ಇಂದು ಸೋದರರ ನಡುವೆ ಕದನ- ಆರ್ಸಿಬಿ Vs ಮುಂಬೈ ಪಂದ್ಯದಲ್ಲಿ ಗೆಲ್ಲೋದು ಯಾರು?

ಇಂದು ಮುಂಬೈ ಇಂಡಿಯನ್ಸ್ ಹಾಗೂ ಆರ್‌ಸಿಬಿ ಪಂದ್ಯ ನಡೆಯಲಿದೆ. ಐಪಿಎಲ್ ಇತಿಹಾಸದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಒಟ್ಟು 33 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಮುಂಬೈ ಇಂಡಿಯನ್ಸ್ ತಂಡವು 19 ಪಂದ್ಯಗಳಲ್ಲಿ ವಿಜಯ ಸಾಧಿಸಿ ಆರ್ಸಿಬಿ ವಿರುದ್ಧ ಪಾರುಪತ್ಯ ಮೆರೆದಿದೆ.
ಇಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಇದೀಗ ಸಹೋದರರ ನಡುವಣ ಕದನವಾಗಿ ಮಾರ್ಪಟ್ಟಿದೆ. ಏಕೆಂದರೆ ಆರ್ಸಿಬಿ ತಂಡದಲ್ಲಿ ಕೃನಾಲ್ ಪಾಂಡ್ಯ ಇದ್ದರೆ, ಮುಂಬೈ ಇಂಡಿಯನ್ಸ್ ಬಳಗದಲ್ಲಿ ಹಾರ್ದಿಕ್ ಪಾಂಡ್ಯ ಇದ್ದಾರೆ. ಹೀಗಾಗಿ ಇಂದಿನ ಪಂದವು ಅಣ್ತಮ್ಮಂದಿರ ನಡುವಣ ಕಾದಾಟವಾಗಿ ಗುರುತಿಸಿಕೊಂಡಿದೆ.
ಇಬ್ಬರೂ ಆಟಗಾರರು ಈ ಹಿಂದೆ ಮುಂಬೈ ಇಂಡಿಯನ್ಸ್ ಪರ ಜೊತೆಯಾಗಿ ಆಡಿದ್ದರು. ಆ ಬಳಿಕ ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿದರೆ, ಕೃನಾಲ್ ಪಾಂಡ್ಯ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದರು.