ಬರ್ತ್ಡೇ ದಿನವೇ ಮುದ್ದಾದ ಮಗಳಿಗೆ ನಾಮಕರಣ ಮಾಡಿದ ಕೆಎಲ್ ರಾಹುಲ್ – ಕ್ರಿಕೆಟರ್ ಮಗಳ ಹೆಸರೇನು?

ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರ ಕೆ.ಎಲ್ ರಾಹುಲ್ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 33ನೇ ವರ್ಷಕ್ಕೆ ಕಾಲಿಟ್ಟಿರುವ ಕ್ರಿಕೆಟರ್ ಕನ್ನಡಿಗ ಬರ್ತ್ಡೇ ಸೆಲೆಬ್ರೆಷನ್ ಮೂಡ್ನಲ್ಲಿದ್ದಾರೆ. ಇದರ ಜೊತೆಯೇ ಮಾರ್ಚ್ 24 ರಂದು ಜನಿಸಿದ ತಮ್ಮ ಮುದ್ದಾದ ಮಗುವಿಗೆ ನಾಮಕರಣ ಕೂಡ ಮಾಡಿದ್ದಾರೆ.
ಇದನ್ನೂ ಓದಿ: ವೀರಚಂದ್ರಹಾಸದಲ್ಲಿ ಶಿವಣ್ಣನ ಪಾತ್ರವೇನು? ಯಕ್ಷಗಾನದ ವೇಷದಲ್ಲಿ ಅಪ್ಪು, ಅಣ್ಣಾವ್ರು
ನಟಿ ಆಥಿಯಾ ಶೆಟ್ಟಿ ಮಾರ್ಚ್ 24 ರಂದು, ಅಥಿಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಈ ಬಗ್ಗೆ ದಂಪತಿಗಳು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮ ಅಭಿಮಾನಿಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದರು. ಹೀಗಾಗಿಯೇ ಕೆಎಲ್ ರಾಹುಲ್ ಐಪಿಎಲ್ನಲ್ಲಿ ತಮ್ಮ ತಂಡದ ಮೊದಲ ಪಂದ್ಯವನ್ನು ಆಡಲು ಸಾಧ್ಯವಾಗಿರಲಿಲ್ಲ. ಇದೀಗ ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಮತ್ತೊಂದು ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮ ಮಗಳ ಹೆಸರನ್ನು ಬಹಿರಂಗಪಡಿಸಿದ್ದಾರೆ. ಈ ಪೋಸ್ಟ್ ನಲ್ಲಿ ಅಥಿಯಾ ಶೆಟ್ಟಿ ಮತ್ತು ಅವರ ಮಗಳೊಂದಿಗಿನ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದರೊಂದಿಗೆ, ಅವರು ಶೀರ್ಷಿಕೆಯಲ್ಲಿ ತಮ್ಮ ಮಗಳ ಹೆಸರನ್ನು ಉಲ್ಲೇಖಿಸಿದ್ದು, ‘ನಮ್ಮ ಮಗಳು, ನಮ್ಮ ಸರ್ವಸ್ವ. ಇವಾರಾ- ದೇವರ ಕೊಡುಗೆ. ಇವಾರಾ ಎಂಬುದು ಸಂಸ್ಕೃತ ಪದವಾಗಿದ್ದು, ಇದರ ಅರ್ಥ ದೇವರ ಕೊಡುಗೆ ಎಂದು ಬರೆದುಕೊಂಡಿದ್ದಾರೆ.
ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಜನವರಿ 2023 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರಯ. ಅವರ ವಿವಾಹ ಸಮಾರಂಭದಲ್ಲಿ ಕುಟುಂಬ ಸದಸ್ಯರು ಮತ್ತು ಆಪ್ತರು ಮಾತ್ರ ಭಾಗವಹಿಸಿದ್ದರು, ಇದಕ್ಕೂ ಮೊದಲು ಇಬ್ಬರೂ ದೀರ್ಘಕಾಲ ಡೇಟಿಂಗ್ ಮಾಡಿದ್ದರು. ಆ ಬಳಿಕ 2024 ರ ನವೆಂಬರ್ನಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದ ಕೆಎಲ್ ರಾಹುಲ್ ಮತ್ತು ಅಥಿಯಾ ತಾವು ಪೋಷಕರಾಗಲಿರುವ ಮಾಹಿತಿ ಹಂಚಿಕೊಂಡಿದ್ದರು.