ಪಹಲ್ಗಾಮ್ ದಾಳಿ ಬೆನ್ನಲ್ಲೇ ಯೂಟರ್ನ್‌ ಹೊಡೆದ ಚೀನಾ –  ನಿಮ್ಮನ್ನು ಬಿಟ್ಟುಕೊಡಲ್ಲ ಎಂದು ಪಾಕ್ ಗೆ ಅಭಯ ನೀಡಿದ ಡ್ರ್ಯಾಗನ್‌ ರಾಷ್ಟ್ರ!

ಪಹಲ್ಗಾಮ್ ದಾಳಿ ಬೆನ್ನಲ್ಲೇ ಯೂಟರ್ನ್‌ ಹೊಡೆದ ಚೀನಾ –  ನಿಮ್ಮನ್ನು ಬಿಟ್ಟುಕೊಡಲ್ಲ ಎಂದು ಪಾಕ್ ಗೆ ಅಭಯ ನೀಡಿದ ಡ್ರ್ಯಾಗನ್‌ ರಾಷ್ಟ್ರ!

ಪಹಲ್ಗಾಮ್‌ನಲ್ಲಿ ನಡೆದ ಹಿಂದೂಗಳ ನರಮೇಧದ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಮತ್ತಷ್ಟು ಬಿಗುಡಾಯಿಸಿದೆ. ಒಂದು ಕಡೆ ಭಾರತಕ್ಕೆ ರಷ್ಯಾ, ಜಪಾನ್ ಬೆಂಬಲಿ ನೀಡಿದರೆ, ಇನ್ನೊಂದು ಕಡೆ ನೆರೆ ರಾಷ್ಟ್ರ ಚೀನಾ ಪಾಕ್‌ಗೆ ಬೆಂಬಲ ನೀಡುವುದಾಗಿ ಹೇಳಿದೆ.

ಇದನ್ನೂ ಓದಿ : ಮಳೆಯಿಂದ ಡೆಲ್ಲಿ ವಿರುದ್ಧದ ಪಂದ್ಯ ರದ್ದು – ಪ್ಲೇ ಆಫ್‌ ರೇಸ್‌ನಿಂದ  ಹೈದರಾಬಾದ್‌ ಔಟ್!

ಪಾಕ್ ಅಧ್ಯಕ್ಷ ಅಲಿ ಜರ್ದಾರಿ ಅವರನ್ನು ಪಾಕಿಸ್ತಾನದಲ್ಲಿನ ಚೀನಾ ರಾಯಭಾರಿ ಜಿಯಾಂಗ್ ಜೈಡಾಂಗ್ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಚೀನಾ ಮತ್ತು ಪಾಕಿಸ್ತಾನದ ಸ್ನೇಹ ಶಾಶ್ವತವಾಗಿದೆ. ಕಾಲ ಕಾಲಕ್ಕೆ ಪರೀಕ್ಷೆಗೆ ಒಳಗಾಗಿದ್ದರೂ ಯಾವಾಗಲೂ ಸವಾಲಿನ ಸಮಯದಲ್ಲಿ ಪರಸ್ಪರ ಬೆಂಬಲಿಸಿದ ಸ್ನೇಹ ನಮ್ಮದಾಗಿದೆ. ಹೀಗಾಗಿ ದಕ್ಷಿಣ ಏಷ್ಯಾ ಶಾಂತಿಗಾಗಿ ಪಾಕ್‌ಗೆ ನಮ್ಮ ಬೆಂಬಲವಿದೆ ಎಂದಿದ್ದಾರೆ.

ಪಾಕ್ ಬೆಂಬಲಿಸುವುದಾಗಿ ತಿಳಿಸಿ ಮಾತನಾಡಿದ ಜರ್ದಾರಿ, ಭಾರತವು ಬೇಜಾವಾಬ್ದಾರಿ ಮತ್ತು ಆಕ್ರಮಣಕಾರಿ ನಡೆಯನ್ನು ಅನುಸರಿಸುತ್ತಿದೆ ಎಂದು ಕಿಡಿಕಾರಿದರು.

Shwetha M