ನಮ್ಮ ಮೆಟ್ರೋ ಪ್ರಯಾಣಿಕರಿಗೆ ಖುಷಿ ಸುದ್ದಿ – BMRCL ಎಂಡಿ ಹೇಳಿದ್ದೇನು?
ಸ್ಟೇಜ್ ಆಧಾರದಲ್ಲಿ ಇಳಿಕೆ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಖುಷಿ ಸುದ್ದಿ – BMRCL ಎಂಡಿ ಹೇಳಿದ್ದೇನು?ಸ್ಟೇಜ್ ಆಧಾರದಲ್ಲಿ ಇಳಿಕೆ

ನಮ್ಮ ಮೆಟ್ರೋ ಪ್ರಯಾಣ ದರ ದುಪ್ಪಟ್ಟು ಏರಿಕೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಇದರಿಂದ ಎಚ್ಚೆತ್ತ ಬಿಎಂಆರ್​ಸಿಎಲ್ ಸ್ಟೇಜ್ ಆಧಾರದಲ್ಲಿ ಇಳಿಕೆ ಮಾಡಲು ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಟ್ರೋ ಪ್ರಯಾಣ ದರ ಪರಿಷ್ಕರಿಸುವಂತೆ ಬಿಎಂಆರ್​ಸಿಎಲ್ ಗೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ ಬಿಎಂಆರ್ ಸಿಎಲ್ ಎಂಡಿ ಮಹೇಶ್ವರ್ ರಾವ್ ಅವರು, ದುಪ್ಪಟ್ಟು ದರ ಏರಿಕೆಯಾಗಿರುವ ನಿಲ್ದಾಣಗಳಲ್ಲಿನ ದರವನ್ನು ಪರಿಷ್ಕರಿಸಲಾಗುವುದು. ಇದರಿಂದ ಪ್ರಯಾಣಿಕರಿಗೆ ಸ್ವಲ್ಪ ಮಟ್ಟಿನ ರಿಲೀಫ್ ದೊರೆಯಲಿದೆ ಎಂದು ತಿಳಿಸಿದರು.

ನಮ್ಮ ಮೆಟ್ರೋ ಪ್ರಯಾಣ ದರ ಸ್ಟೇಜ್ ಆಧಾರದಲ್ಲಿ ಇಳಿಕೆ ಮಾಡಲಾಗುವುದು. ಮೆಟ್ರೋ ದರ ಶೇ. 90 ರಿಂದ ಶೇ 100 ರ ವರೆಗೆ ಹೆಚ್ಚಳವಾಗಿರುವ ನಿಲ್ದಾಣಗಳ ಮಧ್ಯೆ ಇಳಿಕೆ ಮಾಡಲಾಗುವುದು. ಶೇ 60 ದರ ಹೆಚ್ಚಳವಾಗಿರುವಲ್ಲಿ ಸ್ಲ್ಯಾಬ್ ಮರ್ಜ್ ಮಾಡುತ್ತೇವೆ. ಪರಿಷ್ಕೃತ ದರ ನಾಳೆಯಿಂದಲೇ ಜಾರಿಗೆ ಬರಲಿದೆ ಎಂದು ಅವರು ಹೇಳಿದರು.

 

Kishor KV

Leave a Reply

Your email address will not be published. Required fields are marked *