ಸಿಎಂ ಸಿದ್ದರಾಮಯ್ಯ ಬೆಂಕಿ- ಮುಟ್ಟಿದ್ರೆ ಸುಟ್ಟು ಹೋಗ್ತಿರಾ – ಜಮೀರ್ ಅಹ್ಮದ್

ರಾಜ್ಯ ಕಾಂಗ್ರೆಸ್‌ನಲ್ಲಿ ಪಕ್ಷದೊಳಗಿನ ಆಂತರಿಕ ಕಲಹದ ನಡುವೆ ಜಮೀರ್ ಅಹ್ಮದ್ ಖಾನ್ ಸಿಎಂ ಸಿದ್ದರಾಮಯ್ಯ ಅವರನ್ನು ಮುಟ್ಟಲು ಧೈರ್ಯ ಮಾಡುವವರು ಸುಟ್ಟು ಬೂದಿಯಾಗುತ್ತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಧಿಕಾರ ಹಂಚಿಕೆ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆಯ ಬಗ್ಗೆ ನಡೆಯುತ್ತಿರುವ ಚರ್ಚೆಯ ಮಧ್ಯೆ ಜಮೀರ್ ಅಹ್ಮದ್ ಖಾನ್ ಅವರ ಈ ಮಾತು ಕಾಂಗ್ರೆಸ್‌ನಲ್ಲಿ ಕಿಚ್ಚು ಹಚ್ಚಿದೆ.
ಸಚಿವ ಜಮೀರ್ ಅಹ್ಮದ್ ಅವರು ಸಿಎಂ ಸಿದ್ದರಾಮಯ್ಯ ಅವರ ಆಪ್ತರಾಗಿರುವುದರಿಂದ, ಈ ಹೇಳಿಕೆ ಉಪಮುಖ್ಯಮಂತ್ರಿ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಗುರಿಯಾಗಿರಿಸಿಕೊಂಡು ನೀಡಲಾಗಿದೆ ಎಂದು ಪಕ್ಷದ ಒಳಗಿನವರು ಹೇಳುತ್ತಿದ್ದಾರೆ.
ಹಂಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಜಮೀರ್ ಅಹ್ಮದ್ ಖಾನ್, ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ. ಸಿಎಂ ಸ್ಥಾನ, ಕೆಪಿಸಿಸಿ ಸ್ಥಾನ ಖಾಲಿ ಇಲ್ಲ. ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಡಿಕೆ ಶಿವಕುಮಾರ್ ಇದ್ದಾರೆ, ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದಾರೆ ಎಂದು ಹೇಳಿದ್ದಾರೆ.
ಸಿಎಂ ಕುರ್ಚಿ ಖಾಲಿ ಇದ್ರೆ ತಾನೇ ಬದಲಾವಣೆಯ ಚರ್ಚೆ ಬರಬೇಕು, ಸಿಎಂ ಸಿದ್ದರಾಮಯ್ಯ ಕುರ್ಚಿ ಮುಟ್ಟೋಕೆ ಸಾಧ್ಯ ಏನ್ರಿ? ಅದೊಂಥರ ಬೆಂಕಿ ಅದು, ಆ ಬೆಂಕಿ ಮುಟ್ಟೋಕೆ ಸಾಧ್ಯವಿಲ್ಲಾ, ಮುಟ್ಟಿದ್ರೆ ಸುಟ್ಟೋಗ್ತಾರೆ. ಸಿದ್ದರಾಮಯ್ಯ ಬೆಂಕಿ ಇದ್ದಂತೆ, ನಾವು ಟಗರು ಅಂತಿವಿ ಎಂದಿದಿದ್ದಾರೆ. . ಹೈಕಮಾಂಡ್ ಬದಲಾವಣೆ ಮಾಡಬೇಕು ಅಂತ ನಿರ್ಧಾರ ಮಾಡಿದ್ರೆ ನಾವು ಅಭಿಪ್ರಾಯ ತಿಳಿಸಬಹುದು. ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧ ಎಂದು ಹೇಳಿದರು.