ಮಳೆಯಿಂದ ಡೆಲ್ಲಿ ವಿರುದ್ಧದ ಪಂದ್ಯ ರದ್ದು – ಪ್ಲೇ ಆಫ್ ರೇಸ್‌ನಿಂದ ಹೈದರಾಬಾದ್ ಔಟ್!

ಸತತ ಸೋಲುಗಳಿಂದ ಕಂಗೆಟ್ಟಿದ್ದ ಹೈದರಾಬಾದ್‌ಗೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಅತ್ಯಾಕರ್ಷಕ ಬೌಲಿಂಗ್ ದಾಳಿ ನಡೆಸಿ, ಇನ್ನೇನು ಪಂದ್ಯವನ್ನು ಸುಲಭದಲ್ಲಿ ಗೆದ್ದೇ ಬಿಟ್ಟೆವು ಎಂಬಂತಿದ್ದ ಸನ್‌ರೈಸರ್ಸ್ ಹೈದರಾಬಾದ್‌ಗೆ ಮಳೆರಾಯ ಚೇತರಿಸಿಕೊಳ್ಳಲಾಗದ ಶಾಕ್ ಕೊಟ್ಟಿದ್ದಾನೆ. ಪರಿಣಾಮ ಸನ್‌ರೈಸರ್ಸ್ ಹೈದರಾಬಾದ್ ಈ ಬಾರಿ ಐಪಿಎಲ್‌ನಿಂದಲೇ ಹೊರಬಿದ್ದಿದೆ.
ಇದನ್ನೂ ಓದಿ: ಫಿಟ್ನೆಸ್ ಆಗಿಲ್ಲ, ಆರೋಗ್ಯ ಸರಿಯಿಲ್ಲ!! ಶತ್ರುಸೇನೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ!
ವಾಸ್ತವವಾಗಿ ಹೈದರಾಬಾದ್‌ನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯ ಮಳೆಯಿಂದಾಗಿ ರದ್ದಾಯಿತು. ಇದಾದ ನಂತರ ಎರಡೂ ತಂಡಗಳಿಗೆ ತಲಾ ಒಂದು ಅಂಕ ನೀಡಲಾಯಿತು. ಈಗ ಡೆಲ್ಲಿ ತನ್ನ ಖಾತೆಯಲ್ಲಿ 13 ಅಂಕಗಳನ್ನು ಹೊಂದಿದ್ದು ಐದನೇ ಸ್ಥಾನದಲ್ಲಿದ್ದರೆ, ಹೈದರಾಬಾದ್ ಏಳು ಅಂಕಗಳೊಂದಿಗೆ ಎಂಟನೇ ಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದೆಹಲಿ ತಂಡ 20 ಓವರ್‌ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿತು. ಆದರೆ, ಮಳೆಯಿಂದಾಗಿ ಹೈದರಾಬಾದ್ ತಂಡದ ಇನಿಂಗ್ಸ್ ಆರಂಭವಾಗಲಿಲ್ಲ. ಇದರೊಂದಿಗೆ, ಪ್ಯಾಟ್ ಕಮ್ಮಿನ್ಸ್ ತಂಡವು ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿದ್ದು, ಅಕ್ಷರ್ ಪಟೇಲ್ ತಂಡದ ಭರವಸೆ ಇನ್ನೂ ಜೀವಂತವಾಗಿದೆ.
ಈ ಪಂದ್ಯದಲ್ಲಿ ಹೈದರಾಬಾದ್ ನಾಯಕ ಪ್ಯಾಟ್ ಕಮ್ಮಿನ್ಸ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 7 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿತು. ದೆಹಲಿ ಪರ ಟ್ರಿಸ್ಟಾನ್ ಸ್ಟಬ್ಸ್ ಮತ್ತು ಅಶುತೋಷ್ ಶರ್ಮಾ ತಲಾ 41 ರನ್ಗಳ ಇನ್ನಿಂಗ್ಸ್ ಆಡಿದರೆ, ವಿಪ್ರಾಜ್ ನಿಗಂ 18 ರನ್ಗಳ ಕಾಣಿಕೆ ನೀಡಿದರು. ಉಳಿದಂತೆ ತಂಡದ ಯಾವೊಬ್ಬ ಬ್ಯಾಟರ್ಗೂ ಗಮನಾರ್ಹ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ.
ಡೆಲ್ಲಿ ತಂಡವನ್ನು ಅಲ್ಪ ರನ್ಗಳಿಗೆ ಕಟ್ಟಿಹಾಕಿದ್ದ ಹೈದರಾಬಾದ್ ಅರ್ಧಪಂದ್ಯವನ್ನು ಗೆದ್ದ ಖುಷಿಯಲ್ಲಿತ್ತು. ಆದರೆ ಮೊದಲ ಇನ್ನಿಂಗ್ಸ್ ಮುಗಿದ ತಕ್ಷಣ, ಹೈದರಾಬಾದ್‌ನಲ್ಲಿ ಮಳೆ ಸುರಿಯಲು ಪ್ರಾರಂಭಿಸಿತು. ಈ ಮಳೆ ಬಹಳ ಸಮಯದ ನಂತರ ನಿಂತಿತು. ಆಗಾಗಿ ಪಂದ್ಯವನ್ನು ಆರಂಭಿಸಲು ಮೈದಾನದ ಸಿಬ್ಬಂದಿ ತಮ್ಮ ಕೈಲಾದಷ್ಟು ಪ್ರಯತ್ನಿಸಿದರಾದರೂ ಅದರಲ್ಲಿ ಯಶಸ್ವಿಯಾಗಲಿಲ್ಲ. ಅಂತಿಮವಾಗಿ ಅಂಪೈರ್ಗಳು ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಿದರು.

ನೋಡಿರಿ

