ಪಾಕಿಸ್ತಾನದ ಬುಡಕ್ಕೆ `ಜಲ’ಬಾಂಬ್ – ಭಾರತದಿಂದ ಪಾಕ್‌ಗೆ ಹರಿಯೋ ನದಿಗಳ ನೀರು ಸಂಪೂರ್ಣ ಬಂದ್‌

ಪಾಕಿಸ್ತಾನದ ಬುಡಕ್ಕೆ `ಜಲ’ಬಾಂಬ್ – ಭಾರತದಿಂದ ಪಾಕ್‌ಗೆ ಹರಿಯೋ ನದಿಗಳ ನೀರು ಸಂಪೂರ್ಣ ಬಂದ್‌

ಪಹಲ್ಗಾಮ್‌ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಅಟ್ಟಹಾಸ ಮೆರೆದಿದ್ರು. ಉಗ್ರರ ದಾಳಿ ಬೆನ್ನಲ್ಲೇ ಭಾರತ, ಪಾಕಿಸ್ತಾನದ ಮೇಲೆ ಕಠಿಣ ಕ್ರಮಗಳನ್ನ ತೆಗೆದುಕೊಳ್ಳುತ್ತಿದೆ. ಇದೀಗ ಭಾರತ ಪಾಕಿಸ್ತಾನದ ಬುಡಕ್ಕೆ ಜಲ ಬಾಂಬ್ ಹಾಕಿದೆ. ಸಿಂಧೂ ನದಿಯ ಒಪ್ಪಂದವನ್ನು ಭಾರತ ಅಮಾನತಿನಲ್ಲಿಟ್ಟ ಬೆನ್ನಲ್ಲೇ ಚೆನಾಬ್ ನದಿಗೆ ಜಲಾಶಯಗಳಿಂದ ನೀರು ಹರಿಸುವುದನ್ನೇ ನಿಲ್ಲಿಸಿದೆ.

ಇದನ್ನೂ ಓದಿ: ‘ಭಾರತದೊಂದಿಗೆ ಯುದ್ಧ ನಡೆದರೆ ನಾನು ಇಂಗ್ಲೆಂಡ್‌ಗೆ ಹೋಗುತ್ತೇನೆ’ – ಪಾಕಿಸ್ತಾನ ಸಂಸದ ಶೇರ್ ಅಫ್ಜಲ್ ಖಾನ್ ಮರ್ವಾತ್

ಚೆನಾಬ್ ನದಿಗೆ ಅಡ್ಡಲಾಗಿ ರಾಮಬನದಲ್ಲಿ ಬಾಗ್ಲಿಹಾರ್ ಮತ್ತು ರಿಯಾಸಿಯಲ್ಲಿ ಸಲಾಲ್ ಜಲವಿದ್ಯುತ್ ಅಣೆಕಟ್ಟುಗಳನ್ನು ನಿರ್ಮಾಣ ಮಾಡಲಾಗಿದೆ. ಈಗ ಈ ಎರಡು ಅಣೆಕಟ್ಟಿನಿಂದ ನೀರು ಹರಿಸುವುದನ್ನು ನಿಲ್ಲಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಝೀಲಂ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಿಶನ್‌ಗಂಗಾ ಅಣೆಕಟ್ಟಿನಿಂದಲೂ ನೀರು ಹರಿಸುವುದನ್ನು ನಿಲ್ಲಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ವರದಿಯಾಗಿದೆ.

