ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ಉಡುಪಿ ಫಸ್ಟ್‌.. ದಕ್ಷಿಣ ಕನ್ನಡ ಸೆಕೆಂಡ್‌

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ಉಡುಪಿ ಫಸ್ಟ್‌.. ದಕ್ಷಿಣ ಕನ್ನಡ ಸೆಕೆಂಡ್‌

2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ರಾಜ್ಯದಲ್ಲಿ ಒಟ್ಟು 73.45% % ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಇದನ್ನೂ ಓದಿ: CSKಗಾಗಿ ಧೋನಿ ಸಾಮ್ರಾಜ್ಯ ಪತನ – 3 ICC, 5 IPL ಟ್ರೋಫಿಗಿಲ್ವಾ ಬೆಲೆ?

ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ  ಮಲ್ಲೇಶ್ವರದಲ್ಲಿರುವ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಮಧ್ಯಾಹ್ನ 1:30 ಗಂಟೆಗೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಿದೆ.

ದ್ವಿತೀಯ ಪಿಯುಸಿ ಪರಿಕ್ಷೆ ಕಳೆದ ಮಾರ್ಚ್ 1 ರಿಂದ ಆರಂಭಗೊಂಡು ಮಾರ್ಚ್ 20 ರಂದು ಮುಕ್ತಾಯಗೊಂಡಿತ್ತು. 6,81,079 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 93.90% ಸಾಧನೆ ಮಾಡುವ ಮೂಲಕ  ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ.  ಎರಡನೇ ಸ್ಥಾನ ದಕ್ಷಿಣ ಕನ್ನಡ (93.57%),  ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(85.36%) ಪಡೆದುಕೊಂಡಿದೆ. ಕೊನೆ ಸ್ಥಾನ ಯಾದಗಿರಿ (73.45%)  ಪಡೆದುಕೊಂಡಿದೆ.

ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಎಕ್ಸ್‌ಪರ್ಟ್‌ ಕಾಲೇಜಿನ ಶ್ರೇಯಾ – 597 ಅಂಕ ಪಡೆದು ಮೊದಲ ಸ್ಥಾನ ಪಡೆದರೆ ಕಲಾ ವಿಭಾಗದಲ್ಲಿ ಬಳ್ಳಾರಿಯ ಇಂದೂ ಪಿಯು ಕಾಲೇಜಿನ ಸಂಜನಾ ಬಾಯಿ 597 ಮೊದಲ ಸ್ಥಾನ ಪಡೆದಿದ್ದಾರೆ.  ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೆನರಾ ಕಾಲೇಜಿನ ದೀಪಾಶ್ರೀ 599 ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ.

ಯಾವ ಶ್ರೇಣಿಯಲ್ಲಿ ಎಷ್ಟು ಮಂದಿ ಪಾಸ್‌?

  • ಉನ್ನತ ಶ್ರೇಣಿ- 1,00,571
  • ಪ್ರಥಮ ದರ್ಜೆ- 2,78,054
  • ದ್ವೀತಿಯ ದರ್ಜೆ-70969
  • ತೃತೀಯ ದರ್ಜೆ-18845

Shwetha M