ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಡಿಎಂಕೆ

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಡಿಎಂಕೆ

ಕೇಂದ್ರ ಸರ್ಕಾರವು ವಕ್ಫ್ ಕಾಯ್ದೆಗೆ ತಂದ ತಿದ್ದುಪಡಿಯನ್ನು ಪ್ರಶ್ನಿಸಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸುಪ್ರೀಂ ಕೋರ್ಟ್‌ನಲ್ಲಿ  ಅರ್ಜಿ ಸಲ್ಲಿಸಿದೆ. ಡಿಎಂಕೆಯ ಲೋಕಸಭಾ ಸಚೇತಕ ಮತ್ತು ಉಪ ಪ್ರಧಾನ ಕಾರ್ಯದರ್ಶಿ ಎ. ರಾಜಾ  ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ಪಕ್ಷದ ಪರವಾಗಿ ಅರ್ಜಿ ಸಲ್ಲಿಸಿದ್ದಾರೆ. ಡಿಎಂಕೆ ಮತ್ತು ಇತರ ಹಲವಾರು ರಾಜಕೀಯ ಪಕ್ಷಗಳಿಂದ ತೀವ್ರ ವಿರೋಧಕ್ಕೆ ಕಾರಣವಾದ ವಕ್ಫ್   ಮಸೂದೆ 2024 ರ ಲೋಕಸಭೆಯಲ್ಲಿ ಅಂಗೀಕಾರವಾದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಏಪ್ರಿಲ್ 2ರಂದು ಲೋಕಸಭೆಯಲ್ಲಿ ಭಾಷಣ ಮಾಡುವಾಗ ಅವರು ವಕ್ಫ್ ಮಸೂದೆಯ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದರು. ಇದು ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ನ್ಯಾಯಾಂಗ ಸಮಗ್ರತೆಗೆ ನೇರ ಬೆದರಿಕೆಯಾಗಿದೆ ಎಂದು ಅವರು ಟೀಕಿಸಿದ್ದರು.

 

Kishor KV

Leave a Reply

Your email address will not be published. Required fields are marked *