ಮಾಧ್ಯಮಕ್ಕೆ ಸ್ಥಳೀಯ ವ್ಯಕ್ತಿ ದಿನೇಶ್‌ ಪ್ರತಿಕ್ರಿಯಿಸಿ, ಸರ್ಕಾರ ಪಾಕಿಸ್ತಾನಕ್ಕೆ ನೀರು ಹರಿಯುವುದನ್ನು ನಿಲ್ಲಿಸಿದ್ದಕ್ಕೆ ನಮಗೆ ಸಂತೋಷವಾಗಿದೆ. ಪಾಕಿಸ್ತಾನದ ಪಹಲ್ಗಾಮ್‌ನಲ್ಲಿ ಅವರು ನಮ್ಮ ಪ್ರವಾಸಿಗರನ್ನು ಕೊಂದ ರೀತಿಗೆ ಸೂಕ್ತ ಉತ್ತರ ನೀಡಬೇಕು. ಸರ್ಕಾರ ತೆಗೆದುಕೊಳ್ಳುವ ಯಾವುದೇ ನಿರ್ಧಾರದಲ್ಲಿ ನಾವು ಅದರೊಂದಿಗಿದ್ದೇವೆ ಎಂದು ಹೇಳಿದರು.

ಕೆಲವು ದಿನಗಳ ಹಿಂದೆ ಬಗ್ಲಿಹಾರ್ ಜಲಾಶಯ ಮೇಲ್ಭಾಗದಲ್ಲಿ ಭಾರಿ ಮಳೆಯಾಗಿದ್ದರಿಂದ ನೀರು ಹರಿಸಲು ಗೇಟ್‌ ತಗೆಯಲಾಗಿತ್ತು. ಇದರಿಂದ ತಗ್ಗು ಪ್ರದೇಶವಾಗಿರುವ ರಿಯಾಸಿ ಮತ್ತು ಅಖ್ನೂರ್‌ನ ತಗ್ಗು ಪ್ರದೇಶಗಳಲ್ಲಿ ಪ್ರವಾಹ ನಿರ್ಮಾಣವಾಗಿತ್ತು. ಪಾಕಿಸ್ತಾನದಲ್ಲೂ ಸ್ವಲ್ಪ ಸಮಸ್ಯೆಯಾಗಿತ್ತು.

ಇಂದು ಬೆಳಗ್ಗೆ ಬಾಗ್ಲಿಹಾರ್ ಅಣೆಕಟ್ಟಿನ ಗೇಟ್‌ಗಳನ್ನು ಮುಚ್ಚಿದ್ದರಿಂದ ನೀರಿನ ಹರಿವು ಸಂಪೂರ್ಣವಾಗಿ ನಿಲ್ಲಿಸಲಾಗಿದೆ. ಇದರೊಂದಿಗೆ ರಾಮಬನ್‌ನಲ್ಲಿರುವ ಚೆನಾಬ್ ನದಿ ಪಾತ್ರ ಮತ್ತು ಜಲಾಶಯದ ಕೆಳಭಾಗದ ಸಂಪೂರ್ಣವಾಗಿ ಬತ್ತಿ ಹೋದಂತೆ ಕಾಣುತ್ತಿದೆ.

ರಿಯಾಸಿಯಲ್ಲಿರುವ ಸಲಾಲ್ ಅಣೆಕಟ್ಟಿನಿಂದ ನೀರಿನ ಹರಿವು ಕಡಿಮೆಯಾಗಿದೆ ಮತ್ತು ಅಖ್ನೂರ್ ಮತ್ತು ಜೌರಿಯನ್‌ನಲ್ಲಿ ನೀರಿನ ಮಟ್ಟವೂ ಗಣನೀಯವಾಗಿ ಕಡಿಮೆಯಾಗಿದೆ. ಇದರಿಂದಾಗಿ ಪಾಕಿಸ್ತಾನದಲ್ಲಿ ನೀರಿನ ಬಿಕ್ಕಟ್ಟನ್ನು ಉಲ್ಬಣಗೊಳ್ಳುವ ಸಾಧ್ಯತೆಯಿದೆ.

ಅಖ್ನೂರ್ ಪ್ರದೇಶದಲ್ಲಿ ನೀರಿನ ಮಟ್ಟ ಭಾರೀ ಇಳಿಕೆಯಾಗಿದ್ದು ಜನರು ಮೊದಲ ಬಾರಿಗೆ ನದಿಯನ್ನು ದಾಟುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Shwetha M

Leave a Reply

Your email address will not be published. Required fields are marked *