುವ ಕಾರಣ ಅವರ ಸ್ಥಾನದಲ್ಲಿ ಹರ್ಷಿತ್ ರಾಣಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅದರಂತೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ವೇಗಿಗಳಾಗಿ ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ಹರ್ಷಿತ್ ರಾಣಾ ಹಾಗೂ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳಲಿದ್ದಾರೆ.