ಮೊನಾಲಿಸಾ ಸಿನಿಮಾ ವಿವಾದದ ಬೆನ್ನಲ್ಲೇ ಐವರ ವಿರುದ್ಧ ಬಿತ್ತು ಕೇಸ್‌!

ಮೊನಾಲಿಸಾ ಸಿನಿಮಾ ವಿವಾದದ ಬೆನ್ನಲ್ಲೇ ಐವರ ವಿರುದ್ಧ ಬಿತ್ತು ಕೇಸ್‌!

ಕುಂಭಮೇಳದಲ್ಲಿ ಫೇಮಸ್‌ ಆಗಿದ್ದ ಮೊನಾಲಿಸಾಗೆ ಸಿನಿಮಾದಲ್ಲಿ ಚಾನ್ಸ್‌ ಸಿಕ್ಕಿದೆ. ಈ ಬೆನ್ನಲ್ಲೇ ಮೊನಾಲಿಸಾ ಸಿನಿಮಾ, ಸಿನಿಮಾ ನಿರ್ದೇಶಕರ ಬಗ್ಗೆ ಸಾಕಷ್ಟು ವದಂತಿಗಳು ಹರಿದಾಡುಲು ಆರಂಭವಾಗಿತ್ತು. ಇದೀಗ  ವೈರಲ್ ಬೆಡಗಿ ಮೊನಾಲಿಸಾ ಭೋಂಸ್ಲೆ ಅವರ ಬಗ್ಗೆ ಮಾನಹಾನಿ ಮಾಡಲಾಗುತ್ತಿದೆ ಎಂದು ಆರೋಪಿಸಿ ʻದಿ ಡೈರಿ ಆಫ್ ಮಣಿಪುರʼ ಚಿತ್ರದ ನಿರ್ದೇಶಕ ಸನೋಜ್ ಮಿಶ್ರಾ ನೀಡಿದ ದೂರು ಆಧರಿಸಿ ಯೂಟ್ಯೂಬ್ ಚಾನಲ್ ಮಾಲೀಕ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಮಾರ್ಚ್ 2ಕ್ಕೆ ಭಾರತ Vs ನ್ಯೂಜಿಲೆಂಡ್ –  ಟೀಂ ಇಂಡಿಯಾಗಿದ್ಯಾ ಚಾಂಪಿಯನ್ ಚಾನ್ಸ್?

ಸೋಶಿಯಲ್‌ ಮೀಡಿಯಾದಲ್ಲಿ ಮೊನಾಲಿಸಾ ಟ್ರೆಂಡ್‌ ಅದ ಬೆನ್ನಲ್ಲೇ ʻದಿ ಡೈರಿ ಆಫ್ ಮಣಿಪುರʼ  ಸಿನಿಮಾ ನಿರ್ಮಿಸುವುದಾಗಿ ಮಿಶ್ರಾ ಘೋಷಿಸಿದ್ದರು. ಈ ಬೆನ್ನಲ್ಲೇ ಮಿಶ್ರಾ ನಿರ್ದೇಶಿಸಿದ ಯಾವುದೇ ಸಿನಿಮಾಗಳು ಇಲ್ಲಿಯವರೆಗೆ ಬಿಡುಗಡೆಯಾಗಿಲ್ಲ. ಹಾಗಾಗಿ ಮಿಶ್ರಾ ಅವರು 16 ವರ್ಷದ ಮೊನಾಲಿಸಾ ಅವರ ವೃತ್ತಿಜೀವನವನ್ನು ಹಾಳು ಮಾಡಲು ಮುಂದಾಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದೀಗ ಯೂಟ್ಯೂಬ್ ಚಾನಲ್ ಮಾಲೀಕ ಸೇರಿದಂತೆ ಐವರು ಉದ್ದೇಶಪೂರ್ವಕವಾಗಿ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದು, ನನಗೆ ಘನತೆಗೆ ಕಳಂಕ ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಮಿಶ್ರಾ ಪ್ರತಿದೂರು ದಾಖಲಿಸಿದ್ದಾರೆ. ಸನೋಜ್ ಮಿಶ್ರಾ  ನೀಡಿದ ದೂರು ಆಧರಿಸಿ ಮುಂಬೈನ ಉಪನಗರದಲ್ಲಿರುವ ಅಂಬೋಲಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

ಮಿಶ್ರಾ ನೀಡಿದ ದೂರಿನ ಅನ್ವಯ ಭಾರತೀಯ ನ್ಯಾಯ ಸಂಹಿತೆಯ (BNS) ಸಂಬಂಧಿತ ಸೆಕ್ಷನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Shwetha M

Leave a Reply

Your email address will not be published. Required fields are marked *