ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ- ಅದ್ಭುತ ಶತಕ ಭಾರಿಸಿದ ಕಿಂಗ್ ಕೊಹ್ಲಿ

2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾದ ಗೆಲುವಿನ ಓಟ ಮುಂದುವರೆದಿದೆ. ತನ್ನ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಸೋಲಿಸಿದೆ. ಇದರೊಂದಿಗೆ ಸೆಮಿಫೈನಲ್‌ನಲ್ಲಿ ತನ್ನ ಸ್ಥಾನವನ್ನು ಬಹುತೇಕ ಖಚಿತಪಡಿಸಿಕೊಂಡಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ, ಟೀಂ ಇಂಡಿಯಾ ಮತ್ತೊಮ್ಮೆ 242 ರನ್‌ಗಳ ಗುರಿಯನ್ನು ಯಾವುದೇ ತೊಂದರೆಯಿಲ್ಲದೆ ಅದ್ಭುತ ರೀತಿಯಲ್ಲಿ ಬೆನ್ನಟ್ಟಿದೆ. ಟೀಂ ಇಂಡಿಯಾದ ಈ ಗೆಲುವಿಗೆ ವಿರಾಟ್ ಕೊಹ್ಲಿ ಮ್ಯಾಜಿಕ್ ಮಾಡಿದ್ದಾರೆ. ಏಕೆಂದರೆ ಸಂಕಷ್ಟದ ಸಮಯದಲ್ಲಿ ವಿರಾಟ್ ಕೊಹ್ಲಿ ಶತಕ ಬಾರಿಸುವ ಮೂಲಕ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಇತ್ತ ಭಾರತದ ವಿರುದ್ಧ ಸೋತಿರುವ ಪಾಕಿಸ್ತಾನ ತಂಡ, ತನ್ನದೇ ತವರಿನಲ್ಲಿ ಪಂದ್ಯಾವಳಿಯನ್ನು ಆಯೋಜಿಸುತ್ತಿದೆಯಾದರೂ, ಈ ಟೂರ್ನಿಯ ಮೊದಲ ಸುತ್ತಿನಲ್ಲೇ ಹೊರಬೀಳುವ ಆತಂಕದಲ್ಲಿದೆ.
ಇದನ್ನೂ ಓದಿ: ಅಪ್ಪನ ಸಾವು.. ಅಣ್ಣನ ತ್ಯಾಗ.. ಕ್ರಿಕೆಟ್ ಗಾಗಿ ಮನೆಬಿಟ್ಟ ರೇಣುಕಾ! – RCB ಆಟಗಾರ್ತಿ ರಿಯಲ್ ಸ್ಟೋರಿ!
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡಕ್ಕೆ ಮೊದಲ ವಿಕೆಟ್ಗೆ 41 ರನ್‌ಗಳ ಜೊತೆಯಾಟ ಸಿಕ್ಕಿತು. ಆರಂಭಿಕ ಬಾಬರ್ ಆಝಂ ಬಂದ ತಕ್ಷಣ ಕೆಲವು ಅತ್ಯುತ್ತಮ ಹೊಡೆತಗಳನ್ನು ಹೊಡೆಯುವ ಮೂಲಕ ಪಾಕಿಸ್ತಾನಕ್ಕೆ ನಿರೀಕ್ಷೆಗಿಂತ ಉತ್ತಮ ಆರಂಭವನ್ನು ನೀಡಿದ್ದರಿಂದ ಟೀಂ ಇಂಡಿಯಾ ಆರಂಭದಲ್ಲಿ ವಿಕೆಟ್‌ಗಾಗಿ ಸ್ವಲ್ಪ ಕಾಯಬೇಕಾಯಿತು. ಆದರೆ ಹಾರ್ದಿಕ್ ಪಾಂಡ್ಯ ಬಾಬರ್ ಅವರ ವಿಕೆಟ್ ಪಡೆಯುವ ಮೂಲಕ ಪಾಕ್ ತಂಡಕ್ಕೆ ಮೊದಲ ಆಘಾತ ನೀಡಿದರು.
ಮತ್ತೊಂದೆಡೆ ಪಾಕಿಸ್ತಾನ ವಿರುದ್ಧ ತಮ್ಮ ಅತ್ಯುತ್ತಮ ದಾಖಲೆಯನ್ನು ಮುಂದುವರೆಸಿದ ಕೊಹ್ಲಿ ಮತ್ತೊಮ್ಮೆ ಉತ್ತಮ ಇನ್ನಿಂಗ್ಸ್‌ಗೆ ಅಡಿಪಾಯ ಹಾಕಿದರು. ಗಿಲ್ ಔಟಾದ ನಂತರ, ಕೊಹ್ಲಿ ತಮ್ಮ ಎಂದಿನ ಶೈಲಿಯಲ್ಲಿ ರನ್ ಚೇಸ್ ಜವಾಬ್ದಾರಿಯನ್ನು ವಹಿಸಿಕೊಂಡು ಅದ್ಭುತ ಅರ್ಧಶತಕ ದಾಖಲಿಸಿದರು. ಇತ್ತ ಗಿಲ್ ವಿಕೆಟ್ ಬಳಿಕ ಬಂದ ಶ್ರೇಯಸ್ ಅಯ್ಯರ್ ಕೂಡ ಆರಂಭದಲ್ಲಿ ರನ್ ಕಲೆಹಾಕಲು ಪರೆದಾಡಿದರಾದರೂ, ಕ್ರೀಸ್ನಲ್ಲಿ ಸ್ವಲ್ಪ ಸಮಯ ಕಳೆದ ನಂತರ ಪಾಕ್ ಬೌಲರ್‌ಗಳನ್ನು ಸರಿಯಾಗಿಯೇ ತರಾಟೆಗೆ ತೆಗೆದುಕೊಂಡರು. ಅಂತಿಮವಾಗಿ ಅಯ್ಯರ್ ಅರ್ಧಶತಕ ಬಾರಿಸಿ ಔಟಾದರೆ, ಕೊಹ್ಲಿ ಮಾತ್ರ ಕೊನೆಯವರೆಗೂ ಅಜೇಯರಾಗಿ ಉಳಿದು ತಂಡವನ್ನು ಗೆಲುವಿನ ದಡ ಮುಟ್ಟಿಸಿದಲ್ಲದೆ ತಮ್ಮ ಶತಕವನ್ನು ಪೂರ್ಣಗೊಳಿಸಿದರು.

ನೋಡಿರಿ

