ಇಂದಿನಿಂದ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ – ಗಂಟೆಗೆ 50 ಕಿಮೀ ವೇಗದಲ್ಲಿ ಬೀಸಲಿದೆ ಗಾಳಿ!

ರಾಜ್ಯದ ಹಲವೆಡೆ ಬಿಸಿಲಿನ ಝಳ ಹೆಚ್ಚಾಗಿದೆ. ಈ ಮಧ್ಯೆ ಗುಡುಗು ಸಹಿತ ಮಳೆ ಆಗುತ್ತಿದೆ. ಇಂದಿನಿಂದ ರಾಜ್ಯದಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: ಡ್ರೋನ್ನ ಎತ್ತಿ ಮುದ್ದಾಡಿದ ಗಗನಾ.. – ತಬಲಾ ತಬಲಾ ಎಂದು ಬಡಿದ ಪ್ರತಾಪ್
ಶನಿವಾರದಿಂದ ಏ.16ರ ವರೆಗೆ ಭಾರೀ ಗಾಳಿ, ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಗಾಳಿ ಪ್ರತಿ ಗಂಟೆಗೆ 40-50 ಕಿಮಿ ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎರಡು ದಿನ ಹಗುರ ಮಳೆಯಾಗಲಿದೆ. ನಗರದ ಕೆಲವೆಡೆ ಮೋಡಕವಿದ ವಾತಾವರಣ ಇದ್ದು, ಸಂಜೆಯ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿತ್ರದುರ್ಗ, ಕೋಲಾರ, ತುಮಕೂರು, ಬೆಳಗಾವಿ, ಚಾಮರಾಜನಗರ, ಹಾಸನ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.